BJP MLA Photo Viral: ಬಿಜೆಪಿ ಶಾಸಕರೊಬ್ಬರು ಮಹಿಳೆ ಜೊತೆ ಇರುವ ಅಶ್ಲೀಲ ಫೋಟೊ ವೈರಲ್

ಚುನಾವಣೆ ಹೊತ್ತಲ್ಲೇ ಬಿಜೆಪಿ ಹಾಲಿ ಶಾಸರೊಬ್ಬರು ಮಹಿಳೆ ಜೊತೆ ಇರುವ ಅಶ್ಲೀಲ ಫೋಟೋ ವೈರಲ್ ಆಗಿದೆ.

BJP MLA Photo Viral: ಬಿಜೆಪಿ ಶಾಸಕರೊಬ್ಬರು ಮಹಿಳೆ ಜೊತೆ ಇರುವ ಅಶ್ಲೀಲ ಫೋಟೊ ವೈರಲ್
Follow us
ರಮೇಶ್ ಬಿ. ಜವಳಗೇರಾ
| Updated By: Digi Tech Desk

Updated on:Apr 06, 2023 | 12:09 PM

ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ  (Karnataka Assembly Elctiosn 2023)ರಂಗೇರಿದ್ದು, ಕ್ಷಣ ಕ್ಷಣಕ್ಕೂ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇನ್ನು ಈಗಾಗಲೇ ಕೆಲವರು ಟಿಕೆಟ್​ ಕನ್ಫರ್ಮ್​ ಮಾಡಿಕೊಂಡು ಕ್ಷೇತ್ರಗಳಲ್ಲಿ ಬೀಡುಬಿಟ್ಟು ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚುನಾವಣೆ ಸಂದರ್ಭದಲ್ಲೇ ಬಿಜೆಪಿ ಶಾಸಕರೊಬ್ಬರು ಮಹಿಳೆ ಜೊತೆ ಇರುವ ಅಶ್ಲೀಲ ಫೋಟೋಗಳು ವೈರಲ್ ಆಗಿವೆ. ಮಂಗಳೂರಿನ ಪುತ್ತೂರು ಕ್ಷೇತ್ರದ ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರು ಮಹಿಳೆಯೊಂದಿಗೆ ಇರುವ ಫೋಟೋಗಳು ವೈರಲ್​ ಆಗಿದ್ದು, ಈ ಬಗ್ಗೆ ಅವರು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಮಹಿಳೆಯೊಂದಿಗಿನ ಫೋಟೋವನ್ನು ಅಲ್ಲಗೆಳೆದಿದ್ದು, ನನ್ನ ಫೋಟೋವನ್ನು ಎಡಿಟ್ ಮಾಡಿ ವೈರಲ್ ಮಾಡಿದ್ದಾರೆ ಎಂದಿದ್ದಾರೆ. ಇನ್ನು ಈ ಬಗ್ಗೆ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ಫೋಟೋವನ್ನು ಯಾರೋ ಎಡಿಟ್ ಮಾಡಿ ವೈರಲ್ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು, ಇದೀಗ ಈ ಫೋಟೋವನ್ನು ವೈರಲ್ ಮಾಡುತ್ತಿರುವವ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. ಇನ್ನು ಉಪ್ಪಿನಂಗಡಿ ಪೊಲೀಸರು ಇನ್ಫಾರ್ಮೇಶನ್ ಟೆಕ್ನಾಲಜಿ ಆಕ್ಟ್ ಪ್ರಕಾರ ಎಫ್.ಐ.ಆರ್ ದಾಖಲು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಚುನಾವಣೆ ಹೊತ್ತಲ್ಲೇ ಫೋಟೋ ಶಾಕ್

ಕರ್ನಾಟಕ ವಿಧಾನಸಭೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ಇತ್ತ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರ ವಿಧಾನಸಭಾ ಕ್ಷೇತ್ರದಲ್ಲೂ ಚುನಾವಣೆ ಚಟುವಟಿಕೆಗಳು ಬಿರುಸುಗೊಂಡಿವೆ. 2018ರಲ್ಲಿ ಭಾರತೀಯ ಜನತಾ ಪಾರ್ಟಿಯ ಸಂಜೀವ್ ಮಠಂದೂರು ಅವರು ಕಾಂಗ್ರೆಸ್​ನ ಶಕುಂತಳಾ ಶೆಟ್ಟಿ ಅವರನ್ನು 19477 ಮತಗಳ ಅಂತರದಿಂದ ಮಣಿಸಿದ್ದರು. ಇದೀಗ ಸಂಜೀವ ಮಠಂದೂರು ಮತ್ತೊಮ್ಮೆ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ. ಆದ್ರೆ, ಮಠಂದೂರು ವಿರುದ್ಧ ಬಣ ರಾಜಕೀಯದ ಆರೋಪಗಳು ಕೇಳಿಬಂದಿವೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್​ ಅವರಿಗೆ ಟಿಕೆಟ್​ ಸಿಗಬಹುದೆಂಬ ನಿರೀಕ್ಷೆ ಇತ್ತಾದರೂ ಕೊನೆ ಕ್ಷಣದಲ್ಲಿ ಬಿಜೆಪಿ ಮಠಂದೂರಿಗೆ ಮಣೆ ಹಾಕಿತ್ತು. ಈ ಬಾರಿ ಉದ್ಯಮಿ ಆಗಿರುವ ಸಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಡಿ. ವಿ. ಸದಾನಂದ ಗೌಡ ಅವರ ಆಪ್ತರಾಗಿರುವ ಅಶೋಕ್ ರೈ ಈ ಬಾರಿ ಪುತ್ತೂರು ಟಿಕೆಟ್​ಗಾಗಿ ಕಸರತ್ತು ನಡೆಸಿದ್ದಾರೆ. ಹೀಗಾಗಿ ಪುತ್ತೂರು ಬಿಜೆಪಿ ಟಿಕೆಟ್​ಗಾಗಿ ಭರ್ಜರಿ ಫೈಟ್​ ನಡೆದಿದೆ. ಇದರ ಮಧ್ಯೆ ಹಾಲಿ ಶಾಸಕ ಸಂಜೀವ ಮಠಂದೂರು ಅವರ ಫೋಟೋ ವೈರಲ್ ಆಗಿದೆ.

Published On - 11:39 am, Thu, 6 April 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ