AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಿಷನ್ ಆರೋಪ: ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲವು ರಾಜಕೀಯದವರು ಮಾಡಿದ್ದು ಎಂದ ಡಿಕೆ ಶಿವಕುಮಾರ್

ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿತ್ತು. ಅದರಲ್ಲೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಬಿಬಿಎಂಪಿ ಗುತ್ತಿಗೆದಾರರು 15 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು. ಸದ್ಯ ಈ ಎಲ್ಲದರ ಬಗ್ಗೆ ತುಮಕೂರು ಜಿಲ್ಲೆಯಲ್ಲಿರುವ ನೊಣವಿನಕೆರೆ ಅಜ್ಜಯ್ಯನ ಮಠದ ಬಳಿ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲವು ರಾಜಕೀಯದವರು ಮಾಡಿದ್ದು ಎಂದಿದ್ದಾರೆ.

ಕಮಿಷನ್ ಆರೋಪ: ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲವು ರಾಜಕೀಯದವರು ಮಾಡಿದ್ದು ಎಂದ ಡಿಕೆ ಶಿವಕುಮಾರ್
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
Follow us
ಮಹೇಶ್ ಇ, ಭೂಮನಹಳ್ಳಿ
| Updated By: Rakesh Nayak Manchi

Updated on: Aug 27, 2023 | 6:40 PM

ತುಮಕೂರು, ಆಗಸ್ಟ್ 27: ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿತ್ತು. ಅದರಲ್ಲೂ ಡಿಸಿಎಂ ಡಿಕೆ ಶಿವಕುಮಾರ್ (D.K.Shivakumar) ವಿರುದ್ಧ ಬಿಬಿಎಂಪಿ ಗುತ್ತಿಗೆದಾರರು 15 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು. ಸದ್ಯ ಈ ಎಲ್ಲದರ ಬಗ್ಗೆ ತುಮಕೂರು (Tumkur) ಜಿಲ್ಲೆಯಲ್ಲಿರುವ ನೊಣವಿನಕೆರೆ ಅಜ್ಜಯ್ಯನ ಮಠದ ಬಳಿ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲವು ರಾಜಕೀಯದವರು ಮಾಡಿದ್ದು ಎಂದಿದ್ದಾರೆ.

ತಿಪಟೂರು ತಾಲೂಕಿನ ನೊಣವಿನಕೆರೆ ಬಳಿ ಇರುವ ನೊಣವಿನಕೆರೆ ಅಜ್ಜಯ್ಯನ ಮಠದ ಬಳಿ ಮಾತನಾಡಿದ ಡಿಕೆ ಶಿವಕುಮಾರ್, ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಬಂದಾಗ ನನ್ನ ಎನರ್ಜಿ ಹೆಚ್ಚಾಗುತ್ತದೆ. ನಾನು ಅತಿ ಹೆಚ್ಚು ಪ್ರೀತಿಸುವ ಸ್ಥಳ ಇದು, ಶ್ರೀಗಳು ಆಶೀರ್ವದಿಸುತ್ತಾರೆ ಎಂದರು.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಅವರ ಸಿಎಂ ಕನಸು ಬಿಚ್ಚಿಟ್ಟ ತಿಪಟೂರು ಶಾಸಕ ಷಡಕ್ಷರಿ

ಅಜ್ಜಯ್ಯನ ಮೇಲೆ ಪ್ರಮಾಣ ಮಾಡು ಅಂದವರೆಲ್ಲ ಈಗ ಏನಾದರು ಎಂದು ಪ್ರಶ್ನಿಸಿದ ಡಿಕೆ ಶಿವಕುಮಾರ್, ಅಜ್ಜಯ್ಯನ ಹೆಸರು ತೆಗೆದುಕೊಂಡವರು ಈಗ ಉಲ್ಟಾ ಹೊಡೆದಿದ್ದಾರೆ. ಅವರು ಯಾಕೆ ಉಲ್ಟಾ ಹೊಡೆದರು ಅಂದರೆ, ಅದೇ ಅಜ್ಜಯ್ಯನ ಶಕ್ತಿ. ನಾನೇನಾದರು ತಪ್ಪು ಮಾಡಿದ್ದರೆ ತಾನೆ ಯೋಚನೆ ಮಾಡಬೇಕಿರುತ್ತದೆ. ಪಾಪ, ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲ ರಾಜಕೀಯದವರು ಮಾಡಿದ್ದು. ರಾಜಕೀಯದವರು ಮಿಸ್​ ಗೈಡ್ ಮಾಡಿ ಗುತ್ತಿಗೆದಾರರ ದಿಕ್ಕು ತಪ್ಪಿಸಿದರು ಎಂದರು.

ಸದ್ಯ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ ಭಾರೀ ಕುತೂಹಲ ಕೆರಳಿಸಿದೆ. ಬಿಜೆಪಿ ಶಾಸಕರಾದ ಎಸ್​ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಬಲೆಗೆ ಬಿದ್ದಿದ್ದಾರೆ ಎಂಬ ವದಂತಿ ಹಬ್ಬುತ್ತಿದೆ. ಈ ನಡುವೆ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಕಾಂಗ್ರೆಸ್ ಬರುತ್ತಾರೆ ಎಂಬ ಮಾತುಗಳು ಕೇಳಿಬರಲು ಆರಂಭವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಅವೆಲ್ಲ ಪಟ್ಟಿ ಇಲ್ಲಿ ಹೇಳಲು ಸಾಧ್ಯವಿಲ್ಲ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​