AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಶಿವಾನಂದ ಪಾಟೀಲ್ ಮೇಲೆ ನೋಟುಗಳ ಸುರಿಮಳೆ: ಸಚಿವರ ಸಮರ್ಥನೆ ಹೀಗಿದೆ ನೋಡಿ

ರಾಜ್ಯದಲ್ಲಿ ಬರಗಾಲ ಇದೆ. ವಿದ್ಯುತ್ ಅಭಾವವಿದೆ. ವಿದ್ಯುತ್ ಇಲ್ಲದೇ ರೈತರ ಬೆಳೆಗಳು ಹಾಳಾಗುತ್ತಿವೆ. ಇಂಥ ಸಂದರ್ಭದಲ್ಲಿ ಸಚಿವರ ಮೇಲೆ ನೋಟಿನ ಮಳೆಗೈದರೂ ಸಚಿವರು ಯಾವುದೇ ಪ್ರತಿರೋಧ‌ ತೋರಿಲ್ಲ. ಬರದ ಮಧ್ಯೆ ಸಚಿವ ಶಿವಾನಂದ ಪಾಟೀಲ ನೋಟುಗಳನ್ನು ತಮ್ಮ ಮೇಲೆ‌ ಹಾರಿಸಿದರೂ ತಡೆಯಲಿಲ್ಲಾ ಎಂದು ವಿರೋಧ ಪಕ್ಷಗಳ ನಾಯಕರು ಟೀಕಿಸಿದ್ದಾರೆ.

ಸಚಿವ ಶಿವಾನಂದ ಪಾಟೀಲ್ ಮೇಲೆ ನೋಟುಗಳ ಸುರಿಮಳೆ: ಸಚಿವರ ಸಮರ್ಥನೆ ಹೀಗಿದೆ ನೋಡಿ
ಸಚಿವ ಶಿವಾನಂದ ಪಾಟೀಲ್​ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 18, 2023 | 2:30 PM

Share

ವಿಜಯಪುರ / ಬೆಂಗಳೂರು, ಅಕ್ಟೋಬರ್ 18: ಸಚಿವ ಶಿವಾನಂದ ಪಾಟೀಲ್ (Shivanand Patil) ಮೇಲೆ ನೋಟುಗಳ (Currency Notes) ಸುರಿಮಳೆಗೈದ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮೂರ್ನಾಲ್ಕು ದಿನಗಳ ಹಿಂದೆ ನಡೆದಿರೋ ವಿಚಾರ ಇದಾಗಿದ್ದು, ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ವಿಚಾರವಾಗಿ ಇದೀಗ ಸಚಿವರು ಸ್ಪಷ್ಟನೆ ನೀಡಿದ್ದು, ನಾನು ಮದುವೆಗೆ ಹೋಗಿದ್ದೆ. ಅಲ್ಲಿಯವರ ಕ್ರಮವನ್ನು ಅವರು ಅನುಸರಿಸಿದ್ದಾರೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಹೈದರಾಬಾದ್​​​ನಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಸಚಿವ ಶಿವಾನಂದ ಪಾಟೀಲ ಭಾಗಿಯಾಗಿದ್ದರು. ಮದುವೆ ಕಾರ್ಯಕ್ರಮದ ನಿಮಿತ್ತ ಕವ್ವಾಲಿ ಆಯೋಜನೆ ಮಾಡಲಾಗಿತ್ತು. ಕವ್ವಾಲಿ ವೀಕ್ಷಿಸುತ್ತಿದ್ದ ವೇಳೆ ಸಚಿವ ಶಿವಾನಂದ ಪಾಟೀಲ್ ಮೇಲೆ ವ್ಯಕ್ತಿಯೊಬ್ಬರು ನೋಟುಗಳ ಮಳೆಗೈದಿದ್ದಾರೆ. ಘಟನೆ ಕುರಿತು ಪರ ವಿರೋಧ ಚರ್ಚೆ ನಡೆದಿದೆ.

ರಾಜ್ಯದಲ್ಲಿ ಬರಗಾಲ ಇದೆ. ವಿದ್ಯುತ್ ಅಭಾವವಿದೆ. ವಿದ್ಯುತ್ ಇಲ್ಲದೇ ರೈತರ ಬೆಳೆಗಳು ಹಾಳಾಗುತ್ತಿವೆ. ಇಂಥ ಸಂದರ್ಭದಲ್ಲಿ ಸಚಿವರ ಮೇಲೆ ನೋಟಿನ ಮಳೆಗೈದರೂ ಸಚಿವರು ಯಾವುದೇ ಪ್ರತಿರೋಧ‌ ತೋರಿಲ್ಲ. ಬರದ ಮಧ್ಯೆ ಸಚಿವ ಶಿವಾನಂದ ಪಾಟೀಲ ನೋಟುಗಳನ್ನು ತಮ್ಮ ಮೇಲೆ‌ ಹಾರಿಸಿದರೂ ತಡೆಯಲಿಲ್ಲಾ ಎಂದು ವಿರೋಧ ಪಕ್ಷಗಳ ನಾಯಕರು ಟೀಕಿಸಿದ್ದಾರೆ. ಆದರೆ, ಪ್ರತಿಪಕ್ಷಗಳ ಟೀಕೆಗೆ ಶಿವಾನಂದ ಪಾಟೀಲ್ ಅವರು ತೀಕ್ಷ್ಣವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಲಗ್ನಕ್ಕೆ ಹೋಗಬಾರದಾ? ಅದು ಅಲ್ಲಿಯವರ ಸಂಸ್ಕೃತಿ, ಅದಕ್ಕೆ ನಾನೇನು ಮಾಡಲು ಸಾಧ್ಯ? ಹೈದರಾಬಾದ್​​ನಲ್ಲಿ ಬರ ಇದೆಯೇ? ಅಲ್ಲಿಯ ಗೃಹ ಸಚಿವರೇ ಕಾರ್ಯಕ್ರಮಕ್ಕೆ ಬಂದಿದ್ದರು. ಇದನ್ನೂ ಈಗ ವೈರಲ್ ಮಾಡ್ತೀರಾ ನೀವು? ಯಾರೋ ಮಾಡಿದ್ದಕ್ಕೆ ನಾನು ಮದುವೆಗೆ ಹೋಗಬಾರದಾ? ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದೆ ಅಷ್ಟೇ. ನಾನು ಹೋಗಿ ಅವರ ಕಲ್ಚರ್ ನಿಲ್ಲಿಸೋದಕ್ಕಾಗುತ್ತದೆಯೇ ಎಂದು ಮಾಧ್ಯಮಗಳ ವಿರುದ್ದ ಸಚಿವ ಶಿವಾನಂದ ಪಾಟೀಲ್ ಹರಿಹಾಯ್ದಿದ್ದಾರೆ.

ಈಗಾಗಲೇ ಗುತ್ತಿಗೆದಾರರ ಮೇಲಿನ ಐಟಿ ದಾಳಿ ಪ್ರಕರಣ, ಭ್ರಷ್ಟಾಚಾರ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮುಗಿಬಿದ್ದಿವೆ. ಈ ಮಧ್ಯೆ, ಕಾಂಗ್ರೆಸ್​ ಆಂತರಿಕ ವಲಯದಲ್ಲಿಯೂ ಭಿನ್ನಮತ, ಅಸಮಾಧಾನದ ಹೊಗೆಯಾಡುವಿಕೆ ಹೆಚ್ಚಾಗಿದೆ. ಇವೆಲ್ಲವನ್ನೂ ಸಂಭಾಳಿಸಿಕೊಂಡು ಹೋಗಲು ಕಾಂಗ್ರೆಸ್ ಹೈಕಮಾಂಡ್ ಹರಸಾಹಸ ಪಡುತ್ತಿರುವ ಬೆನ್ನಲ್ಲೇ ಸಚಿವರು, ಶಾಸಕರ ಕೆಲವು ವರ್ತನೆಗಳೂ ಪಕ್ಷಕ್ಕೆ ತಲೆನೋವಾಗಿ ಪರಿಣಮಿಸಿದೆ. ಇದೀಗ ಶಿವಾನಂದ ಪಾಟೀಲ್ ಅವರ ಮೇಲೆ ನೋಟಿನ ಮಳೆಗೈದ ವಿಚಾರವನ್ನೂ ಸಹ ಪ್ರತಿಪಕ್ಷಗಳು ಟೀಕೆಗೆ ಅಸ್ತ್ರವನ್ನಾಗಿ ಮಾಡಿಕೊಂಡಿವೆ.

ಇದನ್ನೂ ಓದಿ: ಕುಡಿದು ಸತ್ತಿದ್ದರೂ ಪರಿಹಾರದ ಆಸೆಗೆ ಆತ್ಮಹತ್ಯೆ ಅಂತಾರೆ: ಅನ್ನದಾತನ ಬಗ್ಗೆ ಶಿವಾನಂದ ಪಾಟೀಲ್ ಅವಹೇಳನ ಹೇಳಿಕೆ

ಕುಡಿದು ಸತ್ತಿದ್ದರೂ ಪರಿಹಾರದ ಆಸೆಗೆ ಆತ್ಮಹತ್ಯೆ ಎನ್ನುತ್ತಾರೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದ್ದು ಕೆಲವು ದಿನಗಳ ಹಿಂದೆ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸಚಿವರು ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ನೋಡಿಕೊಂಡು ಹೆಜ್ಜೆ ಇಡಬೇಕು: ಮಧು ಬಂಗಾರಪ್ಪ

ಸಚಿವ ಶಿವಾನಂದ್ ಪಾಟೀಲ್ ಮೇಲೆ ನೋಟಿನ ಮಳೆಗೈದ ಮತ್ತು ಅವರು ಹಣದ ಮೇಲೆ ಕಾಲಿಟ್ಟು ಕುಳಿತ ವಿಚಾರವಾಗಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಸಚಿವ ಮಧು ಬಂಗಾರಪ್ಪ, ಸಾಮಾಜಿಕ‌ವಾಗಿ ನಾನೇ ಆಗಲಿ ಯಾರೇ ಆದರೂ ಹೆಜ್ಜೆ ಇಡುವಾಗ ನೋಡಿಕೊಂಡು ಇಡಬೇಕು. ಸಮಾಜದಲ್ಲಿ ವಿಚಾರಗಳು ಇರುತ್ತವೆ. ನಾವು ಮಾತನಾಡುವ ರೀತಿ ಎಲ್ಲವನ್ನೂ ಜನರು ನೋಡುತ್ತಿರುತ್ತಾರೆ. ಬಹಳ ಎಚ್ಚರಿಕೆಯಿಂದ ಇರಬೇಕು. ಈ ಬಗ್ಗೆ ಚರ್ಚೆಗೆ ನಾನು ಹೋಗುವುದಿಲ್ಲ. ಅಂತಹ ಬುದ್ಧಿ ನನಗಂತೂ ಇಲ್ಲ. ರಾಜ್ಯ ಹಾಗೂ ದೇಶದಲ್ಲಿ‌ ಅಂಬೇಡ್ಕರ್ ಬರೆದಿರುವ ಸಂವಿಧಾನ ಮೇಲೆ ನಿಂತುಕೊಳ್ಳಬೇಕು. ಸಂವಿಧಾನ ಪ್ರಕಾರ ಯಾರೇ ತಪ್ಪು ಮಾಡಿದರು ಶಿಕ್ಷೆಯಾಗುತ್ತದೆ ಎಂದು ಹೇಳಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು