AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನಲ್ಲಿ ಜೋರಾಯ್ತು ಡಿಸಿಎಂ ಕೂಗು; ರಾಜಣ್ಣ ಬಳಿಕ ರಾಯರೆಡ್ಡಿಯಿಂದ ಹುದ್ದೆಗೆ ಬೇಡಿಕೆ

Karnataka Congress and DCM demand; ಕೆಎನ್ ರಾಜಣ್ಣ ಹೇಳಿಕೆಗೆ ಬೆಂಬಲ ನೀಡಿರುವ ಬಸವರಾಜ ರಾಯರೆಡ್ಡಿ ಆರು ಡಿಸಿಎಂ ಸ್ಥಾನಕ್ಕೆ ಒತ್ತಾಯಿಸಿದ್ದಾರೆ. ಎಲ್ಲ ಜಾತಿ-ಧರ್ಮಗಳು ಕಾಂಗ್ರೆಸ್​ಗೆ ಬೆಂಬಲ ನೀಡಿವೆ. ಹೀಗಾಗಿ ಅಲ್ಪಸಂಖ್ಯಾತ, ಎಸ್​​ಸಿ, ಎಸ್​ಟಿ, ಲಿಂಗಾಯತರಿಗೆ ಡಿಸಿಎಂ ಹುದ್ದೆ ನೀಡಿ ಎಂದು ರಾಯರೆಡ್ಡಿ ಆಗ್ರಹಿಸಿದ್ದಾರೆ.

ಕಾಂಗ್ರೆಸ್​ನಲ್ಲಿ ಜೋರಾಯ್ತು ಡಿಸಿಎಂ ಕೂಗು; ರಾಜಣ್ಣ ಬಳಿಕ ರಾಯರೆಡ್ಡಿಯಿಂದ ಹುದ್ದೆಗೆ ಬೇಡಿಕೆ
ಬಸವರಾಜ ರಾಯರೆಡ್ಡಿ
Follow us
TV9 Web
| Updated By: Ganapathi Sharma

Updated on: Sep 23, 2023 | 2:06 PM

ಬೆಂಗಳೂರು, ಸೆಪ್ಟೆಂಬರ್ 23: ಒಂದೆಡೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಪ್ರತಿಪಕ್ಷಗಳ, ರೈತರ ಪ್ರತಿಭಟನೆ ಭುಗಿಲೆದ್ದಿರುವುದು ರಾಜ್ಯ ಕಾಂಗ್ರೆಸ್ (Congress) ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದ್ದರೆ, ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಹೆಚ್ಚುತ್ತಿರುವುದು ಮತ್ತೊಂದೆಡೆ ಸಂಕಟಕ್ಕೆ ಕಾರಣವಾಗಿದೆ. ಸಮುದಾಯವಾರು ಮೂವರು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಬೇಕೆಂದು ಕೆಎನ್ ರಾಜಣ್ಣ ಬೇಡಿಕೆ ಇಟ್ಟಿರುವುದು ಕಾಂಗ್ರೆಸ್ ಪಕ್ಷದ ಆಂತರಿಕ ವಲಯದಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದೀಗ ಶಾಸಕ ಬಸವರಾಜ ರಾಯರೆಡ್ಡಿ (Basvaraj Rayareddi) ಆರು ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟಿದ್ದಾರೆ.

ಕೆಎನ್ ರಾಜಣ್ಣ ಹೇಳಿಕೆಗೆ ಬೆಂಬಲ ನೀಡಿರುವ ಬಸವರಾಜ ರಾಯರೆಡ್ಡಿ ಆರು ಡಿಸಿಎಂ ಸ್ಥಾನಕ್ಕೆ ಒತ್ತಾಯಿಸಿದ್ದಾರೆ. ಎಲ್ಲ ಜಾತಿ-ಧರ್ಮಗಳು ಕಾಂಗ್ರೆಸ್​ಗೆ ಬೆಂಬಲ ನೀಡಿವೆ. ಹೀಗಾಗಿ ಅಲ್ಪಸಂಖ್ಯಾತ, ಎಸ್​​ಸಿ, ಎಸ್​ಟಿ, ಲಿಂಗಾಯತರಿಗೆ ಡಿಸಿಎಂ ಹುದ್ದೆ ನೀಡಿ ಎಂದು ರಾಯರೆಡ್ಡಿ ಆಗ್ರಹಿಸಿದ್ದಾರೆ.

ಆರಂಭದಿಂದಲೂ ರಾಯರೆಡ್ಡಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಸಚಿವರ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಶಾಸಕರ ಪೈಕಿ ರಾಯರೆಡ್ಡಿ ಮೊದಲಿಗರಾಗಿದ್ದರು. ಆ ನಂತರ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ ವಿಚಾರ ತಣ್ಣಗಾಗುವಂತೆ ಮಾಡಿದ್ದರು. ಬಳಿಕವೂ ಸಚಿವ ಸ್ಥಾನದ ವಿಚಾರವಾಗಿ ರಾಯರೆಡ್ಡಿ ಅಸಮಾಧಾನದ ಹೇಳಿಕೆಗಳನ್ನು ನೀಡಿದ್ದರು.

ಶಾಸಕರ ಅನುದಾನ ಬಿಡುಗಡೆ ವಿಚಾರವಾಗಿಯೂ ಸರ್ಕಾರದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದ ರಾಯರೆಡ್ಡಿ, ನಮಗೆ ಅನುದಾನ ಬೇಡ. ನಮ್ಮದೇ ದುಡ್ಡಲ್ಲಿ ಅಭಿವೃದ್ಧಿಕಾರ್ಯ ಮಾಡುತ್ತೇವೆ ಎಂದು ಬಹಿರಂಗವಾಗಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪ್ರತಿ ಶನಿವಾರ ಪಕ್ಷಾತೀತವಾಗಿ ಶಾಸಕರ ಭೇಟಿಗೆ ಸಿಎಂ ನಿರ್ಧಾರ

ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಎಸ್ಸಿ, ಅಲ್ಪಸಂಖ್ಯಾ ಮತ್ತು ವೀರಶೈವ ಲಿಂಗಾಯತ ಸಮುದಾಯಗಳ ತಲಾ ಓರ್ವ ಮುಖಂಡನನ್ನು ಉಪಮುಖ್ಯಮಂತ್ರಿ ಮಾಡಬೇಕೆಂದು ಸಹಕಾರ ಸಚಿವ ರಾಜಣ್ಣ ಇತ್ತೀಚೆಗೆ ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ಆಂತರಿಕ ವಲಯದಲ್ಲಿ ಪರ-ವಿರೋಧ ವ್ಯಕ್ತವಾಗಿತ್ತು. ರಾಜಣ್ಣ ಹೇಳಿಕೆ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ