ಅಹಮದಾಬಾದ್: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (AAP) ಸಂಚಾಲಕ ಅರವಿಂದ ಕೇಜ್ರಿವಾಲ್ (Arvind Kejriwal) ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ (Ahmedabad) ಆಟೋರಿಕ್ಷಾ ಚಾಲಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದು ದೆಹಲಿಯಲ್ಲಿ ತಮ್ಮ ಪಕ್ಷಕ್ಕೆ ಸಹಾಯ ಮಾಡಿದ ರೀತಿಯಲ್ಲಿ ತಮ್ಮ ಪ್ರಯಾಣಿಕರಲ್ಲಿ ಅದನ್ನು ಪ್ರಚಾರ ಮಾಡುವ ಮೂಲಕ ಗುಜರಾತ್‌ನಲ್ಲಿ ಎಎಪಿ ಗೆಲ್ಲಲು ಸಹಾಯ ಮಾಡುವಂತೆ ಒತ್ತಾಯಿಸಿದರು. ಕೇಜ್ರಿವಾಲ್ ಅವರ ಸಂವಾದದ ನಂತರ ಸಭಿಕರಲ್ಲಿ ಒಬ್ಬ ಆಟೋ ಡ್ರೈವರ್ ನನ್ನ ಮನೆಗೆ ಊಟಕ್ಕೆ ಬನ್ನಿ ಎಂದು ಕೇಜ್ರಿವಾಲ್ ಅವರನ್ನು ಆಮಂತ್ರಿಸಿದ್ದಾರೆ. ಈ ಆಮಂತ್ರಣವನ್ನು ಕೇಜ್ರಿವಾಲ್ ಅವರು ತಕ್ಷಣವೇ ಸ್ವೀಕರಿಸಿ, ಆಯ್ತು ಊಟಕ್ಕೆ ಬರುವೆ ಎಂದಿದ್ದಾರೆ. ಎಎಪಿ ಪಕ್ಷದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಹಂಚಿಕೊಂಡ ವಿಡಿಯೊದಲ್ಲಿ ಆಟೋ ಚಾಲಕ ಕೇಜ್ರಿವಾಲ್ ಅವರನ್ನು ಊಟಕ್ಕೆ ಆಹ್ವಾನಿಸುತ್ತಿರುವುದನ್ನು ಕಾಣಬಹುದು.
ನಾನು ನಿಮ್ಮ ದೊಡ್ಡ ಅಭಿಮಾನಿ. ಪಂಜಾಬ್‌ನ ಆಟೋ ಡ್ರೈವರ್‌ನ ಮನೆಯಲ್ಲಿ ನೀವು ರಾತ್ರಿ ಊಟ ಮಾಡುತ್ತಿರುವ ವಿಡಿಯೊವನ್ನು ನಾನು ಸಾಮಾಜಿಕ ಮಾಧ್ಯಮದಲ್ಲಿ ನೋಡಿದ್ದೇನೆ. ನೀವೂ ನನ್ನ ಮನೆಗೆ ಊಟಕ್ಕೆ ಬರುತ್ತೀರಾ?” ಎಂದು ಕೇಳುತ್ತಾನೆ. ಇದಕ್ಕೆ ಕೇಜ್ರಿವಾಲ್ ಖಂಡಿತಾ, ನಾನು ನನ್ನ ಪಕ್ಷದ ಇಬ್ಬರು ಪಕ್ಷದ ಸಹೋದ್ಯೋಗಿಗಳೊಂದಿಗೆ ಭೋಜನಕ್ಕೆ ಬರುವುದಾಗಿ ಹೇಳಿದ್ದಾರೆ.
Delhi CM @ArvindKejriwal accepts a Dinner Invitation from an Autorickshaw Driver of Gujarat ❤️#TownhallWithKejriwal pic.twitter.com/0lf5kS5rkn
— AAP (@AamAadmiParty) September 12, 2022
ನಾವು ಎಷ್ಟು ಗಂಟೆಗೆ ಬರಬೇಕು? ನಿಮ್ಮ ಆಟೋದಲ್ಲಿ ನನ್ನನ್ನು ಕರೆದುಕೊಂಡು ಹೋಗಲು ನೀವು ಇಂದು ರಾತ್ರಿ ನನ್ನ ಹೋಟೆಲ್‌ಗೆ ಬರುತ್ತೀರಾ? ಎಂದು ಕೇಜ್ರಿವಾಲ್ ಅವರಲ್ಲಿ ಕೇಳಿದಾಗ ಆಟೋ ಚಾಲಕ ಹೂಂ ಅಂದಿದ್ದಾರೆ. ರಾತ್ರಿ 8 ಗಂಟೆಗೆ ಭೋಜನವನ್ನು ನಿಗದಿಪಡಿಸಲಾಗಿದೆ.
ಇದಾದ ನಂತರ ಕೇಜ್ರಿವಾಲ್ ಅವರು ಇಂದು ಅಹಮದಾಬಾದ್‌ನಲ್ಲಿ ಪೌರ ಕಾರ್ಮಿಕರ ಇದೇ ರೀತಿಯ ಸಭೆಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ.
ಕಳೆದ ಕೆಲವು ತಿಂಗಳುಗಳ ಹಿಂದೆ ಗುಜರಾತ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ, ಕೇಜ್ರಿವಾಲ್ ಅವರು ಮಹಿಳೆಯರು ಮತ್ತು ನಿರುದ್ಯೋಗಿ ಯುವಕರಿಗೆ ಭತ್ಯೆಗಳು, ಗುಣಮಟ್ಟದ ಆರೋಗ್ಯ ಮತ್ತು ಶಿಕ್ಷಣ ಮತ್ತು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಸೇರಿದಂತೆ ಹಲವಾರು “ಘೋಷಣೆ”ಗಳನ್ನು ಮಾಡಿದ್ದರು.
Published On - 7:36 pm, Mon, 12 September 22