ಕಾಂಗ್ರೆಸ್ ಎಷ್ಟೇ ಟೋಕನ್ ಕೊಟ್ಟರೂ ಗೆಲ್ಲುವುದು ಎನ್​ಡಿಎ: ಜೋಶಿ ವಿಶ್ವಾಸ

ಸಂಡೂರು ಕ್ಷೇತ್ರದಲ್ಲಿ ಗುರುವಾರ ನಡೆದ ಸಿಎಂ ಸಿದ್ದರಾಮಯ್ಯ ಅವರ ಪ್ರಚಾರ ಕಾರ್ಯಕ್ರಮಕ್ಕೆ ಹಣ ನೀಡಿ ಮಹಿಳೆಯರನ್ನು ಕರೆಸಿಕೊಂಡ ಆರೋಪ ಇದೀಗ ಕೇಳಿಬಂದಿತ್ತು. ಈ ಕುರಿತಾಗಿ ವಿಡಿಯೋವೊಂದು ವೈರಲ್ ಆಗಿತ್ತು. ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್​ ವಿರುದ್ಧ ಸಚಿವ ಪ್ರಹ್ಲಾದ್​ ಜೋಶಿ ಗರಂ ಆಗಿದ್ದಾರೆ.

ಕಾಂಗ್ರೆಸ್ ಎಷ್ಟೇ ಟೋಕನ್ ಕೊಟ್ಟರೂ ಗೆಲ್ಲುವುದು ಎನ್​ಡಿಎ: ಜೋಶಿ ವಿಶ್ವಾಸ
ಪ್ರಹ್ಲಾದ್​ ಜೋಶಿ
Follow us
ವಿವೇಕ ಬಿರಾದಾರ
|

Updated on: Nov 09, 2024 | 12:50 PM

ಹುಬ್ಬಳ್ಳಿ, ನವೆಂಬರ್​​ 09: ರಾಜ್ಯ ವಿಧಾನಸಭೆ ಉಪಚುನಾವಣೆಯಲ್ಲಿ (ByPoll) ಕಾಂಗ್ರೆಸ್ (Congress) “ಟೋಕನ್” ಮೊರೆ ಹೋಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಇಂದು (ನ.09) ಮಾಧ್ಯಮಗಳೊಂದಿಗೆ ಮಾತನಾಡಿ, ಶತಾಯ ಗತಾಯ ಉಪಚುನಾವಣೆ ಗೆಲ್ಲಬೇಕೆಂಬ ಭರದಲ್ಲಿ ಕಾಂಗ್ರೆಸ್ ಪಕ್ಷ ಟೋಕನ್ ಮೂಲಕ ಹಣ ಹಂಚಿಕೆ ಶುರು ಮಾಡಿದೆ ಎಂದು ಹೇಳಿದರು. ಟೋಕನ್ ಹಂಚಿದ ಕಾಂಗ್ರೆಸ್ ಅದನ್ನು ತೋರಿಸಿದವರಿಗೆ ಹಣ ಕೊಟ್ಟು ಕಳಿಸುವ ವ್ಯವಸ್ಥೆ ಮಾಡಿದೆ ಎಂಬುದು ಮಾದ್ಯಮಗಳಲ್ಲಿ ವರದಿಯಾಗಿದೆ ಎಂದು ಉಲ್ಲೇಖಿಸಿದ ಸಚಿವರು, ಕಾಂಗ್ರೆಸ್ ಲೂಟಿ ಮಾಡಿದ್ದನ್ನು ಹೀಗೆ ಹಂಚುತ್ತಿದೆ ಎಂದು ದೂರಿದರು.

ಕಾಂಗ್ರೆಸ್ ಅದೆಷ್ಟೇ ಟೋಕನ್ ಕೊಟ್ಟರು ಗೆಲ್ಲುವುದು ನಾವೇ:

ರಾಜ್ಯದಲ್ಲಿ ನಡೆಯುತ್ತಿರುವ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅದೆಷ್ಟೇ ಟೋಕನ್, ಹಣ ಹಂಚಿದರೂ ಗೆಲ್ಲುವುದು ನಾವೇ ಎಂದು ಜೋಶಿ ಹೇಳಿದರು.

ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಪರ ಒಲವಿದೆ. ಪ್ರಚಾರ ವೇಳೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹಾಗಾಗಿ ಎನ್​ಡಿಎ ಅಭೂತಪೂರ್ವ ಗೆಲುವು ಸಾಧಿಸಲಿದೆ. ಸಂಡೂರು, ಶಿಗ್ಗಾವಿಯಲ್ಲಿ ಬಿಜೆಪಿ ಮತ್ತು ಚನ್ನಪಟ್ಟಣದಲ್ಲಿ ಜೆಡಿಎಸ್ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಎಂಎಲ್ಸಿ ರವಿಕುಮಾರ್, ಸೀಮಾ ಮಸೂತಿ ಮುಂತಾದವರಿದ್ದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ
4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ
ರಿಲ್ಯಾಕ್ಸ್ ಮೂಡ್​ನಲ್ಲಿರುವ ಕಾಡಾನೆ ಹಿಂಡಿನ ದೃಶ್ಯ ಡ್ರೋನ್​ನಲ್ಲಿ ಸೆರೆ​
ರಿಲ್ಯಾಕ್ಸ್ ಮೂಡ್​ನಲ್ಲಿರುವ ಕಾಡಾನೆ ಹಿಂಡಿನ ದೃಶ್ಯ ಡ್ರೋನ್​ನಲ್ಲಿ ಸೆರೆ​
ನನ್ನನ್ನು ಕೆಳಗಿಳಿಸುವ ಪ್ರಯತ್ನಗಳಿಗೆ ಜನರೇ ಉತ್ತರ ನೀಡಬೇಕು: ಸಿದ್ದರಾಮಯ್ಯ
ನನ್ನನ್ನು ಕೆಳಗಿಳಿಸುವ ಪ್ರಯತ್ನಗಳಿಗೆ ಜನರೇ ಉತ್ತರ ನೀಡಬೇಕು: ಸಿದ್ದರಾಮಯ್ಯ
ಜೋಡಿ ಬದಲಾಯಿಸಲು ಅನುಷಾ ರೈಗೆ ಆಫರ್​ ನೀಡಿದ ಬಿಗ್ ಬಾಸ್; ಕಾದಿದೆ ಟ್ವಿಸ್ಟ್
ಜೋಡಿ ಬದಲಾಯಿಸಲು ಅನುಷಾ ರೈಗೆ ಆಫರ್​ ನೀಡಿದ ಬಿಗ್ ಬಾಸ್; ಕಾದಿದೆ ಟ್ವಿಸ್ಟ್
ಕಾಮಗಾರಿಗಳಲ್ಲಿ ಮೀಸಲಾತಿಯ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ: ಖರ್ಗೆ
ಕಾಮಗಾರಿಗಳಲ್ಲಿ ಮೀಸಲಾತಿಯ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ: ಖರ್ಗೆ
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗಲೇ ಹೃದಯಾಘಾತದಿಂದ ಸಾವು!
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗಲೇ ಹೃದಯಾಘಾತದಿಂದ ಸಾವು!
ಮೈಸೂರಿನ ಎಲ್ಲ ಕಾರ್ಯಕ್ರಮಗಳಲ್ಲಿ ತಂದೆಯನ್ನು ಹಿಂಬಾಲಿಸುತ್ತಿರುವ ಯತೀಂದ್ರ
ಮೈಸೂರಿನ ಎಲ್ಲ ಕಾರ್ಯಕ್ರಮಗಳಲ್ಲಿ ತಂದೆಯನ್ನು ಹಿಂಬಾಲಿಸುತ್ತಿರುವ ಯತೀಂದ್ರ
ಮುಳ್ಳಯ್ಯನಗಿರಿಯಲ್ಲಿ ಎಣ್ಣೆ ಪಾರ್ಟಿ ಮಾಡಿ ಪ್ರವಾಸಿಗರ ಹುಚ್ಚಾಟ
ಮುಳ್ಳಯ್ಯನಗಿರಿಯಲ್ಲಿ ಎಣ್ಣೆ ಪಾರ್ಟಿ ಮಾಡಿ ಪ್ರವಾಸಿಗರ ಹುಚ್ಚಾಟ
ಎಂಟನೇ ತರಗತಿವರೆಗೆ ಓದಿರುವ ಮಗ ಗ್ಯಾರೇಜಲ್ಲಿ ಕೆಲಸ ಮಾಡುತ್ತಾನೆ: ತಾಯಿ
ಎಂಟನೇ ತರಗತಿವರೆಗೆ ಓದಿರುವ ಮಗ ಗ್ಯಾರೇಜಲ್ಲಿ ಕೆಲಸ ಮಾಡುತ್ತಾನೆ: ತಾಯಿ
ಸಂಡೂರಿನ ಸಿದ್ದಾಪುರದಲ್ಲಿ ಪ್ರಜಾಪ್ರಭುತ್ವದ ಹಬ್ಬ, ಊರಹಬ್ಬ ಒಟ್ಟಿಗೆ ಬಂದಿವೆ
ಸಂಡೂರಿನ ಸಿದ್ದಾಪುರದಲ್ಲಿ ಪ್ರಜಾಪ್ರಭುತ್ವದ ಹಬ್ಬ, ಊರಹಬ್ಬ ಒಟ್ಟಿಗೆ ಬಂದಿವೆ