ಗೃಹಲಕ್ಷ್ಮಿ ಯೋಜನೆ ಜಾರಿಗೆ ಡಿಸಿಎಂ ತಡೆ: ಇದಕ್ಕೆ ಕಾರಣ ನೀಡಿದ ಡಿಕೆ ಶಿವಕುಮಾರ್

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಬೇಕೇಂದರೆ ಸರ್ವರ ಸಮಸ್ಯೆ ಆಗುತ್ತಿದೆ. ಮನೆಯೊಡತಿಯೇ ಸ್ವಯಂ ಅರ್ಜಿ ಸಲ್ಲಿಸುವಂತೆ ವಿಧಾನವನ್ನು ಸರಳೀಕರಣ ಮಾಡಲಾಗುತ್ತಿದೆ ಹಾಗಾಗಿ ಸಿಎಂ ಸಿದ್ಧರಾಮಯ್ಯ ಜತೆ ಮಾತನಾಡಿ ಗೃಹಲಕ್ಷ್ಮಿ ಯೋಜನೆ ಜಾರಿಯನ್ನು ನಾನೇ ಸದ್ಯಕ್ಕೆ ತಡೆದಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್​​ ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಜಾರಿಗೆ ಡಿಸಿಎಂ ತಡೆ: ಇದಕ್ಕೆ ಕಾರಣ ನೀಡಿದ ಡಿಕೆ ಶಿವಕುಮಾರ್
ಡಿಸಿಎಂ ಡಿ.ಕೆ. ಶಿವಕುಮಾರ್
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 23, 2023 | 3:33 PM

ಬೆಂಗಳೂರು: ಸಿಎಂ ಸಿದ್ಧರಾಮಯ್ಯ (Siddaramaiah) ಜತೆ ಮಾತನಾಡಿ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಜಾರಿಯನ್ನು ನಾನೇ ಸದ್ಯಕ್ಕೆ ತಡೆದಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್​​ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆ ಅರ್ಜಿ ವಿಚಾರವಾಗಿ ಸರ್ವರ ಸಮಸ್ಯೆ ಆಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಮನೆಯೊಡತಿಯೇ ಸ್ವಯಂ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಆಲ್ ಲೈನ್ ಹಾಗೂ ಆಫ್ ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು. ಈ ವಿಚಾರವಾಗಿ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ಮಾಡಲಾಗುವುದು ಎಂದು ಹೇಳಿದರು.

ಈ ಯೋಜನೆಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೆಲವರು 200-300 ರೂ. ಹಣ ವಸೂಲಿ ಮಾಡಿದ್ದು, ಈ ಬಗ್ಗೆ ನಮಗೆ ದೂರು ಬಂದಿವೆ. ಈ ಅರ್ಜಿ ತುಂಬಲು ಏಜೆನ್ಸಿಗಳಾಗಲಿ ಅಥವಾ ಯಾರೇ ಲಂಚ ಪಡೆದರೆ ಅವರ ಪರವಾನಿಗೆ ರದ್ದಾಗುತ್ತದೆ. ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಯೋಜನೆಗಳಿಗೆ ನೋಂದಣಿ ಮಾಡಿಕೊಳ್ಳಲು ಹೋಗುವವರು ಯಾರಿಗೂ ಲಂಚ ನೀಡುವ ಅಗತ್ಯವಿಲ್ಲ. ಯಾರಾದರೂ ಲಂಚ ಕೇಳಿದರೆ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ನೀಡಿ. ನಾವು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಲಂಚ ಮುಕ್ತ ರಾಜ್ಯ ನಮ್ಮ ಗುರಿ ಎಂದು ತಿಳಿಸಿದರು.

ಮಾಜಿ ಸಿಎಂ ಬೊಮ್ಮಾಯಿಯಿಂದ ಸಲಹೆ, ಅಭಿಪ್ರಾಯ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು 2 ವರ್ಷಗಳ ಕಾಲ ರಾಜ್ಯದ ಸಿಎಂ ಆಗಿದ್ದು, ಬೆಂಗಳೂರಿನ ಅಭಿವೃದ್ಧಿಗೆ ಕೆಲವು ಉತ್ತಮ ಯೋಜನೆ ಹಾಕಿಕೊಂಡಿದ್ದರು. ಆದರೆ ಸಮ್ಮಿಶ್ರ ಸರ್ಕಾರವಾಗಿದ್ದ ಕಾರಣ ಆ ಯೋಜನೆಗಳನ್ನು ಜಾರಿ ಮಾಡಲು ಬಿಡಲಿಲ್ಲ. ಹೀಗಾಗಿ ಅವರನ್ನು ಭೇಟಿ ಮಾಡಿ ಸಲಹೆ, ಅಭಿಪ್ರಾಯ ಪಡೆಯಲಿದ್ದೇನೆ ಎಂದರು.

ಇದನ್ನೂ ಓದಿ: ತಾಕತ್​ ಇದ್ರೆ ಎಫ್​ಸಿಐ ಬಗ್ಗೆ ಚರ್ಚೆಗೆ ಬನ್ನಿ: ಪ್ರತಾಪ್ ಸಿಂಹಗೆ ಪ್ರದೀಪ್ ಈಶ್ವರ್ ಬಹಿರಂಗ ಸವಾಲ್

ಅನ್ನಭಾಗ್ಯ ಯೋಜನೆ ವಿಚಾರವಾಗಿ ಮಾತನಾಡಿದ ಅವರು, ತಡವಾಗಿಯಾದರೂ ಸರಿ ಜಾರಿ ಮಾಡುತ್ತೇವೆ. ಈ ಯೋಜನೆಯ ಜಾರಿ ವಿಚಾರವಾಗಿ ಬಡವರು, ಫಲಾನುಭವಿಗಳು ಹೋರಾಟ ಮಾಡುತ್ತಿಲ್ಲ. ಬದಲಿಗೆ ಹೊಟ್ಟಿ ತುಂಬಿರುವ ಕೆಲವರು ಹೋರಾಟ ಮಾಡುತ್ತೇವೆ ಎನ್ನುತ್ತಿದ್ದಾರೆ. ಈ ಸರ್ಕಾರದಿಂದ ನಮಗೆ ಸಹಾಯವಾಗುತ್ತಿದೆ ಎಂದು ಬಡವರು ಸಂತೋಷದಿಂದ್ದಾರೆ. ನಮ್ಮ ಅಕ್ಕ ತಂಗಿಯರು ನಮ್ಮ ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ ಭೇಟಿ ನೀಡಿ ಧರ್ಮಯಾತ್ರೆ ಮಾಡುತ್ತಿದ್ದಾರೆ.

ಬಿಜೆಪಿ ಸರ್ಕಾರ ಇದ್ದಾಗ ವಿದ್ಯುತ್ ಬೆಲೆ ಏರಿಕೆ 

ವಿದ್ಯುತ್ ಬೆಲೆ ಏರಿಕೆ ವಿರುದ್ಧ ಹೋರಾಟ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ‘ನಾವು ಎಲ್ಲಿ ವಿದ್ಯುತ್ ಬೆಲೆ ಏರಿಕೆ ಮಾಡಿದ್ದೇವೆ? ಅವರದೇ ಸರ್ಕಾರ ಇದ್ದಾಗ ವಿದ್ಯುತ್ ಬೆಲೆ ಏರಿಕೆ ಮಾಡಿದ್ದಾರೆ. ಚುನಾವಣೆ ಫಲಿತಾಂಶ ಬರುವುದಕ್ಕೂ ಮುನ್ನವೇ ಅವರು ವಿದ್ಯುತ್ ಬೆಲೆ ಏರಿಕೆ ಮಾಡಿದ್ದಾರೆ. ವಿದ್ಯುತ್ ದರ ಪರಿಷ್ಕರಣ ಸಮಿತಿ ಬೆಲೆ ನಿಗದಿಯಲ್ಲಿ ಸ್ವಂತ ಅಧಿಕಾರ ಹೊಂದಿದೆ ಎಂದು ತಿಳಿಸಿದರು.

ಬಿಜೆಪಿಯವರು ಎಷ್ಟು ಹೊಸ ಬಿಲ್​ಗಳನ್ನು ಸೃಷ್ಟಿಸಿ ಹಣ ನೀಡಿದ್ದಾರೆ ಎಂದು ಹೇಳಿದರೆ ಎಷ್ಟು ಜನ ಮನೆಗೆ ಹೋಗುತ್ತಾರೆ ಗೊತ್ತಿದೆಯೇ? ಸಾವಿರಾರು ಕೋಟಿ ನೀಡಲಾಗಿದೆ. ಈ ವಿಚಾರಗಳು ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರಿಗೆ ತಿಳಿದಿದೆ. ರಾಜ್ಯದಲ್ಲಿ ವಿದ್ಯುತ್​ಗೆ ಎಷ್ಟು ಖರ್ಚಾಗುತ್ತದೆ ಎಂದು ನನಗೆ ಗೊತ್ತಿದೆ ಎಂದರು.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ವಿರುದ್ಧ ಸೇಡು ತೀರಿಸಿಕೊಳ್ಳಲು ಮತ್ತೆ ಯಡಿಯೂರಪ್ಪ ಮೊರೆ ಹೋದ ಬಿಜೆಪಿ, ಇಲ್ಲಿದೆ ಕೇಸರಿ ಪಡೆಯ ಪಕ್ಕಾ ಪ್ಲಾನ್

ನನ್ನ ಅವಧಿಯಲ್ಲಿ ರಾಜ್ಯದಲ್ಲಿ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಮಾಡಿ ಅದನ್ನು ಬೇರೆ ರಾಜ್ಯಗಳಿಗೆ ನೀಡಿರುವ ಬಗ್ಗೆ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಇಲ್ಲದೆ 3500 ಕೋಟಿ ಮೊತ್ತದ ವಿದ್ಯುತ್ ಹೇಗೆ ಮಾರಲಾಯಿತು ಎಂದು ಪ್ರಶ್ನಿಸಿದರು.

ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರ ಸಲಹೆ ಪಡೆಯುತ್ತೇನೆ. ವಿದ್ಯುತ್ ನಿಗಮದವರು ಜನವರಿಯಿಂದ ಇದನ್ನು ಜಾರಿಗೆ ಮುಂದಾಗಿದ್ದು, ಇದರಿಂದ ವಿದ್ಯುತ್ ಬಿಲ್ ಹೆಚ್ಚಾಗಿ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಸಚಿವರು, ನಾವು ಕೂತು ಚರ್ಚೆ ಮಾಡಿ ತೀರ್ಮಾನ ಮಾಡಿ ಪರಿಹಾರ ನೀಡುತ್ತಾರೆ. ನಾವು ಕೊಟ್ಟ ಮಾತಿನಂತೆ ಗೃಹಜ್ಯೋತಿ ಯೋಜನೆ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:27 pm, Fri, 23 June 23