Sign In

By signing in or creating an account, you agree with Associated Broadcasting Company's Terms & Conditions and Privacy Policy.

JDS-BJP Alliance: ಮುಂದಿಟ್ಟ ಹೆಜ್ಜೆ ಹಿಂತೆಗೆದುಕೊಂಡ ದಳಪತಿ, ಕಮಲ-ದಳ ದೋಸ್ತಿ ವಿಳಂಬ?

ಇನ್ನೇನು ಕರ್ನಾಟಕದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಎನ್​ಡಿಎ ಮೈತ್ರಿಕೂಟದ ಸಭೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಬಾಗವಹಿಸುತ್ತಾರೆ ಎನ್ನುವಷ್ಟರಲ್ಲೇ ಅವರು ಒಂದು ಹೆಜ್ಜೆ ಹಿಂದೆ ಇಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕಮಲ-ದಳ ದೋಸ್ತಿಗೆ ಕೊಂಚ ವಿಳಂಬವಾಗಲಿದೆ.

JDS-BJP Alliance: ಮುಂದಿಟ್ಟ ಹೆಜ್ಜೆ ಹಿಂತೆಗೆದುಕೊಂಡ ದಳಪತಿ, ಕಮಲ-ದಳ ದೋಸ್ತಿ ವಿಳಂಬ?
ಜೆಡಿಎಸ್-ಬಿಜೆಪಿ
Follow us
Sunil MH
| Updated By: ರಮೇಶ್ ಬಿ. ಜವಳಗೇರಾ

Updated on: Jul 19, 2023 | 9:04 AM

ಬೆಂಗಳೂರು, (ಜುಲೈ 19): ಬಿಜೆಪಿ(BJP) ಜೊತೆ ಸಖ್ಯ ಬೆಳೆಸಲು ಹೆಚ್​ಡಿ ಕುಮಾರಸ್ವಾಮಿ(HD Kumaraswamy( ಉತ್ಸುಕರಾಗಿದ್ದಾರೆ. ತೆನೆ ಹೊತ್ತ ಮಹಿಳೆ ಬಹುತೇಕ ಕಮಲ ಮುಡಿಯುವುದು ಫಿಕ್ಸ್ ಆಗಿದೆ. ಆದ್ರೆ, ಕಮಲ-ದಳ ದೋಸ್ತಿಗೆ ಕೊಂಚ ವಿಳಂಬವಾಗಲಿದೆ. ಹೌದು…ಎನ್​ಡಿಎ(NDA) ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್​ನಲ್ಲಿ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಇಂದಿನ ತಮ್ಮ ದೆಹಲಿ ಪ್ರವಾಸ ಸೋಮವಾರಕ್ಕೆ ಮುಂದೂಡಿದ್ದಾರೆ. ಇದರೊಂದಿಗೆ ಬಿಜೆಪಿ ಜೊತೆಗಿನ ಮೈತ್ರಿ ಮಾಡಿಕೊಳ್ಳಲು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ಎನ್​ಡಿಎ ಮೈತ್ರಿಕೂಟ ಸಭೆಯಿಂದ ದೂರ ಉಳಿದ ಕುಮಾರಸ್ವಾಮಿ, ಸಂಚಲನ ಮೂಡಿಸಿದ ದಳಪತಿಗಳ ನಡೆ

ಎನ್​ಡಿಎ ಮೈತ್ರಿಕೂಟಕ್ಕೆ ಸೇರಿದರೆ ಕೆಲ ಸಮುದಾಯಗಳ ನೇರ ವಿರೋಧ ಕಟ್ಟಿಕೊಳ್ಳಬೇಕು. ಇದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಲು ಕಷ್ಟವಾಗುತ್ತದೆ. ಹೀಗಾಗಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಆತುರದ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಈ ಹಿಂದೆ ಕಾಂಗ್ರೆಸ್ ಜೊತೆ ನೇರ ಒಪ್ಪಂದ ಮಾಡಿಕೊಂಡು ಲೋಕಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನಕ್ಕೆ ಮಾತ್ರ ಸೀಮಿತವಾದವು ಎನ್ನುವ ಅಭಿಪ್ರಾಯಗಳನ್ನು ಕೆಲ ಜೆಡಿಎಸ್ ಶಾಸಕರು ಮೊನ್ನೆ ನಡೆದ ಸಭೆಯಲ್ಲಿ ತಿಳಿಸಿದ್ದಾರೆ.

ಮೈತ್ರಿ ಬದಲು ಸ್ವತಂತ್ರವಾಗಿ ಸ್ಪರ್ಧೆ ಮಾಡಿದರೆ ಎರಡರಿಂದ ಮೂರು ಸ್ಥಾನ ಗೆಲ್ಲಲು ಅವಕಾಶವಿದೆ. ಬಿಜೆಪಿ ಜೊತೆ ಕೈಜೋಡಿಸಿದರೆ ಕಾಂಗ್ರೆಸ್​ಗೆ ಅಸ್ತ್ರವಾದಂತಹಾಗುತ್ತದೆ. ಮೈತ್ರಿಯ ವಿಚಾರವನ್ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಸ್ತ್ರವಾಗಿ ಬಳಸಿಕೊಳ್ಳುತ್ತದೆ. ಇದರಿಂದ ಹಳೆ ಮೈಸೂರು ಭಾಗದಲ್ಲಿ ಮತ್ತೆ ಜೆಡಿಎಸ್ ಗೆ ಹಿನ್ನಡೆ ಆಗುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆಯಿಂದ ಹೆಜ್ಜೆ ಇಟ್ಟರೆ ಒಳ್ಳೆಯದು ಎಂದಿದ್ದಾರೆ. ಈ ಮೂಲಕ ಶಾಸಕರು ಎನ್​ಡಿಎ ಜೊತೆ ಮೈತ್ರಿ ಮಾಡಿಕೊಳ್ಳುವುದು ಬೇಡ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೈತಿಯ ವಿಚಾರವಾಗಿ ಸದ್ಯಕ್ಕೆ ಶಾಸಕರಿಂದ ಸಂಪೂರ್ಣ ಒಮ್ಮತ ಮೂಡಿಬರದ ಕಾರಣ ದಳಪತಿಗಳು ಸದ್ಯಕ್ಕೆ ಬಿಜೆಪಿಯಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ.

ಎನ್‌ಡಿಎ ಮೈತ್ರಿಕೂಟವನ್ನ ಮತ್ತೆ ಬಲಪಡಿಸಿ ಅಧಿಕಾರದ ಗದ್ದುಗೆ ಉಳಿಸಿಕೊಳ್ಳೋ ಪ್ರಯತ್ನಕ್ಕೆ ಮುಂದಾಗಿರುವ ಬಿಜೆಪಿ, ಕರ್ನಾಟಕದಲ್ಲಿ ಜೆಡಿಎಸ್‌ಗೂ ಗಾಳ ಹಾಕಿದೆ. ಇದಕ್ಕೆ ಕುಮಾರಸ್ವಾಮಿ ಸಹ ಬಿಜೆಪಿ ಜೊತೆ ಮೈತ್ರಿಗೆ ಒಲವು ಹೊಂದಿದ್ದಾರೆ ಎನ್ನಲಾಗಿದೆ. ಆದ್ರೆ, ಇದೀಗ ಪಕ್ಷದಲ್ಲಿ ಒಮ್ಮತ ಮೂಡದ ಕಾರಣ ಮೈತ್ರಿ ಬಗ್ಗೆ ಹೆಚ್​ಡಿಕೆ ಇನ್ನಷ್ಟು ಸಾಧಕ-ಬಾಧಕಗಳ ಬಗ್ಗೆ ಚಿಂತನೆ ನಡೆಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ