ರಾಜ್ಯಪಾಲರಿಗೆ ಸಿಟಿ ರವಿ ದೂರು: ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯ, ಸೂಕ್ತ ಭದ್ರತೆಗೆ ಮನವಿ

ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ರಾಜ್ಯಪಾಲರಿಗೆ 8 ಪುಟಗಳ ದೂರು ಸಲ್ಲಿಸಿದ್ದಾರೆ. ಪೊಲೀಸ್ ದೌರ್ಜನ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಫೇಕ್ ಎನ್‌ಕೌಂಟರ್ ಸಂಚು ಮತ್ತು ಅಕ್ರಮ ಬಂಧನದ ಬಗ್ಗೆಯೂ ದೂರಿನಲ್ಲಿ ವಿವರಿಸಲಾಗಿದೆ. ಸಂಬಂಧಿತ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ತನಗೆ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ.

ರಾಜ್ಯಪಾಲರಿಗೆ ಸಿಟಿ ರವಿ ದೂರು: ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯ, ಸೂಕ್ತ ಭದ್ರತೆಗೆ ಮನವಿ
ರಾಜ್ಯಪಾಲರಿಗೆ ಸಿಟಿ ರವಿ ದೂರು: ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯ, ಸೂಕ್ತ ಭದ್ರತೆಗೆ ಮನವಿ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 30, 2024 | 4:29 PM

ಬೆಂಗಳೂರು, ಡಿಸೆಂಬರ್​ 30: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿ.ಟಿ.ರವಿ (CT Ravi) ನಡುವಿನ ಜಟಾಪಟಿ ರಾಜ್ಯಪಾಲರ ಅಂಗಳ ತಲುಪಿದೆ. ಇಂದು ಗರ್ವನರ್ ಅವರನ್ನು ಭೇಟಿ ಮಾಡಿದ ಸಿಟಿ ರವಿ, ಅಂದು ಪರಿಷತ್​ನಲ್ಲಿ ಏನೆಲ್ಲಾ ಆಯ್ತು, ತಮ್ಮ ಬಂಧನದ ಬಳಿಕ ನಡೆದ ಬೆಳವಣಿಗೆಗಳ ಬಗ್ಗೆ ಇಂಚಿಂಚು ಮಾಹಿತಿ ನೀಡಿ ಬಂದಿದ್ದಾರೆ ಇದರ ಬೆನ್ನಲ್ಲೇ ಇದೀಗ ರಾಜ್ಯಪಾಲರಿಗೆ 8 ಪುಟಗಳ ದೂರು ನೀಡಿದ್ದು, ತಮ್ಮ ಮೇಲಿನ ಪೊಲೀಸ್ ದೌರ್ಜನ್ಯದ ಕುರಿತು ಡಿಜಿ & ಐಜಿಪಿಯಿಂದ ಸ್ಪಷ್ಟನೆ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಸಿ.ಟಿ.ರವಿ ದೂರಿನಲ್ಲೇನಿದೆ?

ಡಿ.19ರಂದು ಇಡೀ ರಾತ್ರಿ ನಡೆದ ಪೊಲೀಸರ ಅಮಾನವೀಯ ವರ್ತನೆ ಮಾಡಿದ್ದಾರೆ. ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೆಳಗಾವಿ ನಗರ ಪೊಲೀಸ್ ಕಮಿಷನರ್​​ ಯಡಾ ಮಾರ್ಟಿನ್​, ಎಸ್‌ಪಿ ಗುಳೇದ್ ಮತ್ತು ಇತರೆ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದು, ತಮಗೆ ಪ್ರಾಣಾಪಾಯ ಇದ್ದು, ಸೂಕ್ತ ಭದ್ರತೆ ಕೊಡಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ರಾಷ್ಟ್ರಪತಿ, ಕೇಂದ್ರ ಗೃಹ ಇಲಾಖೆ ಗಮನಕ್ಕೂ ತರುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದು, ದೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧವೂ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ರಾಜಭವನದ ಅಂಗಳಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್, ಸಿಟಿ ರವಿ ಪ್ರಕರಣದ ಚೆಂಡು!

ದೂರಿನಲ್ಲಿ ಫೇಕ್ ಎನ್‌ಕೌಂಟರ್ ವಿಚಾರ ಪ್ರಸ್ತಾಪಿಸಿರುವ ಸಿ.ಟಿ.ರವಿ, ಡಿಕೆ ಶಿವಕುಮಾರ್​ ಸೂಚನೆ ಮೇರೆಗೆ ಪೊಲೀಸರು ಸುಪಾರಿ ಕಿಲ್ಲರ್ ರೀತಿ ವರ್ತಿಸಿದರು. ನಿಗೂಢ ಸ್ಥಳಗಳಿಗೆ ಕರೆದೊಯ್ದು ಫೇಕ್ ಎನ್‌ಕೌಂಟರ್ ಮಾಡಲು ಸಂಚು ರೂಪಿಸಿದ್ದರು. ಪೊಲೀಸರು ಸುವರ್ಣಸೌಧದೊಳಗೆ ಪ್ರವೇಶ ಮಾಡಿ ಬಂಧಿಸಿದ್ದು, ಅಕ್ರಮ ನನ್ನ ಹಕ್ಕು ಚ್ಯುತಿ ಆಗಿದೆ ಎಂದಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಕೊಲೆ ಮಾಡಿವುದಾಗಿ ಧಮ್ಕಿ ಹಾಕಿದ್ದು, ಅವರ ಬಂಟರಿಂದಲು ಕೂಡ ಫೇಕ್ ಎನ್‌ಕೌಂಟರ್ ಸಂಚು ಆರೋಪ ಮಾಡಿದ್ದಾರೆ. ಸದನದ ವ್ಯಾಪ್ತಿಯಲ್ಲಿ ನಡೆದ ಘಟನೆ ಬಗ್ಗೆ ತನಿಖೆ ನಡೆಸುವ ಅಧಿಕಾರ ಸಿಐಡಿಗಿಲ್ಲ. ಘಟನೆ ನಡೆದ ಸ್ಥಳ ಸಿಐಡಿ ವ್ಯಾಪ್ತಿಗೂ ಬರುವುದಿಲ್ಲ. ನನ್ನ ಬಂಧನ ಅಕ್ರಮ, ಕಾನೂನು ವಿರೋಧಿ ಅಂತ ಹೈಕೋರ್ಟ್ ಅಭಿಪ್ರಾಯಪಟ್ಟಿದೆ ಎಂದು ಸುದೀರ್ಘ ದೂರಿನಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಹೆಬ್ಬಾಳ್ಕರ್-ರವಿ ಪ್ರಕರಣಕ್ಕೆ ಇತಿಶ್ರೀ ಹಾಡಬೇಕೆಂದಿದ್ದೆ, ಆದರೆ ಎಲ್ಲರೂ ತಮ್ಮ ನಿಲುವುಗಳಿಗೆ ಬದ್ಧರಾಗಿದ್ದಾರೆ: ಬಸವರಾಜ ಹೊರಟ್ಟಿ, ಸಭಾಪತಿ

ಇನ್ನು ಗವರ್ನರ್ ಭೇಟಿ ಬಳಿಕ ಮಾತಾಡಿದ್ದ ಸಿ.ಟಿ.ರವಿ, ನನ್ನ ಕಬ್ಬಿನ ಗದ್ದೆ, ಕ್ರಷರ್​ಗೆ ಕರ್ಕೊಂಡು ಹೋಗಿ ಎನ್​ಕೌಂಟರ್ ಮಾಡಲು ಯತ್ನಿಸಿದ್ದರು. ಒಂದೋ ಹತ್ಯೆ ಮಾಡಬೇಕು, ಇಲ್ಲವೇ ಆತ್ಮಹತ್ಯೆಗೆ ಶರಣಾಗಬೇಕು ಅನ್ನುವಂತೆ ಕಾಟ ಕೊಟ್ಟರು ಅಂತಾ ಆರೋಪಿಸಿದ್ದಾರೆ. ಇತ್ತ ಎಂಎಲ್​ಸಿ ರವಿಕುಮಾರ್ ಸಹಾ ಆಕ್ರೋಶ ಹೊರ ಹಾಕಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ