AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ಕ್ಷೇತ್ರಕ್ಕೆ ಡಿಕೆ ಸುರೇಶ್​​ರ ಅಚ್ಚರಿ ಅಭ್ಯರ್ಥಿ ಡಿಕೆ ಶಿವಕುಮಾರ್​?

ಜೆಡಿಎಸ್​ ವರಿಷ್ಠ, ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರಿಂದ ತೆರುವಾಗಿರುವ ಹೈ ವೋಲ್ಟೆಜ್​ ವಿಧಾನಸಭೆ ಕ್ಷೇತ್ರ ಚನ್ನಪಟ್ಟಣದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರೇ ಕಾಂಗ್ರೆಸ್​ನಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದೆ.

ಚನ್ನಪಟ್ಟಣ ಕ್ಷೇತ್ರಕ್ಕೆ ಡಿಕೆ ಸುರೇಶ್​​ರ ಅಚ್ಚರಿ ಅಭ್ಯರ್ಥಿ ಡಿಕೆ ಶಿವಕುಮಾರ್​?
ಡಿಸಿಎಂ ಡಿಕೆ ಶಿವಕುಮಾರ್​
ವಿವೇಕ ಬಿರಾದಾರ
|

Updated on:Jun 19, 2024 | 1:00 PM

Share

ರಾಮನಗರ, ಜೂನ್​ 19: ಜೆಡಿಎಸ್​ ವರಿಷ್ಠ, ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumarswamy) ಅವರಿಂದ ತೆರುವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ (Channapatna Assembly Constituency) ನಡೆಯಲಿರುವ ಉಪಚುನಾವಣೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಅವರೇ ಕಣಕ್ಕೆ ಇಳಿಯಲಿದ್ದಾರೆ ಎಂಬ ಮಾತುಗಳು ರಾಜ್ಯ ರಾಜಕೀಯ ವಲಯದಿಂದ ಕೇಳಿಬಂದಿವೆ. “ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್​ನಿಂದ ಅಚ್ಚರಿ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ” ಎಂದು ಮಾಜಿ ಸಂಸದ ಡಿಕೆ ಸುರೇಶ್ (DK Suresh)​​ ಅವರು ಪದೆಪದೆ ಹೇಳುತ್ತಿದ್ದರು. ಡಿಕೆ ಸುರೇಶ ಅವರ ಹೇಳಿಕೆಗೆ ಡಿಕೆ ಶಿವಕುಮಾರ್​ ಅವರು ಇಂದು (ಜೂ.19) ನೀಡಿರುವ ಹೇಳಿಕೆ ಪುಷ್ಟಿ ನೀಡಿದೆ. ಅಲ್ಲದೆ ಚನ್ನಪಟ್ಟಣ ಕ್ಷೇತ್ರದಲ್ಲಿ ಅಭ್ಯರ್ಥಿಯಾಗುವುದರ ಹಿಂದೆ ಕಾರಣಗಳಿವೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರು ಬುಧವಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಟೆಂಪಲ್​ ರನ್​ ನಡೆಸಿದರು. ಒಂದೇ ದಿನ 14 ದೇವಾಲಯಗಳಿಗೆ ಭೇಟಿ ನೀಡಿದರು. ದೇವಸ್ಥಾನಗಳಿಗೆ ಭೇಟಿ ನಿಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್​ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.

“ಚನ್ನಪಟ್ಟಣ ನನ್ನ ಹೃದಯವಿದ್ದಂತೆ, ಚನ್ನಪಟ್ಟಣವನ್ನು ಪ್ರೀತಿಸ್ತೇನೆ. ಚನ್ನಪಟ್ಟಣ ರಾಜಕೀಯ ಜೀವನ ಕೊಟ್ಟ ಕ್ಷೇತ್ರ. ನಾಲ್ಕು‌ ಬಾರಿ ಅಲ್ಲಿನ ಜನರು ನನಗೆ ಆಶೀರ್ವಾದ ಮಾಡಿದ್ದಾರೆ. ಕಷ್ಟ ಕಾಲದಲ್ಲಿ ಚನ್ನಪಟ್ಟಣ ಜನ ಕೈ ಹಿಡಿದಿದ್ದಾರೆ. ಕನಕಪುರ ಕ್ಷೇತ್ರದಂತೆ ಚನ್ನಪಟ್ಟಣವನ್ನೂ ಅಭಿವೃದ್ಧಿ ಮಾಡುತ್ತೇನೆ” ಎಂದರು.

ಚನ್ನಪಟ್ಟಣದಿಂದ ಸ್ಪರ್ಧಿಸುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು “ವಿಧಿಯೇ ಇಲ್ಲ, ಜನರು ಏನು ಹೇಳುತ್ತಾರೆ ಹಾಗೆ ಮಾಡುತ್ತೇನೆ” ಎಂದು ಹೇಳುವ ಮೂಲಕ ಚನ್ನಪಟ್ಣಣ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಡಿಕೆ ಶಿವಕುಮಾರ್​ ಸಜ್ಜಾಗಿದ್ದಾರೆ ಎಂಬ ಅನುಮಾನ ಮೂಡಿದೆ.

ಇದನ್ನೂ ಓದಿ: ಇವಿಎಂ ಮಿಷನ್ ಮೇಲಿನ ಅನುಮಾನ: ಎಲಾನ್ ಮಸ್ಕ್ ಬೆಂಬಲಿಸಿ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

ಡಿಕೆ ಶಿವಕುಮಾರ್​ ಒಂದೇ ವೇಳೆ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದರೇ ಕನಕಪುರ ವಿಧಾನಸಭಾ ಕ್ಷೇತ್ರ ತೆರವಾಗಲಿದೆ. ತಮ್ಮಿಂದ ತೆರವಾಗುವ ಕನಕಪುರ ವಿಧಾನಸಭಾ ಕ್ಷೇತ್ರವನ್ನು ಭವಿಷ್ಯದಲ್ಲಿ ತಮ್ಮ ಸಹೋದರ ಡಿಕೆ ಸುರೇಶ್​ ಅವರಿಗೆ ಬಿಟ್ಟುಕೊಡುವ ಚಿಂತನೆ ಇದೆ. ಹೀಗಾಗಿ, ಡಿಕೆ ಸಹೋದರರು ಟೆಂಪಲ್​ ರನ್​​ ಮೂಲಕ ಚನ್ನಪಟ್ಟಣದಲ್ಲಿ ಹವಾ ಹೇಗಿದೆ ಎಂದು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ಡಿಕೆ ಶಿವಕುಮಾರ್ ಚನ್ನಪಟ್ಟಣ ಸ್ಪರ್ಧೆ ಹಿಂದಿನ ಕಾರಣಗಳು

  1. ಕನಕಪುರದಲ್ಲಿ ಅಧಿಪತ್ಯ ಸಾಧಿಸಿರುವ ಡಿಕೆ ಸಹೋದರರಿಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಿಂದಲೇ ನಿರೀಕ್ಷಿಸಿದ ಮತ ದೊರೆಯಲಿಲ್ಲ. ಜೊತೆಗೆ ಬದ್ಧ ವೈರಿಯಾಗಿರುವ ದೇವೇಗೌಡರ ಕುಟುಂಬದ ವಿರುದ್ಧ ಸೋಲು ಕಂಡರು, ಇದರಿಂದ ಕುದ್ದು ಹೋಗಿರುವ ಡಿಕೆ ಸಹೋದರರು, ಭದ್ರಕೋಟೆಯಲ್ಲಿಯೇ ಹೆಚ್​​ಡಿ ಕುಮಾರಸ್ವಾಮಿ ಅವರನ್ನು ಸೋಲಿಸಲು ಪಣ ತೊಟ್ಟಿದ್ದಾರೆ.
  2. ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್​ ಗೆಲುವು ಸಾಧಿಸಿದರೆ ಜೆಡಿಎಸ್​ನ ಭದ್ರಕೋಟೆಯಾಗಿರುವ ಚನ್ನಪಟ್ಟಣವನ್ನು ತಮ್ಮ ವಶಕ್ಕೆ ತೆಗೆದುಕೊಂಡಂತಾಗುತ್ತದೆ. ಈ ಖುಷಿಯ ಜೊತೆಗೆ ಜಿಲ್ಲೆಯಲ್ಲಿ ಜೆಡಿಎಸ್​ ಅನ್ನು ರಾಜಕೀಯವಾಗಿ ಮುಗಿಸಬಹುದು ಎಂಬುವುದು ಅವರ ಲೆಕ್ಕಾಚಾರ.
  3. ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್​ ಗೆದ್ದರೆ, ಕನಕಪುರ ಕ್ಷೇತ್ರದಿಂದ ಡಿಕೆ ಸುರೇಶ್​ ಅವರನ್ನು ಕಣಕ್ಕಿಳಿಸಿ, ಅದನ್ನೂ ಗೆಲ್ಲುವ ಇರಾದೆ ಡಿಕೆ ಶಿವಕುಮಾರ್​ ಅವರದ್ದು.
  4. ಚನ್ನಪಟ್ಟಣ ಹಾಗೂ ರಾಮನಗರ ಕ್ಷೇತ್ರದಿಂದ ಗೆಲುವು ಸಾಧಿಸಿದರೆ, ಸಿಎಂ ಆಗಬಹುದು ಎಂಬ ನಂಬಿಕೆ ಡಿಕೆ ಶಿವಕುಮಾರ್ ಅವರದ್ದು. ಈ ಕ್ಷೇತ್ರ ದೇವಮೂಲೆಯಲ್ಲಿರುವುದರಿಂದ ಇಲ್ಲಿನ ಗೆಲುವು ಅದೃಷ್ಟದ ಸಂಕೇತ ಎನ್ನುವುದು ವಾಡಿಕೆ.
  5. ಕಳೆದ ಚುನಾವಣೆಯಲ್ಲೇ ಚನ್ನಪಟ್ಟಣದಿಂದ ಸ್ಪರ್ಧಿಸುವ ಇಂಗಿತವನ್ನು ಡಿಕೆ ಶಿವಕುಮಾರ್ ವ್ಯಕ್ತಪಡಿಸಿದ್ದರು.

ಚನ್ನಪಟ್ಟಣ ಮತ್ತು ರಾಮನಗರ ವಿಧಾನಸಭೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಹೆಚ್​ಡಿ ಕುಮಾರಸ್ವಾಮಿ, ಹೆಚ್​ಡಿ ದೇವೇಗೌಡ ಮತ್ತು ಕೆಂಗಲ್​ ಹನುಮಂತಯ್ಯ ಹಿಂದೆ ರಾಜ್ಯದ ಮುಖ್ಯಮಂತ್ರಿಯಾದವರು. ಇದೇ ಲೆಕ್ಕಾಚಾರದಲ್ಲಿ ಡಿಕೆ ಶಿವಕುಮಾರ್ ಅವರು ಕೂಡ ಇದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:52 pm, Wed, 19 June 24

ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ