ವಿಧಾನಸಭೆಯಲ್ಲಿ ಇಂದು ವಿಶ್ವಾಸ ಮತ ಯಾಚಿಸಲಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ವಿಪಕ್ಷಗಳಿಗೆ ಸೆಡ್ಡು ಹೊಡೆದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ.

ವಿಧಾನಸಭೆಯಲ್ಲಿ ಇಂದು ವಿಶ್ವಾಸ ಮತ ಯಾಚಿಸಲಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
Follow us
TV9 Web
| Updated By: Rakesh Nayak Manchi

Updated on:Aug 29, 2022 | 8:15 AM

ದೆಹಲಿ: ವಿಪಕ್ಷಗಳಿಗೆ ಸೆಡ್ಡು ಹೊಡೆದಿರುವ ದೆಹಲಿ ಆಡಳಿತರೂಢ ಪಕ್ಷ ಆಮ್ ಆದ್ಮಿ ಸಂಚಾಲಕರೂ ಆಗಿರುವ ಅರವಿಂದ್ ಕೇಜ್ರಿವಾಲ್ ಅವರು ಇಂದು (ಆ.29) ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಆರಂಭಗೊಳ್ಳಲಿರುವ ವಿಧಾನಸಭೆ ಅಧಿವೇಶನದಲ್ಲಿ ಆಮ್​ ಆದ್ಮಿ ಪಕ್ಷ ವಿಶ್ವಾಸ ನಿರ್ಣಯವನ್ನು ಮಂಡಿಸಲಿದೆ. ಬಿಜೆಪಿ ಪಕ್ಷವು ಪಕ್ಷದ ಯಾವುದೇ ಶಾಸಕರನ್ನು ಸೆಳೆಯಲು ವಿಫಲವಾಗಿದೆ ಎಂಬೂದನ್ನು ಸಾಬೀತುಪಡಿಸಲು ಆಮ್​ ಆದ್ಮಿ ಪಕ್ಷ ಈ ನಿರ್ಧಾರ ಕೈಗೊಂಡಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ವಿಧಾನಸಭೆಯಲ್ಲಿ ಭಾಷಣ ಮಾಡುತ್ತಾ, ನಮ್ಮ ಪಕ್ಷದ ಶಾಸಕರನ್ನು ಸೆಳೆಯುವಲ್ಲ ಬಿಜೆಪಿ ವಿಫಲವಾಗಿದೆ ಎಂದು ದೆಹಲಿ ನಿವಾಸಿಗಳಿಗೆ ಸಾಬೀತುಪಡಿಸಲು ಸದನದಲ್ಲಿ ‘ವಿಶ್ವಾಸ ನಿರ್ಣಯ’ ತರುವುದಾಗಿ ಹೇಳಿದರು. ಆದರೆ ಎಎಪಿಗೆ ಜಾಟಿ ಬೀಸಿದ ವಿರೋಧ ಪಕ್ಷ ಬಿಜೆಪಿ, ದೆಹಲಿಯ ಆಡಳಿತ ಪಕ್ಷವು ಸಿಬಿಐ ತನಿಖೆಯಲ್ಲಿರುವ ಅಬಕಾರಿ ನೀತಿಯ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುವ ಬದಲು ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ನಡೆಸುತ್ತಿದೆ ಎಂದು ಹೇಳಿದೆ.

“ಬಿಜೆಪಿಯು ಹಲವಾರು ಶಾಸಕರನ್ನು ಸೆಳೆದಿದ್ದಾರೆ ಎಂದು ಹೇಳಲಾಗುತ್ತಿದೆ. ನನಗೆ ದೂರವಾಣಿ ಕರೆಗಳು ಬಂದವು, ಎಲ್ಲವೂ ಸರಿಯಾಗಿದೆಯೇ ಎಂದು ಜನರು ನನ್ನನ್ನು ಕೇಳಿದರು. ಬಿಜೆಪಿಯ ಆಪರೇಷನ್ ಕಮಲವು ದೆಹಲಿಯಲ್ಲಿ ‘ಆಪರೇಷನ್ ಕೆಸರು’ ಆಗಿ ಮಾರ್ಪಟ್ಟಿದೆ ಎಂಬುದನ್ನು ಜನರಿಗೆ ತೋರಿಸಲು ನಾನು ಸದನದಲ್ಲಿ ವಿಶ್ವಾಸ ನಿರ್ಣಯವನ್ನು ತರಲು ಬಯಸುತ್ತೇನೆ” ಎಂದು ಕೇಜ್ರಿವಾಲ್ ಶುಕ್ರವಾರ ಸದನದಲ್ಲಿ ಹೇಳಿದ್ದರು.

ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಪಿಡಿಟಿ ಆಚಾರಿ ಅವರು ಶುಕ್ರವಾರ ಮಾತನಾಡಿ, ಆಡಳಿತ ಪಕ್ಷವು ಸದನದಲ್ಲಿ ಬಹುಮತವನ್ನು ಕಳೆದುಕೊಂಡಿದೆ ಎಂದು ಪರಿಗಣಿಸಿದಾಗ ಸಾಮಾನ್ಯವಾಗಿ ಪ್ರತಿಪಕ್ಷಗಳು ಸದನದಲ್ಲಿ ಅವಿಶ್ವಾಸ ನಿರ್ಣಯವನ್ನು ತರುತ್ತವೆ. ಆದರೆ, ಆಡಳಿತ ಪಕ್ಷವೂ ಸದನದಲ್ಲಿ ವಿಶ್ವಾಸಮತ ಯಾಚನೆ ತರಬಹುದು ಎಂದರು.

ಸರಕಾರವು ಯಾವಾಗ ಬೇಕಾದರೂ ಸದನದಲ್ಲಿ ವಿಶ್ವಾಸಮತ ಯಾಚನೆಯನ್ನು ತರಬಹುದು. ಸಾಮಾನ್ಯವಾಗಿ ಸದನದಲ್ಲಿ ಆಡಳಿತ ಪಕ್ಷದ ಬಹುಮತ ಅನುಮಾನವಾದಾಗ ಅವಿಶ್ವಾಸ ನಿರ್ಣಯ ಮಂಡಿಸಲಾಗುತ್ತದೆ. ಸದನದ ಒಟ್ಟು 70 ಸದಸ್ಯರಲ್ಲಿ ಎಎಪಿ 62 ಸದಸ್ಯರನ್ನು ಹೊಂದಿರುವುದರಿಂದ ಅದು ಸುಲಭವಾಗಿ ತನ್ನ ಬಹುಮತವನ್ನು ಸ್ಥಾಪಿಸುತ್ತದೆ ಎಂದು ಅವರು ಹೇಳಿದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:15 am, Mon, 29 August 22

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ