ಕಾಂಗ್ರೆಸ್ ಎಷ್ಟೇ ಟೋಕನ್ ಕೊಟ್ಟರೂ ಗೆಲ್ಲುವುದು ಎನ್​ಡಿಎ: ಜೋಶಿ ವಿಶ್ವಾಸ

ಸಂಡೂರು ಕ್ಷೇತ್ರದಲ್ಲಿ ಗುರುವಾರ ನಡೆದ ಸಿಎಂ ಸಿದ್ದರಾಮಯ್ಯ ಅವರ ಪ್ರಚಾರ ಕಾರ್ಯಕ್ರಮಕ್ಕೆ ಹಣ ನೀಡಿ ಮಹಿಳೆಯರನ್ನು ಕರೆಸಿಕೊಂಡ ಆರೋಪ ಇದೀಗ ಕೇಳಿಬಂದಿತ್ತು. ಈ ಕುರಿತಾಗಿ ವಿಡಿಯೋವೊಂದು ವೈರಲ್ ಆಗಿತ್ತು. ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್​ ವಿರುದ್ಧ ಸಚಿವ ಪ್ರಹ್ಲಾದ್​ ಜೋಶಿ ಗರಂ ಆಗಿದ್ದಾರೆ.

ಕಾಂಗ್ರೆಸ್ ಎಷ್ಟೇ ಟೋಕನ್ ಕೊಟ್ಟರೂ ಗೆಲ್ಲುವುದು ಎನ್​ಡಿಎ: ಜೋಶಿ ವಿಶ್ವಾಸ
ಪ್ರಹ್ಲಾದ್​ ಜೋಶಿ
ವಿವೇಕ ಬಿರಾದಾರ

Updated on: Nov 09, 2024 | 12:50 PM

ಹುಬ್ಬಳ್ಳಿ, ನವೆಂಬರ್​​ 09: ರಾಜ್ಯ ವಿಧಾನಸಭೆ ಉಪಚುನಾವಣೆಯಲ್ಲಿ (ByPoll) ಕಾಂಗ್ರೆಸ್ (Congress) “ಟೋಕನ್” ಮೊರೆ ಹೋಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಇಂದು (ನ.09) ಮಾಧ್ಯಮಗಳೊಂದಿಗೆ ಮಾತನಾಡಿ, ಶತಾಯ ಗತಾಯ ಉಪಚುನಾವಣೆ ಗೆಲ್ಲಬೇಕೆಂಬ ಭರದಲ್ಲಿ ಕಾಂಗ್ರೆಸ್ ಪಕ್ಷ ಟೋಕನ್ ಮೂಲಕ ಹಣ ಹಂಚಿಕೆ ಶುರು ಮಾಡಿದೆ ಎಂದು ಹೇಳಿದರು.
ಟೋಕನ್ ಹಂಚಿದ ಕಾಂಗ್ರೆಸ್ ಅದನ್ನು ತೋರಿಸಿದವರಿಗೆ ಹಣ ಕೊಟ್ಟು ಕಳಿಸುವ ವ್ಯವಸ್ಥೆ ಮಾಡಿದೆ ಎಂಬುದು ಮಾದ್ಯಮಗಳಲ್ಲಿ ವರದಿಯಾಗಿದೆ ಎಂದು ಉಲ್ಲೇಖಿಸಿದ ಸಚಿವರು, ಕಾಂಗ್ರೆಸ್ ಲೂಟಿ ಮಾಡಿದ್ದನ್ನು ಹೀಗೆ ಹಂಚುತ್ತಿದೆ ಎಂದು ದೂರಿದರು.

ಕಾಂಗ್ರೆಸ್ ಅದೆಷ್ಟೇ ಟೋಕನ್ ಕೊಟ್ಟರು ಗೆಲ್ಲುವುದು ನಾವೇ:

ರಾಜ್ಯದಲ್ಲಿ ನಡೆಯುತ್ತಿರುವ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅದೆಷ್ಟೇ ಟೋಕನ್, ಹಣ ಹಂಚಿದರೂ ಗೆಲ್ಲುವುದು ನಾವೇ ಎಂದು ಜೋಶಿ ಹೇಳಿದರು.

ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಪರ ಒಲವಿದೆ. ಪ್ರಚಾರ ವೇಳೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹಾಗಾಗಿ ಎನ್​ಡಿಎ ಅಭೂತಪೂರ್ವ ಗೆಲುವು ಸಾಧಿಸಲಿದೆ. ಸಂಡೂರು, ಶಿಗ್ಗಾವಿಯಲ್ಲಿ ಬಿಜೆಪಿ ಮತ್ತು ಚನ್ನಪಟ್ಟಣದಲ್ಲಿ ಜೆಡಿಎಸ್ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಎಂಎಲ್ಸಿ ರವಿಕುಮಾರ್, ಸೀಮಾ ಮಸೂತಿ ಮುಂತಾದವರಿದ್ದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Loading...
Unable to load recommendations.
Follow Us