AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸಂಪುಟ ಸರ್ಕಸ್​ ನಡುವೆ ಡಿಕೆ ಬ್ರದರ್ಸ್​ ನಡೆ ಸಸ್ಪೆನ್ಸ್​: ಕಾಂಗ್ರೆಸ್​ ಪಾಳಯದಲ್ಲಿ ಆಗ್ತಿರೋದೇನು?

ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಸಂಪುಟ ಪುನಾರಚನೆಗೆ ಸಿಎಂ ಒಲವು ತೋರಿದರೆ, ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​ ವಿರೋಧ ವ್ಯಕ್ತಪಡಿಸಿದ್ದಾರೆ. ಖಾಲಿ ಸ್ಥಾನಗಳ ಭರ್ತಿ, ಪರಿಷತ್ ಸ್ಥಾನಗಳ ಬಗ್ಗೆಯೂ ಚರ್ಚೆಯಾಗಿದ್ದು, ಅಂತಿಮ ನಿರ್ಧಾರ ಹೈಕಮಾಂಡ್ ಕೈಯಲ್ಲಿದೆ ಎನ್ನಲಾಗಿದೆ. ಈ ನಡುವೆ ಮಾಜಿ ಸಂಸದ ಡಿ.ಕೆ. ಸುರೇಶ್​ ಕೂಡ ದೆಹಲಿಗೆ ಪ್ರಯಾಣ ಬೆಳೆಸಿರೋದು ಭಾರಿ ಕುತೂಹಲ ಮೂಡಿಸಿದೆ.

ಸಚಿವ ಸಂಪುಟ ಸರ್ಕಸ್​ ನಡುವೆ ಡಿಕೆ ಬ್ರದರ್ಸ್​ ನಡೆ ಸಸ್ಪೆನ್ಸ್​: ಕಾಂಗ್ರೆಸ್​ ಪಾಳಯದಲ್ಲಿ ಆಗ್ತಿರೋದೇನು?
ಡಿ.ಕೆ. ಶಿವಕುಮಾರ್​ ಮತ್ತು ಡಿ.ಕೆ. ಸುರೇಶ್​
Pramod Shastri G
| Edited By: |

Updated on:Nov 16, 2025 | 9:20 AM

Share

ಬೆಂಗಳೂರು, ನವೆಂಬರ್​ 16: ರಾಜ್ಯದಲ್ಲಿ ನವೆಂಬರ್​ ಕ್ರಾಂತಿ ಚರ್ಚೆ ನಡುವೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರ್ನಾಟಕದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇಂದಿನ ಹೈದರಾಬಾದ್ ಪ್ರವಾಸ ರದ್ದುಪಡಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್​​, ದೆಹಲಿಯಲ್ಲೇ ತಂಗಲಿದ್ದಾರೆ. ಇತ್ತ ಮಾಜಿ ಸಂಸದ ಡಿ.ಕೆ.ಸುರೇಶ್ ಕೂಡ ಬೆಂಗಳೂರಿನಿಂದ ದೆಹಲಿಗೆ ಹೊರಟಿರೋದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ರಾಹುಲ್ ಗಾಂಧಿ ಭೇಟಿಗೂ ಡಿ.ಕೆ. ಶಿವಕುಮಾರ್ ಈಗಾಗಲೇ ಸಮಯ ಕೇಳಿದ್ದಾರೆ. ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ದೆಹಲಿ ಪ್ರವಾಸ ಹಿನ್ನೆಲೆ, ಸೋಮವಾರವೂ ದೆಹಲಿಯಲ್ಲೇ ಡಿಕೆಶಿ ತಂಗಲಿದ್ದಾರೆ. ಸಂಪುಟ ಪುನಾರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದು, ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆಗೆ ಡಿಸಿಎಂ ಡಿಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಈ ಸಂಬಂಧ ರಾಹುಲ್ ಭೇಟಿಯಾಗಿ ವಿಚಾರ ಪ್ರಸ್ತಾಪಿಸುವ ಸಾಧ್ಯತೆ ಎನ್ನಲಾಗಿದೆ.

ಇದನ್ನೂ ಓದಿ: ಸಂಪುಟ ಪುನಾರಚನೆಗೆ ಹೈಕಮಾಂಡ್​ ಗ್ರೀನ್ ​ಸಿಗ್ನಲ್

ರಾಜ್ಯ ಸಚಿವ ಸಂಪುಟ ಪುನಾರಚನೆ ಬದಲಾಗಿ 4 ಪ್ರಮುಖ ಸ್ಥಾನಗಳ ಬಗ್ಗೆ ಚರ್ಚೆ ನಡೆದಿದೆ. ಬಿ.ನಾಗೇಂದ್ರ, ರಾಜಣ್ಣರಿಂದ ಖಾಲಿಯಾದ ಸ್ಥಾನ ತುಂಬಲು ನಿರ್ಧಾರಿಸಲಾಗಿದ್ದು, ಪರಿಷತ್ ಸಭಾಪತಿ ಮತ್ತು ಉಪಸಭಾಪತಿ ಆಯ್ಕೆ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ವಿಧಾನಪರಿಷತ್​ನಲ್ಲಿ ಕಾಂಗ್ರೆಸ್​ಗೆ ಹೆಚ್ಚು ಸ್ಥಾನ‌ ಸಿಕ್ಕಿರುವ ಹಿನ್ನೆಲೆ, ಸಭಾಪತಿ ಸ್ಥಾನದ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ. ಇನ್ನೊಂದೆಡೆ ಹೊಸಬರಿಗೆ ಅವಕಾಶ ನೀಡಬೇಕಿರುವ ಕಾರಣ ದೊಡ್ಡ ಪ್ರಮಾಣದಲ್ಲಿ ಪುನಾರಚನೆಗೆ ಹೈಕಮಾಂಡ್ ನಾಯಕರೊಬ್ಬರಿಂದ ಸಲಹೆ ವ್ಯಕ್ತವಾಗಿದೆ ಎನ್ನಲಾಗಿದೆ.

ಹಾಲಿ ಸಚಿವರಿಗೆ ಪಕ್ಷದ ಕೆಲಸ ನೀಡಿ ಎಂದು AICC ಪ್ರಧಾನ ಕಾರ್ಯದರ್ಶಿ ಹೇಳಿದ್ದು, ಎಲ್ಲಾ ಆಯ್ಕೆಗಳನ್ನು ಕಾಂಗ್ರೆಸ್ ಹೈಕಮಾಂಡ್ ಮುಕ್ತವಾಗಿಟ್ಟಿದೆ. ಸಂಪುಟ ವಿಚಾರವಾಗಿ ನಾಳೆ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದು, ನ.18ರಂದು ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಕೂಡ ದೆಹಲಿಗೆ ಆಗಮಿಸಲಿದ್ದಾರೆ. ಹೀಗಾಗಿ ವೇಣುಗೋಪಾಲ್ ಜೊತೆ ಚರ್ಚಿಸಿದ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾಜರ್ಜನ ಖರ್ಗೆ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸುವ ಸಾಧ್ಯತೆ ಇದೆ. ನಾಳಿನ ಸಭೆಯಲ್ಲಿ ಸಚಿವ ಸಂಪುಟದ ಬಗ್ಗೆ ಚರ್ಚೆಯಾಗುವ ನಿರೀಕ್ಷೆ ಇದ್ದು, ಅಂತಿಮವಾಗಿ ಸಂಪುಟ ಸ್ವರೂಪದ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:12 am, Sun, 16 November 25

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ