ಡಿಸಿಎಂ ಬಂಗಲೆಗೆ ಅಶೋಕ್ ಬೇಡಿಕೆ: ಇದರ ಬೆನ್ನಲ್ಲೇ 6 ತಿಂಗಳು ಬಳಿಕ ಸರ್ಕಾರಿ ನಿವಾಸಕ್ಕೆ ಕಾಲಿಟ್ಟ ಡಿಕೆ ಶಿವಕುಮಾರ್​​

| Updated By: ರಮೇಶ್ ಬಿ. ಜವಳಗೇರಾ

Updated on: Jan 25, 2024 | 9:21 PM

ಡಿಕೆ ಶಿವಕುಮಾರ್ ಅವರು ಬರೋಬ್ಬರಿ ಆರು ತಿಂಗಳು ಬಳಿಕ ಬೆಂಗಳೂರಿನ ಕುಮಾರಕೃಪಾ ದಕ್ಷಿಣದಲ್ಲಿರುವ ನಂಬರ್ 1 ಸರ್ಕಾರಿ ನಿವಾಸಕ್ಕೆ ಕಾಲಿಟ್ಟಿದ್ದಾರೆ. ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಇದೇ ಕುಮಾರಕೃಪಾ ದಕ್ಷಿಣದಲ್ಲಿರುವ ನಂಬರ್ 1 ಬಂಗಲೆ ಬೇಕೆಂದು ಸರ್ಕಾರಕ್ಕೆ ಪತ್ರ ಬರೆದ ಬೆನ್ನಲ್ಲೇ ಡಿಕೆ ಶಿವಕುಮಾರ್ ತಮಗೆ ಹಂಚಿಕೆಯಾಗಿರುವ ನಿವಾಸಕ್ಕೆ ಭೇಟಿ ನೀಡಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಡಿಸಿಎಂ ಬಂಗಲೆಗೆ ಅಶೋಕ್  ಬೇಡಿಕೆ: ಇದರ ಬೆನ್ನಲ್ಲೇ 6 ತಿಂಗಳು ಬಳಿಕ ಸರ್ಕಾರಿ ನಿವಾಸಕ್ಕೆ ಕಾಲಿಟ್ಟ ಡಿಕೆ ಶಿವಕುಮಾರ್​​
Follow us on

ಬೆಂಗಳೂರು, (ಜನವರಿ 25) : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಬರೋಬ್ಬರಿ ಆರು ತಿಂಗಳು ಬಳಿಕ ಬೆಂಗಳೂರಿನ ಕುಮಾರಕೃಪಾ ದಕ್ಷಿಣದಲ್ಲಿರುವ ನಂಬರ್ 1 ಸರ್ಕಾರಿ ನಿವಾಸಕ್ಕೆ ಕಾಲಿಟ್ಟಿದ್ದಾರೆ. ಬಂಗಲೆ ನವೀಕರಣದ ಬಳಿಕ ಇಂದು ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಅಧಿಕೃತವಾಗಿ ಪ್ರವೇಶಿಸುವ ಮೊದಲೇ ಸರ್ಕಾರಿ ನಿವಾಸದಲ್ಲಿ ಕುಳಿತುಕೊಂಡು ಅಧಿಕಾರಿಗಳು ಹಾಗೂ ಶಾಸಕರ ಜತೆ ಚರ್ಚೆ ನಡೆಸಿದ್ದಾರೆ. ಇನ್ನುಇದೇ ನಿವಾಸಬೇಕೆಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಪತ್ರ ಬರೆದ ಬೆನ್ನಲ್ಲೇ ಡಿಕೆ ಶಿವಕುಮಾರ್ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ.

ಈ ಹಿಂದೆ ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿದ್ದ ವೇಳೆ ಇದೇ ಕುಮಾರಕೃಪಾ ದಕ್ಷಿಣದಲ್ಲಿರುವ ನಂಬರ್ 1 ನಿವಾಸದಲ್ಲಿ ವಾಸವಾಗಿದ್ದರು. ಇದೀಗ ಸಿದ್ದರಾಮಯ್ಯನವರು ಕಾವೇರಿ ನಿವಾಸಕ್ಕೆ ಶಿಫ್ಟ್​ ಆಗಿದ್ದರಿಂದ ಈ ಬಂಗಲೆಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೇಳಿ ಪಡೆದುಕೊಂಡಿದ್ದರು. ಆದ್ರೆ, ನವೀಕರಣ ಕಾರಣದಿಂದ ಅಧಿಕೃತವಾಗಿ ಮನೆಗೆ ಪ್ರವೇಶ ಮಾಡಿರಲಿಲ್ಲ.

ಇದನ್ನೂ ಓದಿ: ಸರ್ಕಾರಿ ನಿವಾಸಕ್ಕೆ ಆರ್ ಅಶೋಕ ಮನವಿ: ಡಿಕೆ ಶಿವಕುಮಾರ್​​ಗೆ ಹಂಚಿಕೆಯಾಗಿರುವ ನಿವಾಸಕ್ಕೇ ಬೇಡಿಕೆ

ಇದೇ ನಿವಾಸದಲ್ಲಿದ್ದು ಸಿದ್ದರಾಮಯ್ಯ ಎರಡು ಬಾರಿ ಸಿಎಂ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಾರಕೃಪಾ ದಕ್ಷಿಣದಲ್ಲಿರುವ ನಂಬರ್ 1 ನಿವಾಸ ಅದೃಷ್ಟವಿದೆ ಎನ್ನಲಾಗಿದೆ. ಹೀಗಾಗಿ ಡಿಕೆ ಶಿವಕುಮಾರ್ ಸಹ ಜ್ಯೋತಿಷಿಗಳ ಸಲಹೆ ಪಡೆದುಕೊಂಡೇ ಇದೇ ನಿವಾಸ ಆಯ್ಕೆ ಮಾಡಿಕೊಂಡಿದ್ದಾರೆ. ಆದ್ರೆ, ಇದೀಗ ಡಿಕೆ ಶಿವಕುಮಾರ್​​ಗೆ ಹಂಚಿಕೆಯಾಗಿರುವ ಕುಮಾರಕೃಪಾ ದಕ್ಷಿಣದಲ್ಲಿರುವ ನಂಬರ್ 1 ನಿವಾಸ ಬೇಕೆಂದು ವಿರೋಧ ಪಕ್ಷದ ನಾಯಕರು ಆರ್,ಅಶೋಕ್​ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಇದರ ಜೊತೆಗೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ರೇಸ್ ವ್ಯೂ ಕಾಟೇಜ್​ನಲ್ಲಿ ನಂಬರ್ 1 ಮತ್ತು ನಂಬರ್ 3 ನಿವಾಸಕ್ಕೆ ಕೂಡಾ ಅಶೋಕ್ ಬೇಡಿಕೆ ಇಟ್ಟಿದ್ದಾರೆ. ಸದ್ಯ ರೇಸ್ ವ್ಯೂ ಕಾಟೇಜ್​​ನ ನಂಬರ್ 1 ನಿವಾಸ ಸಚಿವ ಎಂಬಿ ಪಾಟೀಲ್​​ಗೆ ಹಂಚಿಕೆಯಾಗಿದೆ. ಇನ್ನು ನಂಬರ್ 3 ನಿವಾಸ ಸಚಿವ ಪ್ರಿಯಾಂಕ್ ಖರ್ಗೆಗೆ ಹಂಚಿಕೆಯಾಗಿದೆ.