ಎಚ್ಚರಿಕೆಯಿಂದಿರಿ ಎಂದಷ್ಟೇ ಬಾಲಕೃಷ್ಣ ಹೇಳಿದ್ದಾರೆ, ಗ್ಯಾರಂಟಿ 5 ವರ್ಷ ಇರಲಿದೆ: ಡಿಕೆ ಶಿವಕುಮಾರ್ ಸ್ಪಷ್ಟನೆ

| Updated By: Ganapathi Sharma

Updated on: Jan 31, 2024 | 12:21 PM

Guarantee schemes: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತ ನೀಡದಿದ್ದರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂಬ ಮಾಗಡಿ ಶಾಸಕ ಹೆಚ್​ಸಿ ಬಾಲಕೃಷ್ಣ ಹೇಳಿಕೆ ತೀವ್ರ ವಿವಾದಕ್ಕೀಡಾಗುತ್ತಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅವರು ಹೇಳಿದ್ದೇನು? ಗ್ಯಾರಂಟಿಗಳು ಐದು ವರ್ಷ ಮುಂದುವರಿಯಲಿವೆಯಾ? ಇಲ್ಲಿದೆ ನೋಡಿ.

ಎಚ್ಚರಿಕೆಯಿಂದಿರಿ ಎಂದಷ್ಟೇ ಬಾಲಕೃಷ್ಣ ಹೇಳಿದ್ದಾರೆ, ಗ್ಯಾರಂಟಿ 5 ವರ್ಷ ಇರಲಿದೆ: ಡಿಕೆ ಶಿವಕುಮಾರ್ ಸ್ಪಷ್ಟನೆ
ಡಿಕೆ ಶಿವಕುಮಾರ್
Follow us on

ಬೆಂಗಳೂರು, ಜನವರಿ 31: ಲೋಕಸಭೆ ಚುನಾವಣೆಯಲ್ಲಿ (Lok Sabha Election) ಕಾಂಗ್ರೆಸ್‌ಗೆ ಮತ ಹಾಕಿದರೆ ಮಾತ್ರ ಐದು ಉಚಿತ ಗ್ಯಾರಂಟಿಗಳು ಮುಂದುವರಿಯಲಿವೆ ಎಂಬ ಮಾಗಡಿ ಶಾಸಕ ಹೆಚ್​ಸಿ ಬಾಲಕೃಷ್ಣ (HC Balakrishna) ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪ್ರತಿಕ್ರಿಯಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷ ಮುಂದುವರಿಯಲಿವೆ. ಮಾಗಡಿ ಬಾಲಕೃಷ್ಣ ಎಚ್ಚರಿಕೆಯಿಂದ ಇರಿ ಎಂದಷ್ಟೇ ಹೇಳಿದ್ದಾರೆ. ಆದರೆ, ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ಎಂದರು.

ಎಚ್ಚರಿಕೆಯಿಂದ ಇರಿ ಎಂದು ಬಾಲಕೃಷ್ಣ ಹೇಳಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷ ಮುಂದುವರಿಯಲಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮಾಗಡಿ ತಾಲೂಕು ಕುದೂರು ಹೋಬಳಿಯ ಶ್ರೀಗಿರಿಪುರದಲ್ಲಿ ಮಂಗಳವಾರ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ್ದ ಬಾಲಕೃಷ್ಣ, ಬಿಜೆಪಿಯವರು ಮಂದಿರದ ಹೆಸರಿನಲ್ಲಿ ಅಕ್ಷತೆ ನೀಡಿ ಮತ ಕೇಳುತ್ತಿದ್ದಾರೆ. ನಿಮ್ಮ ಮತ ಅಕ್ಷತೆ ಕಾಳಿಗೋ ಅಥವಾ ಗ್ಯಾರಂಟಿ ಯೋಜನೆಗಳಿಗೋ ಎಂಬುದನ್ನು ನಿರ್ಧರಿಸಿ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತ ನೀಡದಿದ್ದರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದು ಹೇಳಿದ್ದರು.

ಇದನ್ನೂ ಓದಿ: ಕಾಂಗ್ರೆಸ್​ಗೆ ಮತ ಹಾಕದಿದ್ದರೆ ಗ್ಯಾರಂಟಿಗಳು ರದ್ದು: ಮಾಗಡಿ ಶಾಸಕ ಬಾಲಕೃಷ್ಣ ಎಚ್ಚರಿಕೆಗೆ ವಿಜಯೇಂದ್ರ ತಿರುಗೇಟು

ಭಾಷೆ, ಸಂಸ್ಕೃತಿ ರಕ್ಷಣೆ ಮಾಡುವುದು ನಮ್ಮ ಕರ್ತವ್ಯ: ಡಿಕೆ ಶಿವಕುಮಾರ್

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಕಾಯ್ದೆಯ ಸುಗ್ರಿವಾಜ್ಞೆಯನ್ನು ರಾಜ್ಯಪಾಲರು ವಾಪಸ್ ಕಳುಹಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ವಿಧಾನಸಭೆ ಅಧಿವೇಶನ ಬರುವ ಮುಂಚೆ ಸುಗ್ರಿವಾಜ್ಞೆ ಮಾಡಿದ್ದೆವು. ಭಾಷೆ, ಸಂಸ್ಕೃತಿ ರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ನಾಗರಿಕರಿಗೆ, ವ್ಯಾಪಾರಿಗಳಿಗೆ ತೊಂದರೆಯಾಗಬಾರದು. ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಮಾಡಿದ್ದೆವು. ರಾಜ್ಯಪಾಲರು ಯಾಕೆ ವಾಪಸು ಕಳುಹಿಸಿದರು ಎಂಬುದು ಗೊತ್ತಿಲ್ಲ. ಈಗ ಪರಿಶೀಲಿಸುತ್ತೇನೆ ಎಂದರು.

ಇದನ್ನೂ ಓದಿ: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರು: ವಿಧೇಯಕ ಮಂಡನೆಗೆ ಸೂಚನೆ

ವಿಧನಸಭೆಯಲ್ಲಿ ವಿಧೇಯಕ ಮಂಡಿಸಿ ಅನುಮೋದನೆ ಪಡೆಯುತ್ತೇವೆ. ರಾಜ್ಯಪಾಲರಿಗೆ ನಾನು ಮನವಿ ಮಾಡುತ್ತೇನೆ. ರಾಜ್ಯದ ಪರವಾಗಿ ಈ ಬಿಲ್ ತಂದಿದ್ದೇವೆ. ಯಾರೂ ಕೂಡ ವಿರೋಧ ವ್ಯಕ್ತಪಡಿಸಿಲ್ಲ. ಈ ಬಿಲ್ ಪಾಸ್ ಬಗ್ಗೆ ರಾಜ್ಯಪಾಲರು ಮರು ಪರಿಶೀಲನೆ ‌ಮಾಡಬೇಕು ಎಂದು ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸಮಾವೇಶ ಫೆಬ್ರವರಿ17 ಕ್ಕೆ

ಮುಂದೂಡಿಕೆಯಾಗಿದ್ದ ಕಾಂಗ್ರೆಸ್ ಸಮಾವೇಶ ಫೆಬ್ರವರಿ17 ಕ್ಕೆ ನಿಗದಿಯಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಮಂಗಳೂರಿನಲ್ಲಿ ಸಮಾವೇಶ ನಡೆಯಲಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ