AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಜಮೀರ್ ಅಚ್ಚರಿಯ ನಡೆ: ನಸೀರ್ ಅಹ್ಮದ್ ನಿವಾಸಕ್ಕೆ ಭೇಟಿ ನೀಡಿದ ಜಮೀರ್, ಕುತೂಹಲ ಮೂಡಿಸಿದ ಚರ್ಚೆ!

ದಾವಣಗೆರೆ ಉಪಚುನಾವಣೆ ಟಿಕೆಟ್ ಹಂಚಿಕೆ ವಿವಾದದಿಂದ ಕರ್ನಾಟಕ ರಾಜಕೀಯದಲ್ಲಿ ಹೊಸ ಬೆಳವಣಿಗೆಗಳು ನಡೆದಿವೆ. ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬಳಿಕ, ಸಚಿವ ಜಮೀರ್ ಅಹ್ಮದ್ ಖಾನ್ ನಸೀರ್ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದ್ದಾರೆ. ಈ ಭೇಟಿಗೂ ಮುನ್ನ ಸಿಎಂ ಸಿದ್ಧರಾಮಯ್ಯ ಜಮೀರ್‌ಗೆ ಹೈಕಮಾಂಡ್ ಪ್ರಶ್ನೆಗಳಿಗೆ ಉತ್ತರ ನೀಡಿ ಎಂದು ತಾಕೀತು ಮಾಡಿದ್ದರು. ಇದು ಸಮಾಧಾನ ಸಂಧಾನವೋ ಅಥವಾ ಮುಂದಿನ ಹೋರಾಟದ ಸಂಕೇತವೋ ಎಂಬ ಕುತೂಹಲ ಮೂಡಿಸಿದೆ.

ಸಚಿವ ಜಮೀರ್ ಅಚ್ಚರಿಯ ನಡೆ: ನಸೀರ್ ಅಹ್ಮದ್ ನಿವಾಸಕ್ಕೆ ಭೇಟಿ ನೀಡಿದ  ಜಮೀರ್, ಕುತೂಹಲ ಮೂಡಿಸಿದ ಚರ್ಚೆ!
ಕರ್ನಾಟಕ ರಾಜಕೀಯ ಬಿಕ್ಕಟ್ಟು
ಪ್ರಸನ್ನ ಗಾಂವ್ಕರ್​
| Edited By: |

Updated on:Apr 15, 2026 | 10:53 AM

Share

ಬೆಂಗಳೂರು, ಏ.15: ದಾವಣಗೆರೆ ಉಪಚುನಾವಣೆ ಟಿಕೆಟ್ ಹಂಚಿಕೆ ವಿವಾದದ ಬೆನ್ನಲ್ಲೇ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ಅವರನ್ನು ವಜಾ ಮಾಡಿದ ನಂತರ, ಸಚಿವ ಜಮೀರ್​​​ ಜತೆ ಸಿಎಂ ಸಿದ್ಧರಾಮಯ್ಯ ಅವರು ಚರ್ಚೆ ನಡೆಸಿದ್ದಾರೆ. ಈ ಚರ್ಚೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗರಂ ಆಗಿದ್ದರು. ಹೈಕಮಾಂಡ್​ ಕೇಳುವ ಎಲ್ಲ ಪ್ರಶ್ನೆಗೂ ನೀನೇ ಉತ್ತರ ನೀಡುಬೇಕು ಎಂದು ಹೇಳಿದ್ದರು ಎಂದು ಹೇಳಲಾಗಿದೆ. ಇದರ ಬೆನ್ನಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಇಂದು ನಸೀರ್ ಅಹ್ಮದ್ ನಿವಾಸಕ್ಕೆ ಭೇಟಿ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಬೆಂಗಳೂರಿನ ಜಯಮಹಲ್ ರಸ್ತೆಯಲ್ಲಿರುವ ನಸೀರ್ ಅಹ್ಮದ್ ಅವರ ಸರ್ಕಾರಿ ನಿವಾಸಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ನಸೀರ್ ಅಹ್ಮದ್ ಅವರ ವಜಾ ಬಳಿಕ ನಡೆದ ಮೊದಲ ಭೇಟಿ ಇದಾಗಿದೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಅವರಿಗೆ “ಹೈಕಮಾಂಡ್ ದೂರುಗಳ ಬಗ್ಗೆ ನೀನೇ ಉತ್ತರ ನೀಡಬೇಕು” ಎಂದು ತಾಕೀತು ಮಾಡಿದ್ದರು. ಇದರ ಬೆನ್ನಲ್ಲೇ ಜಮೀರ್ ಅಹ್ಮದ್ ಅವರು ಅಸಮಾಧಾನಗೊಂಡಿರುವ ನಾಯಕರನ್ನು ಭೇಟಿ ಮಾಡುತ್ತಿರುವುದು ಮಹತ್ವ ಪಡೆದಿದೆ.

ಇದನ್ನೂ ಓದಿ: ಜಮೀರ್​​ಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್!: ಹೈಕಮಾಂಡ್ ನಿನ್ನ ಮೇಲೆ ಸಿಟ್ಟಾಗಿದೆ, ನೀನೇ ಸಮಜಾಯಿಷಿ ನೀಡಬೇಕು

ದಾವಣಗೆರೆಯಲ್ಲಿ ಎದ್ದಿರುವ ಬಂಡಾಯದ ಕಿಚ್ಚು ಹೈಕಮಾಂಡ್ ಮಟ್ಟಕ್ಕೆ ತಲುಪಿದ್ದು, ಅಬ್ದುಲ್ ಜಬ್ಬಾರ್ ಮತ್ತು ನಸೀರ್ ಅಹ್ಮದ್ ಅವರ ಅಸಮಾಧಾನವನ್ನು ಶಮನಗೊಳಿಸಲು ಜಮೀರ್ ಅಹ್ಮದ್ ಸಂಧಾನಕ್ಕೆ ಇಳಿದಿದ್ದಾರೆಯೇ ಅಥವಾ ಮುಂದಿನ ಹೋರಾಟದ ಬಗ್ಗೆ ಚರ್ಚಿಸುತ್ತಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ. ದಾವಣಗೆರೆ ಚುನಾವಣೆಯಲ್ಲಿ ಆಗಿರುವ ಗೊಂದಲದಿಂದ ಸೋಲಿನ ಭೀತಿಯಲ್ಲಿರುವ ಕಾಂಗ್ರೆಸ್​​​​​​​​​​​​​​​​​ ಮುಸ್ಲಿಂ ನಾಯಕರ ತಲೆದಂಡ ಮಾಡುತ್ತಿದೆ ಎಂದು ಹೇಳಲಾಗಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:47 am, Wed, 15 April 26

Follow Us
ಕಾವೇರಿ ಸಂದಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂದಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ