ಈ ಹಿಂದೆ ಕೂಡ ಚರ್ಚೆ ಮಾಡಿ ಕ್ಷಮೆ ಕೇಳಿದ್ದ ಹೆಚ್​ಡಿ ಕುಮಾರಸ್ವಾಮಿ: ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್

ರಾಮನಗರ ಜಿಲ್ಲೆ ವಿಚಾರವಾಗಿ ಬಹಿರಂಗ ಚರ್ಚೆಗೆ ಡಿಕೆ ಶಿವಕುಮಾರ್ ಹಾಕಿರುವ ಸವಾಲನ್ನು ಹೆಚ್​ಡಿ ಕುಮಾರಸ್ವಾಮಿ ಸ್ವೀಕರಿಸಿದ್ದರು. ಅಲ್ಲದೇ ನಾನು ಪಲಾಯನ ಮಾಡಲ್ಲ, ನನ್ನ ಬಳಿಯೂ ಸಾಕಷ್ಟು ಸರಕು ಇದೆ ಎಂದು ಎಂದು ಹೇಳಿದ್ದರು. ಇದರ ಬೆನ್ನಲ್ಲೇ, ಡಿಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಈ ಹಿಂದೆ ಕೂಡ ಚರ್ಚೆ ಮಾಡಿ ಕ್ಷಮೆ ಕೇಳಿದ್ದ ಹೆಚ್​ಡಿ ಕುಮಾರಸ್ವಾಮಿ: ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್
ಡಿಕೆ ಶಿವಕುಮಾರ್ & ಹೆಚ್​ಡಿ ಕುಮಾರಸ್ವಾಮಿ
Follow us
Malatesh Jaggin
| Updated By: Ganapathi Sharma

Updated on: Oct 26, 2023 | 6:23 PM

ಬೆಂಗಳೂರು, ಅಕ್ಟೋಬರ್ 26: ರಾಮನಗರ ಜಿಲ್ಲೆ ವಿಚಾರವಾಗಿ ಬಹಿರಂಗ ಚರ್ಚೆಗೆ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಆಹ್ವಾನ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ಬಹಳ ಸಂತೋಷ ಎಂದು ಹೇಳಿದ್ದಾರೆ. ಚರ್ಚೆ ಎಲ್ಲಿ ನಡೆಯುತ್ತೆ ಎಂಬುದನ್ನು ಅವರೇ ತೀರ್ಮಾನ ಮಾಡಲಿ. ಹಿಂದೆ ಕೂಡ ಇದೇ ರೀತಿ ಚರ್ಚೆ ನಿಗದಿ ಮಾಡಿದ್ರು. ಆಗ ಉತ್ತರ ಕೊಟ್ಟಿದ್ದೆ. ನಂತರ ಕುಮಾರಸ್ವಾಮಿ ಬಂದು ಕ್ಷಮೆ ಕೇಳಿದ್ದು ನಿಮಗೆ ಗೊತ್ತಿದೆ ಎಂದು ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

ಅಸೆಂಬ್ಲಿಯಲ್ಲಿ ಎಲ್ಲಾ ಮಾಧ್ಯಮಗಳಿಗೂ ಅವಕಾಶ ಸಿಗಲಿದೆ. ಅವರು (ಕುಮಾರಸ್ವಾಮಿ) ಎಲ್ಲಾ ದಾಖಲೆಗಳನ್ನು ಅಸೆಂಬ್ಲಿಗೆ ತರಲಿ, ನಾನು ಉತ್ತರ ಕೊಡ್ತೀನಿ. ಅವರು ಸವಾಲು ಸ್ವೀಕಾರ ಮಾಡಿರೋದಕ್ಕೆ ಬಹಳ ಸಂತೋಷವಾಗಿದೆ. ಹಿಂದೆ ಕೂಡ ಚರ್ಚೆ ನಿಗದಿ ಮಾಡಿದ್ದರು, ಅಲ್ಲೇ ಉತ್ತರ ಕೊಟ್ಟಿದ್ದೆ. ಬಳಿಕ ಅವರು ಬಂದು ಕ್ಷಮೆ ಕೇಳಿದ್ದು ನಿಮಗೆ ಗೊತ್ತಿದೆ ಎಂದು ಡಿಕೆ ಶಿವಕುಮಾರ್​ ಹೇಳಿದ್ದಾರೆ.

ರಾಮನಗರ ಜಿಲ್ಲೆ ವಿಚಾರವಾಗಿ ಬಹಿರಂಗ ಚರ್ಚೆಗೆ ಡಿಕೆ ಶಿವಕುಮಾರ್ ಹಾಕಿರುವ ಸವಾಲನ್ನು ಹೆಚ್​ಡಿ ಕುಮಾರಸ್ವಾಮಿ ಸ್ವೀಕರಿಸಿದ್ದರು. ಅಲ್ಲದೇ ನಾನು ಪಲಾಯನ ಮಾಡಲ್ಲ, ನನ್ನ ಬಳಿಯೂ ಸಾಕಷ್ಟು ಸರಕು ಇದೆ ಎಂದು ಎಂದು ಹೇಳಿದ್ದರು. ಇದರ ಬೆನ್ನಲ್ಲೇ, ಡಿಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ಸವಾಲು ಸ್ವೀಕರಿಸಿದ ಹೆಚ್​ಡಿ ಕುಮಾರಸ್ವಾಮಿ, ಉಭಯ ನಾಯಕರ ರಾಜಕೀಯ ಯುದ್ಧ ಶುರು

ಉಭಯ ನಾಯಕರ ಮಧ್ಯೆ ಕಳೆದ ಕೆಲವು ದಿನಗಳಿಂದ ವಾಕ್ಸಮರ ಜೋರಾಗಿದೆ. ಕನಕಪುರ ತಾಲೂಕನ್ನು ಬೆಂಗಳೂರಿಗೆ ಸೇರಿಸುತ್ತೇನೆ ಎಂಬ ಡಿಕೆ ಶಿವಕುಮಾರ್ ಹೇಳಿಕೆ ಕುಮಾರಸ್ವಾಮಿ ಅವರನ್ನು ಕೆರಳಿಸಿತ್ತು. ಈ ವಿಚಾರವಾಗಿ ಉಭಯ ನಾಯಕರು ವಾಕ್ಸಮರ ನಡೆಸುತ್ತಿರುವ ಬೆನ್ನಲ್ಲೇ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು. ಇದು ಕುಮಾರಸ್ವಾಮಿ ಅವರನ್ನು ಮತ್ತಷ್ಟು ಕೆರಳಿಸಿತ್ತು.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ