ಡಿಕೆಶಿ ಮಹಿಳೆಯ ಅಪಹರಿಸಿ ಬೆದರಿಸಿ ಜಮೀನು ಬರೆಸಿಕೊಂಡಿದ್ದಕ್ಕೆ ದಾಖಲೆ ಇದೆ: ಮತ್ತೆ ಗುಡುಗಿದ ಹೆಚ್​ಡಿ ಕುಮಾರಸ್ವಾಮಿ

ಜೆಡಿಎಸ್ ನಾಯಕ ಹೆಚ್​​ಡಿ ಕುಮಾರಸ್ವಾಮಿ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಣವ ವಾಕ್ಸಮರ ತೀವ್ರಗೊಂಡಿದೆ. ಬಹಿರಂಗ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದ ಡಿಕೆಶಿಗೆ ಪ್ರತಿಸವಾಲು ಹಾಕಿರುವ ಕುಮಾರಸ್ವಾಮಿ, ಮಹಿಳೆಯನ್ನು ಅಪಹರಿಸಿ ಜಮೀನು ಬರೆಸಿಕೊಂಡಿದ್ದಕ್ಕೆ ದಾಖಲೆ ಇದೆ. ಬಿಡುಗಡೆ ಮಾಡುತ್ತೇನೆ ಬನ್ನಿ ಎಂದು ಹೇಳಿದ್ದಾರೆ.

ಡಿಕೆಶಿ ಮಹಿಳೆಯ ಅಪಹರಿಸಿ ಬೆದರಿಸಿ ಜಮೀನು ಬರೆಸಿಕೊಂಡಿದ್ದಕ್ಕೆ ದಾಖಲೆ ಇದೆ: ಮತ್ತೆ ಗುಡುಗಿದ ಹೆಚ್​ಡಿ ಕುಮಾರಸ್ವಾಮಿ
ಡಿಕೆ ಶಿವಕುಮಾರ್ & ಹೆಚ್​ಡಿ ಕುಮಾರಸ್ವಾಮಿ
Follow us
Anil Kalkere
| Updated By: Ganapathi Sharma

Updated on: Apr 16, 2024 | 12:22 PM

ಬೆಂಗಳೂರು, ಏಪ್ರಿಲ್ 16: ಲೋಕಸಭೆ ಚುನಾವಣೆಯ (Lok Sabha Elections) ಮತದಾನಕ್ಕೆ ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹಾಗೂ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ನಡುವಣ ವಾಕ್ಸಮರ ತಾರಕಕ್ಕೇರಿದೆ. ಡಿಕೆ ಶಿವಕುಮಾರ್ ವಿರುದ್ಧ ಬೆಂಗಳೂರಿನಲ್ಲಿ ಮತ್ತೆ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಡಿಕೆಶಿ ಮಹಿಳೆಯನ್ನು ಅಪಹರಿಸಿ ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಆ ಘಟನೆ ನಡೆದದ್ದು 1996-97 ರಲ್ಲಿ, ಅದರ ದಾಖಲೆಗಳಿವೆ ಎಂದು ಹೇಳಿದ್ದಾರೆ.

ಒಂದು ಮಗುವನ್ನು ಕಿಡ್ನಾಪ್ ಮಾಡಿ ಕರೆದುಕೊಂಡು ಏನು ಮಾಡಿದ್ದಿರಿ? ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಜಮೀನು ಬರೆಸಿಕೊಳ್ಳಲು ಏನು ಮಾಡಿದ್ದಿರಿ? ಚೆಕ್ ಕೊಟ್ಟಿರುವುದು ಬೇಕಾ? ಚೆಕ್ ಡಿಸಾನರ್ ಮಾಡಿರುವ ದಾಖಲೆ ಇದೆ, ಎಲ್ಲ ಇಟ್ಟಿದ್ದೇವೆ. ನಿನ್ನೆ ಮೊದಲ ಬಾರಿಗೆ ಇದನ್ನ ಹೇಳಿದ್ದೆ. ಅದಕ್ಕೆ ಚರ್ಚೆಗೆ ಕರೆಯುತ್ತಾರೆ. ಚರ್ಚೆಗೆ ಸಿದ್ದ ಇದ್ದೇನೆ ಬನ್ನಿ, ಕಂತೆ ಗಟ್ಟಲೇ ದಾಖಲೆ ಇಟ್ಟಿದ್ದೇನೆ. ದಾಖಲೆಗಳು ಬೇಕಾದಷ್ಟಿವೆ ಎಂದು ಕುಮಾರಸ್ವಾಮಿ ಪ್ರತಿ ಸವಾಲು ಹಾಕಿದ್ದಾರೆ.

ಈಗ ಶಾಂತಿನಗರ ಹೌಸಿಂಗ್ ಸೊಸೈಟಿ, ಡೂಪ್ಲಿಕೇಟ್ ಸೊಸೈಟಿನ ಒರಿಜಿನಲ್ ಮಾಡಿಕೊಳ್ಳಲಿಲ್ವಾ? ಈ ದೇಶದಲ್ಲಿನ ಸಂಸ್ಥೆಗಳನ್ನು ದುಡ್ಡಿನಲ್ಲಿ ಕೊಂಡುಕೊಂಡು ಯಾವಾಗ ಏನು ಬೇಕಾದ್ರು ಮಾಡುವ ವ್ಯಕ್ತಿ ಡಿಕೆ ಶಿವಕುಮಾರ್ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

‘ಒಕ್ಕಲಿಗ ನಾಯಕತ್ವ ನಾನೇ ವಹಿಸಿಕೊಳ್ಳುತ್ತೇನೆ ಎಂದು ಹೇಳಿದ್ದೆನಾ ಎಂಬುದಾಗಿ ಪ್ರಶ್ನಿಸಿದ ಕುಮಾರಸ್ವಾಮಿ, ಅವರು (ಡಿಕೆಶಿ) ಸತ್ಯ ಹರಿಶ್ಚಂದ್ರ ಮೊಮ್ಮಗ. ದೊಡ್ಡ ಆಲಹಳ್ಳಿಯಲ್ಲಿ ಹುಟ್ಟುವಾಗ ಸತ್ಯ ಹರಿಶ್ಚಂದ್ರ ಬಂದು ನೀನು ಸತ್ಯನೇ ನುಡಿಬೇಕು ಎಂದು ಅವರಲ್ಲಿ ಹೇಳಿ ಹೋಗಿದ್ದಾರೆ. ನಮಗೆ ಸುಳ್ಳು ಹೇಳಿ ಎಂದು ಹೇಳಿದ್ದಾರೆ’ ಎಂದು ಕುಮಾರಸ್ವಾಮಿ ಟಾಂಗ್ ನೀಡಿದರು.

ರಾಹುಲ್ ಗಾಂಧಿಯವರ ಮಂಡ್ಯ ಪ್ರಚಾರ ವಿಚಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಬರುವವರನ್ನು ಬೇಡ ಎಂದು ಹೇಳಲಾಗುತ್ತದೆಯಾ? ರಾಜಕೀಯವಾಗಿ ಪ್ರಚಾರ ಮಾಡಲು ಯಾರು ಬೇಕಾದರೂ ಬರಬಹುದು, ಅವರಿಗೆ ಸ್ವಾಗತ. ನಮ್ಮದೇನು ತಕರಾರಿಲ್ಲ, ಬಂದು ಪ್ರಚಾರ ಮಾಡಲಿ. ಅದರಿಂದ ನನಗೇನೂ ಲಾಸ್ ಇಲ್ಲ ಎಂದರು.

ಇದನ್ನೂ ಓದಿ: ಹೆದರಿ ಓಡಿದ ಕುಮಾರಸ್ವಾಮಿ: ಡಿಸಿಎಂ ಡಿಕೆ ಶಿವಕುಮಾರ್ ಏಕವಚನದಲ್ಲೇ ವಾಗ್ದಾಳಿ

ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ್ದ ಡಿಕೆ ಶಿವಕುಮಾರ್, ಏಕವಚನದಲ್ಲೇ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮಿಸ್ಟರ್​ ಕುಮಾರಸ್ವಾಮಿ ಹೆದರಿ ಪಕ್ಕದ ಜಿಲ್ಲೆಗೆ ಹೋಗಿದ್ದೀಯ​. ಚರ್ಚೆ ಮಾಡಲು ಸದನಕ್ಕೆ ಬಾ. ನೀನು ಎಂತ ಸುಳ್ಳುಗಾರ ಎಂಬುದು ಗೊತ್ತಾಗಲಿದೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ