ಕಾಂಗ್ರೆಸ್ ಪ್ರಧಾನ ಕಚೇರಿಯೊಳಗೆ ನುಗ್ಗಿದ ದೆಹಲಿ ಪೊಲೀಸ್; ಮೋದಿ ಸರ್ಕಾರದ ಸೊಕ್ಕು ಮುರಿಯುತ್ತೇವೆ ಎಂದು ಕಾಂಗ್ರೆಸ್ ಟ್ವೀಟ್

ನೀವು ನಿಮ್ಮ ಪೋಲೀಸ್ ಗೂಂಡಾಗಳನ್ನು ಕಳುಹಿಸಿದ ಕಾಂಗ್ರೆಸ್ ಕಚೇರಿ ಪ್ರಪಂಚದ ಅತಿದೊಡ್ಡ ಸಾಮ್ರಾಜ್ಯವನ್ನು ಅಳಿಸಿಹಾಕಿದೆ…ನಿಮ್ಮ ದುರಹಂಕಾರಕ್ಕೆ ಕಾರಣವಾದರೂ ಏನು?  ನಾವು ನಿಮ್ಮ ಅಹಂಕಾರವನ್ನು ಮುರಿಯುತ್ತೇವೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ

ಕಾಂಗ್ರೆಸ್ ಪ್ರಧಾನ ಕಚೇರಿಯೊಳಗೆ ನುಗ್ಗಿದ ದೆಹಲಿ ಪೊಲೀಸ್; ಮೋದಿ ಸರ್ಕಾರದ ಸೊಕ್ಕು ಮುರಿಯುತ್ತೇವೆ ಎಂದು ಕಾಂಗ್ರೆಸ್ ಟ್ವೀಟ್
ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಪೊಲೀಸ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 15, 2022 | 4:42 PM

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವ್ಯವಹಾರ ಪ್ರಕರಣದಲ್ಲಿ (National Herald money laundering case) ರಾಹುಲ್ ಗಾಂಧಿ (Rahul Gandhi) ಸತತ ಮೂರನೇ ದಿನದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (Enforcement Directorate) ಮುಂದೆ ಹಾಜರಾಗುತ್ತಿದ್ದಂತೆ, ದೆಹಲಿ ಪೊಲೀಸರು ನವದೆಹಲಿಯಲ್ಲಿರುವ ಪಕ್ಷದ ಕೇಂದ್ರ ಕಚೇರಿಗೆ ಬಲವಂತವಾಗಿ ನುಗ್ಗಿ ಕಾರ್ಯಕರ್ತರನ್ನು ಥಳಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ವಿಡಿಯೊವೊಂದನ್ನು ಶೇರ್ ಮಾಡಿದ್ದು ಬುಧವಾರ ಮಧ್ಯಾಹ್ನ ಎಐಸಿಸಿ ಪ್ರಧಾನ ಕಚೇರಿಗೆ ಪ್ರವೇಶಿಸಲು ಪ್ರತಿಭಟನಾಕಾರರನ್ನು ಭದ್ರತಾ ಸಿಬ್ಬಂದಿ ಹಿಂದೆ ತಳ್ಳುತ್ತಿರುವುದವನ್ನು ವಿಡಿಯೊದಲ್ಲಿ ಕಾಣಬಹುದು. ಓ ಸರ್ವಾಧಿಕಾರಿಯೇ. ನೀವು ಆಸ್ತಿಯನ್ನು ಧ್ವಂಸ ಮಾಡಬೇಕಾದರೆ, ಪ್ರಜಾಪ್ರಭುತ್ವದ ಕುರ್ಚಿಯಿಂದ ಕೆಳಗಿಳಿದು ಜನರ ಮುಂದೆ ನಿಂತುಕೊಳ್ಳಿ. ನೀವು ನಿಮ್ಮ ಪೋಲೀಸ್ ಗೂಂಡಾಗಳನ್ನು ಕಳುಹಿಸಿದ ಕಾಂಗ್ರೆಸ್ ಕಚೇರಿ ಪ್ರಪಂಚದ ಅತಿದೊಡ್ಡ ಸಾಮ್ರಾಜ್ಯವನ್ನು ಅಳಿಸಿಹಾಕಿದೆ…ನಿಮ್ಮ ದುರಹಂಕಾರಕ್ಕೆ ಕಾರಣವಾದರೂ ಏನು?  ನಾವು ನಿಮ್ಮ ಅಹಂಕಾರವನ್ನು ಮುರಿಯುತ್ತೇವೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಈ ಕುರಿತು ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್, ಬಿಜೆಪಿ ಭಾರತದ ಪ್ರಜಾಪ್ರಭುತ್ವವನ್ನು ಕೊಂದು ಹಾಕುತ್ತಿದೆ ಎಂದು ಆರೋಪಿಸಿದ್ದಾರೆ. ಎಐಸಿಸಿ ಪ್ರಧಾನ ಕಚೇರಿ ಬಾಗಿಲು ಒಡೆದ ಅವರು ನಮ್ಮ ಪೂರ್ವಜರು ಹೋರಾಡಿ ತಮ್ಮ ಪ್ರಾಣವನ್ನು ಕೊಟ್ಟ ಪ್ರಜಾಪ್ರಭುತ್ವವನ್ನು ತುಳಿದು ಹಾಕಿದರು ಎಂದು ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.

ಏತನ್ಮಧ್ಯೆ, ಪ್ರಧಾನ ಕಚೇರಿಗೆ ಪ್ರವೇಶಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಒತ್ತಾಯಿಸಿದರು. ಇಂದು ಎಲ್ಲಾ ಕಾಂಗ್ರೆಸ್ ನಾಯಕರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಾಳೆ ಕಾಂಗ್ರೆಸ್ ಭಾರತದಾದ್ಯಂತ ಎಲ್ಲಾ ರಾಜಭವನಗಳಿಗೆ ಘೇರಾವ್ ಮಾಡಲಿದೆ. ನಾಳೆಯ ದಿನವೂ ಎಲ್ಲಾ ಜಿಲ್ಲಾ ಮಟ್ಟದಲ್ಲೂ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದನ್ನೂ ಓದಿ
Image
DK Shivakumar: ನಾವು ಲಂಚ ಪಡೆದಿದ್ದೆವಾ? ಮಂಚಕ್ಕೆ ಹೋಗಿದ್ದೆವಾ? ಬಿಜೆಪಿಗೆ ಹೆದರೋ ಮಾತೇ ಇಲ್ಲ; ಡಿಕೆ ಶಿವಕುಮಾರ್
Image
ಇಡಿ ಕಚೇರಿ ಒಳಗೆ ರಾಹುಲ್ ವಿಚಾರಣೆ, ಹೊರಗೆ ಕಾಂಗ್ರೆಸ್​ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ
Image
DK Shivakumar: ಕೊವಿಡ್ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ; ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಡಿಕೆ ಶಿವಕುಮಾರ್ ಹಾಜರು
Image
ಬಸವಣ್ಣ, ಕುವೆಂಪುಗೆ ಅವಮಾನ ಮಾಡಿದ್ದು ಕಾಂಗ್ರೆಸ್; ವಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ- ಸಚಿವ ಬಿಸಿ ನಾಗೇಶ್ ಒತ್ತಾಯ

ಹಲವಾರು ಕಾಂಗ್ರೆಸ್ ಸಂಸದರು ಮತ್ತು ಮುಖಂಡರು ಬುಧವಾರವೂ ರಾಹುಲ್ ಗಾಂಧಿಯನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆಗಳನ್ನು ಮುಂದುವರೆಸಿದ್ದಾರೆ. “ನಾವು ಭಯೋತ್ಪಾದಕರೇ? ನಮಗೇಕೆ ಭಯ? ಅವರು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ವಿರುದ್ಧ ಪೊಲೀಸ್ ಶಕ್ತಿ ಬಳಸುತ್ತಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಮತ್ತು ಸಂಸದ ಅಧೀರ್ ರಂಜನ್ ಚೌಧರಿ ಎಎನ್‌ಐಗೆ ತಿಳಿಸಿದ್ದಾರೆ.

ಈವರೆಗೆ 150 ಮಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಇಂದು 3 ನೇ ದಿನದ ಪ್ರತಿಭಟನೆ ಆಗಿದ್ದು ಪೊಲೀಸರು ಸರಿಯಾದ ವ್ಯವಸ್ಥೆ ಮಾಡಿದ್ದಾರೆ. ನಾವು ಸುಮಾರು 150 ಜನರನ್ನು ಬಂಧಿಸಿದ್ದೇವೆ. ಕಾಂಗ್ರೆಸ್ ಇಂದು ಸಭೆಗೆ ಯಾವುದೇ ಅನುಮತಿ ತೆಗೆದುಕೊಂಡಿರಲಿಲ್ಲ; ಯಾವ ಪ್ರದೇಶದಲ್ಲಿ ಸೆಕ್ಷನ್ 144 ಹೇರಲಾಗಿದೆ ಎಂದು ಅವರ ಪದಾಧಿಕಾರಿಗಳಿಗೆ ತಿಳಿದಿದೆ ಎಂದು ವಿಶೇಷ ಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಸಾಗರ್ ಹೂಡಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಸಭೆಗೆ ಅನುಮತಿ ಇಲ್ಲ ಎಂದು ಪಕ್ಷಕ್ಕೆ ತಿಳಿಸಿದ್ದರೂ, ಕೆಲವು ಮುಖಂಡರು ಪ್ರತಿಭಟನೆಗೆ ಮುಂದಾದರು ಎಂದು ಹೂಡಾ ಹೇಳಿದ್ದಾರೆ “ಕೆಲವು ಕಾರ್ಯಕರ್ತರು ಇಂದು ನಮ್ಮ ಮನವಿಯನ್ನು ಒಪ್ಪದಿದ್ದಾಗ, ನಾವು ಅವರನ್ನು ಬಂಧಿಸಿದ್ದೇವೆ. ಎರಡೂವರೆ ದಿನಗಳಲ್ಲಿ ಸುಮಾರು 800 ಜನರನ್ನು ಬಂಧಿಸಲಾಗಿದೆ ಎಂದಿದ್ದಾರೆ ಹೂಡಾ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 4:30 pm, Wed, 15 June 22

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್