ದಾವಣಗೆರೆಯಲ್ಲೇ ತುಂಬಿ ತುಳುಕುತ್ತಿದ್ದಾರೆ ಲಿಂಗಾಯತ ಅಧಿಕಾರಿಗಳು: ಪಟ್ಟಿ ವೈರಲ್

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ರಾಜ್ಯ ರಾಜಕಾರಣದಲ್ಲಿ ಲಿಂಗಾಯತ ಅಧಿಕಾರಿಗಳು ಕಿಡಿ ಹೊತ್ತಿಸಿದ್ದಾರೆ. ಇದು ಕಾಂಗ್ರೆಸ್​ನಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಈ ಬಗ್ಗೆ ಕೆಲವರು ವಿರೋಧಿಸಿದ್ದರೆ, ಇನ್ನೂ ಕೆಲವರು ಶಾಮನೂರು ಶಿವಕಂರಪ್ಪ ಪರ ವ್ಯಾಟಿಂಗ್ ಮಾಡುತ್ತಿದ್ದಾರೆ. ಇನ್ನು ಇದರ ಮಧ್ಯೆ ದಾವಣಗೆರೆಯಲ್ಲಿರುವ ಲಿಂಗಾಯತ ಅಧಿಕಾರಿ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಶಮನೂರು ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಹಾಗಾದ್ರೆ, ದಾವಣೆರೆಯ ಯಾವೆಲ್ಲ ಇಲಾಖೆಗಳಲ್ಲಿ ಲಿಂಗಾಯತ ಅಧಿಕಾರಿಗಳು ಇದ್ದಾರೆ ಎನ್ನುವ ವಿವರ ಇಲ್ಲಿದೆ.

ದಾವಣಗೆರೆಯಲ್ಲೇ ತುಂಬಿ ತುಳುಕುತ್ತಿದ್ದಾರೆ ಲಿಂಗಾಯತ ಅಧಿಕಾರಿಗಳು: ಪಟ್ಟಿ ವೈರಲ್
ಶಾಮನೂರು ಶಿವಶಂಕರಪ್ಪ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 05, 2023 | 2:49 PM

ಬೆಂಗಳೂರು, (ಅಕ್ಟೋಬರ್ 05): ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೇರಿ ಕೇವಲ ನಾಲ್ಕು ತಿಂಗಳಾಗಿವೆ. ಅಷ್ಟರಲ್ಲೇ ಕೈಯೊಳಗೆ ಅಸಮಾಧಾನದ ಬೆಂಕಿ ಧಗಧಗಿಸುತ್ತಿದೆ. ಬಿ.ಕೆ.ಹರಿಪ್ರಸಾದ್, ಬಸವರಾಜ ರಾಯರೆಡ್ಡಿ ಸರ್ಕಾರದ ವಿರುದ್ಧ ಬಹಿರಂಗವಾಗಿ ತೊಡೆ ತಟ್ಟಿದ್ರು. ಇದರ ಬೆನ್ನಲ್ಲೇ ಈಗ ಕಾಂಗ್ರೆಸ್​ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರದ ಮಟ್ಟದಲ್ಲಿ ಲಿಂಗಾಯತರಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಶಾಮನೂರು ಶಿವಶಂಕರಪ್ಪಸ್ವಪಕ್ಷದ ವಿರುದ್ಧವೇ ಸಿಡಿದೆದ್ದಿದ್ದಾರೆ. ಇದು ಇದೀಗ ರಾಜ್ಯ ರಾಜಕಾರಣದಲ್ಲಿ ಹಲ್ ಚಲ್​ಎಬ್ಬಿಸಿದೆ. ಇನ್ನು ಇದಕ್ಕೆ ಸ್ವಪಕ್ಷದ ಕೆಲ ನಾಯಕರು ವಿರೋಧ ವ್ಯಕ್ತಪಡಿಸಿದ್ದರೆ, ಇನ್ನು ಕೆಲವರು ಶಾಮನೂರು ಪರ ಬ್ಯಾಟಿಂಗ್ ಮಾಡಿದ್ದಾರೆ. ಇವೆಲ್ಲದರ ಮಧ್ಯೆ  ಶಾಮನೂರು ಶಿವಶಂಕರಪ್ಪ ತವರು ಜಿಲ್ಲೆ ದಾವಣಗೆರೆಯಲ್ಲಿ ಲಿಂಗಾಯತ ಅಧಿಕಾರಿಗಳ ಪಟ್ಟಿ‌ ಬಿಡುಗಡೆ ಮಾಡಲಾಗಿದ್ದು, ಇದೀಗ ಇದು ಎಲ್ಲೆಡೆ ವೈರಲ್ ಆಗಿದೆ.

ದಾವಣಗೆರೆಯಲ್ಲಿ ಲಿಂಗಾಯತ ಅಧಿಕಾರಿಗಳದ್ದೇ ದರ್ಬಾರ್

ಹೌದು…ಲಿಂಗಾಯತ ಅಧಿಕಾರಿಗಳಿಗೆ ಮನ್ನಣೆ ನೀಡುತ್ತಿಲ್ಲ. ಆಯಾಕಟ್ಟಿನ ಪ್ರಮುಖ ಹುದ್ದೆಗಳಿಗೆ ಬೇರೆ-ಬೇರೆ ಸಮುದಾಯದ ಅಧಿಕಾರಿಗಳನ್ನೇ ಕೂರಿಸಲಾಗಿದೆ. ಇದರಿಂದಿಗೆ ಲಿಂಗಾಯತ ಅಧಿಕಾರಿಗಳನ್ನು ಮೂಲೆ ಗುಂಪು ಮಾಡಲಾಗುತ್ತಿದೆ ಎಂದು ಶಾಮನೂರು ಶಿವಶಂಕರಪ್ಪ ತಮ್ಮದೇ ಸರ್ಕಾರದ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಂಯ್ಯನವರ ಅಭಿಮಾನಿಗಳು ಶಮನೂರು ಜಿಲ್ಲೆಯಲ್ಲಿ ಎಷ್ಟು ಲಿಂಗಾಯತ ಅಧಿಕಾರಿಗಳು ಯಾವೆಲ್ಲ ಹುದ್ದೆಯಲ್ಲಿ ಇದ್ದಾರೆ ಎನ್ನುವ ಪಟ್ಟಿ ಬಿಡುಗಡೆ ಮಾಡಿ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ: ಈ ಸಂಬಂಧ ನಾನು ನೀಡಿರುವ ಹೇಳಿಕೆಗೆ ಬದ್ಧ: ಶಾಸಕ ಶಾಮನೂರು

ಈ ಪಟ್ಟಿಯನ್ನು ನೋಡಿದರೆ, ಶಾಸಕ ಶಾಮನೂರು ಶಿವಶಂಕರಪ್ಪ ತವರು ಜಿಲ್ಲೆ ದಾವಣಗೆರೆಯಲ್ಲಿ ಲಿಂಗಾಯತ ಅಧಿಕಾರಿಗಳದ್ದೇ ದರ್ಬಾರ್. ಎಸ್ಪಿ, ಜಿಪಂ‌ ಸಿಇಓ ಸೇರಿ ಜಿಲ್ಲೆಯ 28 ಇಲಾಖೆಯ ಮುಖ್ಯಸ್ಥರು ಲಿಂಗಾಯತ ಸಮುದಾಯಕ್ಕೆ ಸೇರಿದ ಅಧಿಕಾರಿಗಳೇ ಇದ್ದಾರೆ, ಬಿಜೆಪಿ ಇರಲಿ ಕಾಂಗ್ರೆಸ್ ಇರಲಿ ಕೆಲ ಲಿಂಗಾಯತ ಅಧಿಕಾರಿಗಳು ಆಯಾ ಇಲಾಖೆಗಳಲ್ಲಿ ಖಾಯಂ ಠಿಕಾಣಿ ಹೂಡಿದ್ದಾರೆ. ಲಿಂಗಾಯತರ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಶಾಮನೂರು ಶಿವಶಂಕರಪ್ಪ ಮೌನಕ್ಕೆ ಶರಣಾಗಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಲು ಸಹ ನಿರಾಕರಿಸಿದ್ದಾರೆ. ಇನ್ನು ದಾವಣಗೆರೆಯಲ್ಲಿ ಯಾವೆಲ್ಲ ಇಲಾಖೆಯಲ್ಲಿ ಲಿಂಗಾಯತ ಅಧಿಕಾರಿಗಳು ಇದ್ದಾರೆ ಎನ್ನುವ ಪಟ್ಟಿ ಈ ಕೆಳಗಿನಂತಿದೆ ನೋಡಿ.

ದಾವಣಗೆರೆ ಜಿಲ್ಲೆಯೊಂದರಲ್ಲಿ ಇರುವ ಲಿಂಗಾಯತ ಅಧಿಕಾರಿಗಳ ಪಟ್ಟಿ

  • 1)CEO – ಸುರೇಶ ಹಿಟ್ನಾಳ್(IAS)
  • 2) SP – ಉಮಾ ಪ್ರಶಾಂತ್( IPS)
  • 3) SMART City MD – ವೀರೇಶ್ ಕುಮಾರ್(KAS Jr.Sc)
  • 4) DHUDA Commissioner –  ಕೋಟೂರು ಬಸವನಗೌಡ(KAS Jr.Sc)
  • 5) DD Food – ಸಿದ್ರಾಮ್ ಮಾರಿಹಾಳ
  • 6) Tahsildar –  ಅಶ್ವಥ್
  • 7) DO BCM –  ಗಾಯತ್ರಿ,
  • 8) DO Minority – ಮಹಾಂತೇಶ ಮಠದ
  • 9) DHO – ಡಾ.ಶಣ್ಮುಖಪ್ಪ
  • 10) District Surgeon ಡಾ.ನಾಗೇಂದ್ರಪ್ಪ
  • 11) RCHO –  ಡಾ.ರೇಣುಕಾರಾಧ್ಯ
  • 12) ಶಿವಣ್ಣ
  • 13) EE PWD ನರೇಂದ್ರ ಬಾಬು
  • 14) EE MI – ಮಂಜುನಾಥ
  • 15) EE KRIDL – ಸುನೀಲ್
  • 16) District Skill Development Officer – ಬಸವನಗೌಡ
  • 17) DD Veterinory – ಚಂದ್ರಶೇಖರ ಸುಂಕದ್
  • 18) DD Horticulture –  ರಾಘವೇಂದ್ರ
  • 19) JD Agriculture –  ಶ್ರೀನಿವಾಸ ಚಿಂತಾಲ್
  • 20) DD Agriculture –  ತಿಪ್ಪೇಸ್ವಾಮಿ
  • 21) PD Nirmithi – ರವಿ
  • 22) SLAO Railway-  ಉದಯ ಕುಂಬಾರ
  • 23) EE BESCOM – ಶರಣ ಪಾಟೀಲ 24) JD Industries-
  • 25) DD Textile – ಶಿವು ಕುಂಬಾರ
  • 26) District Family Welfare Officer(FWO)  Dr.ರುದ್ರಸ್ವಾಮಿ
  • 27) District Leprosy Officer- ಡಾ.ಮಂಜುನಾಥ ಪಾಟೀಲ
  • 28)Disignated Officer for food safety ( DO food)  ಡಾ.ನಾಗರಾಜ.
  • 29) Medical superintendent (ESI hopital davangere)- ಡಾ ಬಸನಗೌಡ.

Published On - 2:45 pm, Thu, 5 October 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ