ದೆಹಲಿಯಲ್ಲಿ ಕರ್ನಾಟಕ ಬಿಜೆಪಿ ನಾಯಕರ ಜತೆ ಹೈಕಮಾಂಡ್ ಸಭೆ: ಕಾಂಗ್ರೆಸ್ ಜಾತಿ ಸಮೀಕ್ಷೆ ಅಸ್ತ್ರಕ್ಕೆ ಪ್ರತ್ಯಸ್ತ್ರ ರೂಪಿಸಲು ಚರ್ಚೆ
ದೆಹಲಿಯಲ್ಲಿ ರಾಜ್ಯ ನಾಯಕರೊಂದಿಗೆ ಬಿಜೆಪಿ ವರಿಷ್ಠರು ಒಂದೂವರೆ ಗಂಟೆ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್‌ನ ಜಾತಿ ಸಮೀಕ್ಷೆ ಅಸ್ತ್ರದ ಸಂಬಂಧ ಸಭೆಯಲ್ಲಿ ಚರ್ಚೆ ಆಗಿದ್ದು, ಜಾತಿ ಸಮೀಕ್ಷೆ ಅಸ್ತ್ರಕ್ಕೆ ಬಿಜೆಪಿ ಪ್ರತ್ಯಸ್ತ್ರದ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಜಾತಿ ಸಮೀಕ್ಷೆಯನ್ನು ಬಿಡುಗಡೆ ಮಾಡುವುದು ಅಷ್ಟು ಸುಲಭವಿಲ್ಲ ಎಂದು ರಾಜ್ಯ ನಾಯಕರು ತಿಳಿಸಿದ್ದಾರೆ.
ನವದೆಹಲಿ, ನವೆಂಬರ್ 02: ರಾಜ್ಯದ ಮೂವರು ಬಿಜೆಪಿ (BJP) ನಾಯಕರಾದ ಮಾಜಿ ಸಚಿವ ಈಶ್ವರಪ್ಪ, ಎಂಎಲ್‌ಸಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸಂಸದ ಪಿ.ಸಿ.ಮೋಹನ್‌ಗೆ ಬಿಜೆಪಿ ಹೈಕಮಾಂಡ್‌ನಿಂದ ಬುಲಾವ್ ಬಂದಿತ್ತು. ಈ ಹಿನ್ನೆಲೆ ರಾಜ್ಯ ನಾಯಕರು ನವದೆಹಲಿಗೆ ತೆರಳಿದ್ದು ಸಭೆಯಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ನಾಯಕರ ಜತೆ ವರಿಷ್ಠರು ಒಂದೂವರೆ ಗಂಟೆ ಚರ್ಚೆ ನಡೆಸಿದ್ದು, ಕಾಂಗ್ರೆಸ್‌ನ ಜಾತಿ ಸಮೀಕ್ಷೆ ಅಸ್ತ್ರಕ್ಕೆ ಬಿಜೆಪಿ ಪ್ರತ್ಯಸ್ತ್ರದ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.
ಒಬಿಸಿಗೆ ಬಿಜೆಪಿ ನೀಡಿರುವ ಯೋಜನೆಗಳ ಬಗ್ಗೆ ಪ್ರಚಾರ ಮಾಡಿ. ಬಿಜೆಪಿ ಒಬಿಸಿ ನಾಯಕರು ಮುಂದಾಳತ್ವ ವಹಿಸಿ ಜನರಿಗೆ ತಲುಪಿಸಿ. ಬಿಜೆಪಿ ಸಾಂಪ್ರದಾಯಿಕ ಮತಗಳು ಪಲ್ಲಟವಾಗದಂತೆ ನೋಡಿಕೊಳ್ಳಿ. ಪ್ರಧಾನಿಯೇ ಒಬಿಸಿಗೆ ಸೇರಿದವರು ಎನ್ನುವುದನ್ನು ಜನರಿಗೆ ಮನದಟ್ಟು ಮಾಡಿ ಎಂದು ರಾಜ್ಯ ಒಬಿಸಿ ನಾಯಕರಿಗೆ ಹೈಕಮಾಂಡ್ ನಾಯಕರು ಸೂಚನೆ ನೀಡಿದ್ದಾರೆ.
ಜಾತಿ ಸಮೀಕ್ಷೆ ಬಗ್ಗೆ ಪ್ರತಿಕ್ರಿಯೆ ನೀಡುವಾಗ ಸೂಕ್ಷ್ಮವಾಗಿ ಹೇಳಿಕೆ ನೀಡುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಸಭೆಯಲ್ಲಿ ವರಿಷ್ಠರು ಮನದಟ್ಟು ಮಾಡಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಜಾತಿ ಸಮೀಕ್ಷೆಯನ್ನು ಬಿಡುಗಡೆ ಮಾಡುವುದು ಅಷ್ಟು ಸುಲಭವಿಲ್ಲ ಎಂದ ಬಿಜೆಪಿ ನಾಯಕರು
ಕರ್ನಾಟಕದಲ್ಲಿ ಕಾಂಗ್ರೆಸ್ ಜಾತಿ ಸಮೀಕ್ಷೆಯನ್ನು ಬಿಡುಗಡೆ ಮಾಡುವುದು ಅಷ್ಟು ಸುಲಭ ಇಲ್ಲ. ಮುಂದುವರಿದ ಸಮುದಾಯಗಳು ವಿರೋಧ ಮಾಡುತ್ತಿವೆ. ಒಕ್ಕಲಿಗ, ಲಿಂಗಾಯತ ಸಮುದಾಯಗಳು ವಿರೋಧ ಮಾಡುತ್ತಿವೆ. ಮುಂದುವರಿದ ಜಾತಿಗಳ ವಿರೋಧ ಕಟ್ಟಿಕೊಂಡು ಸಮೀಕ್ಷೆ ಬಿಡುಗಡೆ ಮಾಡುವುದು ಕಷ್ಟ ಎಂದು ಹೈಕಮಾಂಡ್ ನಾಯಕರಿಗೆ ರಾಜ್ಯ ಒಬಿಸಿ ನಾಯಕರು ತಿಳಿಸಿದ್ದಾರೆ. ಆದರೂ ಕರ್ನಾಟಕ ರಾಜ್ಯದಲ್ಲಿ ಜಾತಿ ಸಮೀಕ್ಷೆಯನ್ನು ಬಿಡುಗಡೆ ಮಾಡುವಂತೆ ಒಬಿಸಿ ನಾಯಕರು ಒತ್ತಾಯಿಸುತ್ತೇವೆ ಎಂದು ಹೈಕಮಾಂಡ್ ನಾಯಕರಿಗೆ ರಾಜ್ಯ ನಾಯಕರು ತಿಳಿಸಿದ್ದಾರೆ.
ಇದನ್ನೂ ಓದಿ: ಈಶ್ವರಪ್ಪ ಸೇರಿ ಕರ್ನಾಟಕದ ಮೂವರು ನಾಯಕರಿಗೆ ಬಿಜೆಪಿ ಹೈಕಮಾಂಡ್ ಬುಲಾವ್: ಕಾರಣ ಏನು?
ರಾಜ್ಯ ಬಿಜೆಪಿ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಭೆ ನಡೆಸಿದ್ದಾರೆ.
ರಾಜ್ಯ ಬಿಜೆಪಿ ನಾಯಕರೊಂದಿಗೆ ನಡೆಯುತ್ತಿದ್ದ ಹೈಕಮಾಂಡ್ ಸಭೆ ಮುಗಿಸಿದ ಮಾಜಿ ಸಚಿವ ಈಶ್ವರಪ್ಪ, ಎಂಎಲ್‌ಸಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸಂಸದ ಪಿ.ಸಿ.ಮೋಹನ್ ರಾತ್ರಿ 9 ಗಂಟೆ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.