Congress 5 Guarantee: ಐದು ಗ್ಯಾರಂಟಿ ಜಾರಿಗೆಗೆ ಸದ್ದಿಲ್ಲದೆ ನಡೆದಿದೆ ಮಾಹಿತಿ ಸಂಗ್ರಹ

ರಾಜ್ಯದಲ್ಲಿ ಸದ್ಯ ಕಾಂಗ್ರೆಸ್​ನ ಐದು ಗ್ಯಾರಂಟಿಗಳು ಬಾರಿ ಸುದ್ದು ಮಾಡುತ್ತಿವೆ. ಗ್ರಾಮೀಣ ಭಾಗದಲ್ಲಿ ಗ್ಯಾರಂಟಿಗಳ ಸಂಬಂಧ ಗಲಾಟೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ಅಧಿಕಾರಿಗಳು ಸಹ ಗ್ಯಾರಂಟಿ ಜಾರಿಗೆ ಬಗ್ಗೆ ಡಾಟಾ ಸಂಗ್ರಹಿಸುತ್ತಿದ್ದಾರೆ.

Congress 5 Guarantee: ಐದು ಗ್ಯಾರಂಟಿ ಜಾರಿಗೆಗೆ ಸದ್ದಿಲ್ಲದೆ ನಡೆದಿದೆ ಮಾಹಿತಿ ಸಂಗ್ರಹ
ಕಾಂಗ್ರೆಸ್ ಗ್ಯಾರಂಟಿ
Follow us
ರಮೇಶ್ ಬಿ. ಜವಳಗೇರಾ
|

Updated on:May 25, 2023 | 3:38 PM

ಬೆಂಗಳೂರು: ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ (Congress guarantee) ಬಗ್ಗೆ ಈಗ ಎಲ್ಲೆಡೆ ಭಾರೀ ಚರ್ಚೆಯಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಜನರು ವಿದ್ಯುತ್ ಬಿಲ್ ಕಟ್ಟಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೇ ಬಿಲ್ ಕೇಳಲು ಬಂದ ಸಿಬ್ಬಂದಿ ಜೊತೆ ಗಲಾಟೆ ಮಾಡುತ್ತಿರುವ ಪ್ರಕರಣಗಳು ವರದಿಯಾಗಿವೆ. ಇನ್ನು ಮಹಿಳೆಯರಿಗೆ ಉಚಿತ ಪ್ರಯಾಣ ಗ್ಯಾರೆಂಟಿ ವಿಚಾರವಾಗಿ ಬಸ್​ಗಳಲ್ಲಿ ಟಿಕೆಟ್​ ತೆಗೆದುಕೊಳ್ಳಲು ಸಹ ಜಗಳ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಟಿಕೆಟ್ ವಿಚಾರವಾಗಿ ಮಹಿಳೆಯರು ಬಸ್​ ಕಂಡಕ್ಟರ್​ ಜೊತೆ ಜಗಳ ಮಾಡುತ್ತಿದ್ದಾರೆ. ಇದನ್ನು ಸರ್ಕಾರವೂ ಸಹ ಸೂಕ್ಷ್ಮವಾಗಿ ಗಮನಿಸಿ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಮುಂದಿನ ಕ್ಯಾಬಿನೆಟ್‌ನಲ್ಲಿ 5 ಗ್ಯಾರಂಟಿಗಳಿಗೆ ಅಂತಿಮ ಮುದ್ರೆ ಸಾಧ್ಯತೆ ಇದೆ.

ಇದನ್ನೂ ಓದಿ: Koppal News: ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್​ಮ್ಯಾನ್​ ಮೇಲೆ ಚಪ್ಪಲಿಯಿಂದ ಹಲ್ಲೆ

ಮೊದಲ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ ಹಿನ್ನೆಲೆಯಲ್ಲಿ ಅಧಿಕೃತವಾಗಿ ಜಾರಿಗೆ ತರಲು ಮುಂದಿನ ಕ್ಯಾಬಿನೆಟ್‌ನಲ್ಲಿ ತೀರ್ಮಾನವಾಗಲಿದೆ. ಇದಕ್ಕೆ ಪೂರಕವೆಂಬಂತೆ ಈಗಾಗಲೇ ಅಧಿಕಾರಿಗಳಿಗೆ ಮಾಹಿತಿ ಕಲೆ ಹಾಕಲು ಸೂಚಿಸಲಾಗಿದೆ. ಅದರಂತೆ ಗ್ಯಾರಂಟಿಗಳು ಜಾರಿಗೆ ತರುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸಹ ಡಾಟಾ ಕಲೆ ಹಾಕುತ್ತಿದ್ದಾರೆ. ಗ್ಯಾರಂಟಿಗಳಿಗೆ ಎಷ್ಟು ಹಣ ಬೇಕಾಗುತ್ತೆ? ಯಾವ ರೀತಿ ಜಾರಿಗೆ ತರಬೇಕು? ಗೃಹಿಣಿಯರಿಗೆ ಪ್ರತಿ ತಿಂಗಳು 2000 ರೂ. ಫಲಾನುಭವಿಗಳ ಡಾಟಾ ಸಂಗ್ರಹ ಹಾಗೂ ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ಬಗ್ಗೆ ಮಾಹಿತಿ ಸಂಗ್ರಹಿಸುವುದರಲ್ಲಿ ಬ್ಯುಸಿಯಾಗಿದ್ದಾರೆ.

200 ಯೂನಿಟ್‌ ವಿದ್ಯುತ್​ ಬಳಕೆ ಮೀರಿದ ಬಳಿಕ ಎಷ್ಟು ಹಣ ತೆಗದುಕೊಳ್ಳಬೇಕು? ಪೂರ್ಣಪ್ರಮಾಣದ ಹಣವು ಅಥವಾ 200 ಯೂನಿಟ್ ಬಿಟ್ಟು ಕಲೆಕ್ಟ್ ಮಾಡಬೇಕಾ? ಈ ಎಲ್ಲಾ ಮಾಹಿತಿಯನ್ನ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನು ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಗ್ಯಾರಂಟಿ ಜಾರಿಗೆ ಸಂಬಂಧ ಬಸ್‌ ಪ್ರಯಾಣ ಮಹಿಳೆಯರಿಗೆ ತಿಂಗಳು ಪಾಸ್ ಮೂಲಕ ಜಾರಿಗೆ ನಾ? ಅಥವಾ ಪೂರ್ಣ ಪ್ರಮಾಣದ ಪಾಸ್ ಕೊಡಬೇಕಾ ಎಂಬುದರ ಬಗ್ಗೆ ಚರ್ಚೆಗಳು ನಡೆದಿವೆ.

ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳಿಗೆ 3000 ರೂಪಾಯಿ ಹಾಗೂ ನಿರುದ್ಯೋಗಿ ಡಿಪ್ಲೋಮಾ ಪದವೀಧರರಿಗೆ ತಿಂಗಳಿಗೆ 1500 ರೂ.ನೀಡುವ ಬಗ್ಗೆ ಮಾಹಿತಿ ಸಂಗ್ರಹವಾಗುತ್ತಿದೆ. ಪಾಸಾದ ವಿದ್ಯಾರ್ಥಿಗಳ ಡಾಟಾ ಕಲೆಕ್ಟ್‌ ಬಳಿಕ ಚರ್ಚೆಸಿ ತೀರ್ಮಾನವಾಗಲಿದೆ. ಹೀಗೆ ಎಲ್ಲಾ ಗ್ಯಾರಂಟಿಗಳ ಬಗ್ಗೆ ಆಯಾ ಇಲಾಖೆಯ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದು, ಎಲ್ಲಾ ಅಂದುಕೊಂಡಂತೆ ಆದ್ರೆ ಮುಂದಿನ ಕ್ಯಾಬಿನೆಟ್‌ನಲ್ಲಿ ಅಂತಿಮ ಮುದ್ರೆ ಬೀಳಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ

ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಸಿಬ್ಬಂದಿಗಳಿಗೆ ತೀವ್ರ ತೊಂದರೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಬೇಗನೇ ನಿರ್ಧಾರ ತೆಗೆದುಕೊಳ್ಳುವಂತೆ ಕೋರಿ ಪತ್ರ ಬರೆಯಲಾಗಿದೆ. ಸಾರಿಗೆ ಯೂನಿಯನ್ ಪ್ರಧಾನ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಈಗಾಗಲೇ ಕೆಲ ಮಹಿಳೆಯರು ಬಸ್ಸಿನಲ್ಲಿ ಹಣ ನೀಡಲು ನಿರಾಕರಿಸುತ್ತಿದ್ದು ಇದರಿಂದಾಗಿ ಟಿಕೆಟ್ ಹಣ ಪಡೆಯುವುದೇ ಸಾಹಸಾಗಿದೆ. ಹೀಗಾಗಿ ಶೀಘ್ರದಲ್ಲೇ ಸರ್ಕಾರ ಯೋಜನೆ ಜಾರಿಗೆ ತರಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದ್ದು ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಬೇಕು ಎಂದು ಯೂನಿಯನ್ ಪ್ರಧಾನ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಸಿಎಂಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಜೊತೆಗೆ ಈ ಯೋಜನೆ ಜಾರಿಯಿಂದ ನಿಗಮಕ್ಕಾಗುವ ಹೊರೆಯನ್ನು ಸರ್ಕಾರ ಮುಂಗಡವಾಗೇ ಹಣ ಬಿಡುಗಡೆ ಮಾಡಿ ಪಾವತಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

Published On - 3:37 pm, Thu, 25 May 23

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ