Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಗೂಂಡಾಗಳು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ ಮತ್ತೊಂದು ಕೈಯಲ್ಲಿ ದೊಣ್ಣೆ: ಡಿಕೆಶಿ ವಾಗ್ದಾಳಿ

ಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆಯ ಮೇಲೆ ನಡೆದಿರುವ ದಾಳಿ ಖಂಡಿಸಿ ಇಂದು ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿದ್ದು, ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬಿಜೆಪಿ ವಿರುದ್ಧ ಗುಡುಗಿದ್ದಾರೆ. ಬಿಜೆಪಿ ಗೂಂಡಾಗಳು ಅಂತೆಲ್ಲಾ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಗೂಂಡಾಗಳು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ ಮತ್ತೊಂದು ಕೈಯಲ್ಲಿ ದೊಣ್ಣೆ: ಡಿಕೆಶಿ ವಾಗ್ದಾಳಿ
ಡಿಕೆ ಶಿವಕುಮಾರ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 23, 2024 | 4:50 PM

ಬೆಂಗಳೂರು, (ಜನವರಿ 23): ಬಿಜೆಪಿ (BJP) ಗೂಂಡಾಗಳು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದು ಜನಪರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಗೂಂಡಾಗಳ ಗೊಡ್ಡು ಬೆದರಿಕೆಗೆ ಕಾಂಗ್ರೆಸಿಗರು (Congress) ಹೆದರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಾಗ್ದಾಳಿ ನಡೆಸಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆಯ ಮೇಲೆ ನಡೆದಿರುವ ದಾಳಿ ಖಂಡಿಸಿ ಇಂದು ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾತನಾಡಿದ ಡಿಕೆ ಶಿವಕುಮಾರ್, ಧರ್ಮದ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಬಿಜೆಪಿಯವರು ಧರ್ಮದ ವಿಚಾರವಾಗಿ ರಾಜಕಾರಣ ಮಾಡುತ್ತಿದ್ದಾರೆ. ಹೀಗಾಗಿ ಅವರು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ, ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದು ಜನಪರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ನೀವು ಧರ್ಮವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದರೂ ನಾವು ಅದರ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತಿಲ್ಲ ಎಂದು ಗುಡುಗಿದರು.

ಇದನ್ನೂ ಓದಿ: ಶ್ರೀರಾಮ ಬಿಜೆಪಿಯವರ ಅಪ್ಪನ ಮನೆ ಆಸ್ತಿಯಾ: ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ

ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ, ಶಿವಕುಮಾರ ಹೆಸರಲ್ಲಿ ಶಿವ ಹಾಗೂ ಷಣ್ಮುಗ ಇದ್ದಾರೆ. ಹರಿಪ್ರಸಾದ್ ಅವರ ಹೆಸರಲ್ಲಿ ಹರಿ ಇದ್ದಾನೆ. ಕೃಷ್ಣ ಭೈರೇಗೌಡರ ಹೆಸರಲ್ಲಿ ಕೃಷ್ಣ ಇದ್ದಾನೆ. ಹಿಂದೂ ಧರ್ಮ ನಿಮ್ಮ ಮನೆ ಆಸ್ತಿಯೇ? ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೆ, ಪೂಜೆ ನೂರಾದರೂ ಭಕ್ತಿವೊಂದೇ, ಕರ್ಮ ಹಲವಾದರೂ ನಿಷ್ಠೇವೊಂದೇ, ದೇವನೊಬ್ಬ ನಾಮ ಹಲವು. ನಾವು ಕಲ್ಲು, ನೀರು, ಮರ, ಗಾಳಿಯಲ್ಲಿ ದೇವರನ್ನು ಕಾಣುತ್ತೇವೆ. ನಮ್ಮ ಸರ್ಕಾರದಲ್ಲಿ ಧಾರ್ಮಿಕ ದತ್ತಿ ಇಲಾಖೆ, ಹಜ್ ಸಮಿತಿ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಇದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಅಸ್ಸಾಂನಲ್ಲಿ ಕಳೆದೆರಡು ದಿನಗಳಿಂದ ಯಾತ್ರೆಯನ್ನು ತಡೆಯಲಾಗಿದೆ. ಇಂದು ಗುವಾಹಟಿಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಆ ಮೂಲಕ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಬದುಕಿದೆಯೋ ಸತ್ತಿದೆಯೋ ಎಂಬ ಪ್ರಶ್ನೆ ಉದ್ಭವಿಸಿದೆ. ಅಸ್ಸಾಂ ಸರ್ಕಾರದ ಈ ನಡೆಯನ್ನು ನಾವೆಲ್ಲರೂ ಖಂಡಿಸುತ್ತೇವೆ. ಈ ಯಾತ್ರೆಯಿಂದ ಬಿಜೆಪಿ ನಾಯಕರಲ್ಲಿ ನಡುಕ ಹುಟ್ಟಿದೆ. ಹೀಗಾಗಿ ಅವರ ಯಾತ್ರೆಯನ್ನು ತಡೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ