ಬಡವರು, ಸಾಮಾಜಿಕ ನ್ಯಾಯದ ಪರವಾಗಿ ಇದ್ದವರು ದೇವರಾಜ ಅರಸು: ಸಿಎಂ ಸಿದ್ದರಾಮಯ್ಯ

ದೇವರಾಜ ಅರಸು 1972 ರಿಂದ 1980 ರವರೆಗೆ ಮುಖ್ಯಮಂತ್ರಿಯಾಗಿದ್ದರು. ಸಾಮಾಜಿಕ ನ್ಯಾಯದ ಪರವಾಗಿ ಇದ್ದವರು. ಬಡವರ ಪರವಾಗಿ ಇದ್ದವರು. ಅಧಿಕಾರದಲ್ಲಿದ್ದಾಗಿ ನ್ಯಾಯ ಕೊಡಿಸಲು ಪ್ರಯತ್ನ ಮಾಡಿದರು. ಮಲ ಹೊರುವ ಪದ್ದತಿ ನಿಲ್ಲಿಸುವ ಮೂಲಕ ಜೀತಪದ್ದತಿಗೆ ಮಂಗಳ ಹಾಡಿದರು. ಅದಕ್ಕಾಗಿ ನಾವು ಅವರನ್ನು ಸಾಮಾಜಿಕ ನ್ಯಾಯ ಹರಿಕಾರ ಅಂತ ಕರೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಡವರು, ಸಾಮಾಜಿಕ ನ್ಯಾಯದ ಪರವಾಗಿ ಇದ್ದವರು ದೇವರಾಜ ಅರಸು: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
| Updated By: ವಿವೇಕ ಬಿರಾದಾರ

Updated on:Aug 20, 2023 | 12:46 PM

ಬೆಂಗಳೂರು: ದೇವರಾಜ ಅರಸು (Devaraj Arasu) ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆಯುತ್ತೇವೆ. ದೇವರಾಜ ಅರಸು ಕರ್ನಾಟಕದ ಅಪರೂಪದ ರಾಜಕಾರಣಿ. ಅರಸು ಬಡವರು, ಸಾಮಾಜಿಕ ನ್ಯಾಯದ ಪರವಾಗಿ ಇದ್ದರು. ಅರಸು ಅವರು ಅಧಿಕಾರಕ್ಕೆ ಬರುವವರೆಗು ಹಿಂದುಳಿದ ವರ್ಗದವರಿಗೆ ಮೀಸಲಾತಿ ಇರಲಿಲ್ಲ. ಹಾವನೂರು ಆಯೋಗ ವರದಿ ತರಿಸಿ ಮೀಸಲಾತಿ ಜಾರಿ‌ ಮಾಡಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ದೇವರಾಜ ಅರಸು 1972 ರಿಂದ 1980 ರವರೆಗೆ ಮುಖ್ಯಮಂತ್ರಿಯಾಗಿದ್ದರು. ಹುಣಸೂರು ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಸಾಮಾಜಿಕ ನ್ಯಾಯದ ಪರವಾಗಿ ಇದ್ದವರು. ಬಡವರ ಪರವಾಗಿ ಇದ್ದವರು. ಅಧಿಕಾರದಲ್ಲಿದ್ದಾಗಿ ನ್ಯಾಯ ಕೊಡಿಸಲು ಪ್ರಯತ್ನ ಮಾಡಿದರು. ಮಲ ಹೊರುವ ಪದ್ದತಿ ನಿಲ್ಲಿಸುವ ಮೂಲಕ ಜೀತಪದ್ದತಿಗೆ ಮಂಗಳ ಹಾಡಿದರು. ಅದಕ್ಕಾಗಿ ನಾವು ಅವರನ್ನು ಸಾಮಾಜಿಕ ನ್ಯಾಯ ಹರಿಕಾರ ಅಂತ ಕರೆಯುತ್ತೇವೆ ಎಂದು ತಿಳಿಸಿದರು.

ಅವರು ಸಿಎಂ ಆಗಿದ್ದಾಗ ಹಾವನೂರು ಆಯೋಗ ರಚನೆ ಮಾಡಿದರು. ಉಳುವವನೇ ಭೂ ಒಡೆಯ ಎಂಬ ಯೋಜನೆ ತಂದರು. ಇಂದಿರಾಗಾಂಧಿ ಅವರ ಬೆಂಬಲ ಜೊತೆಗೆ ಮಾಡಿದ್ದರು. ವಿಧಾನಸೌಧದ ಮೆಟ್ಟಿಲು ಹತ್ತದವರನ್ನು ವಿಧಾನಸೌಧಕ್ಕೆ ಬರುವ ಹಾಗೆ ಮಾಡಿದರು. ಅರಸು ಬರುವವರೆಗೆ ಹಿಂದುಳಿದ ವರ್ಗದವರಿಗೆ ಮೀಸಲಾತಿ ಇರಲಿಲ್ಲ. ಹಾವನೂರು ಆಯೋಗ ಮಾಡಿ, ವರದಿ ತರಿಸಿ ಮೀಸಲಾತಿ ಜಾರಿ‌ ಮಾಡಿದರು. ಕೇಂದ್ರದಲ್ಲಿ ಒಬಿಸಿಗೆ ಮೀಸಲಾತಿ ಇರಲಿಲ್ಲ. ಕರ್ನಾಟಕದಲ್ಲಿ ಕೊಟ್ಟ ಮೇಲೆ ಮಂಡಲ್ ಕಮಿಷನ್ ಜಾರಿ ಮಾಡಲು ಅನುಕೂಲ ಆಯಿತು. 1972ರಲ್ಲಿ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿತ್ತು. ಖಾಯಂ ಹಿಂದುಳಿದ ವರ್ಗಗಳ ಆಯೋಗ ರಚನೆ ಆಯಿತು. ಇದಕ್ಕೆ ದೇವರಾಜ್ ಅರಸು ಪ್ರಾಮಾಣಿಕ ಪ್ರಯತ್ನ ಮಾಡಿದರು ಎಂದರು.

ಇದನ್ನೂ ಓದಿ: CM ಸಿದ್ದರಾಮಯ್ಯ ಸೇರಿ ಇಡೀ ಟೀಂ ಚೇಂಜ್ ಆಗುತ್ತೆ: ಕಾಂಗ್ರೆಸ್ ಶಾಸಕ ವಿನಯ್​ ಕುಲಕರ್ಣಿ ಹೊಸ ಬಾಂಬ್​​

ಕಾಂಗ್ರೆಸ್‌ ಪಕ್ಷ ರಾಜೀವ್ ಗಾಂಧಿ ಜನ್ಮದಿನವನ್ನು ದೇಶಾದ್ಯಂತ ಆಚರಿಸುತ್ತಿದೆ. ನಮ್ಮ ರಾಜ್ಯದಲ್ಲೂ ಆಚರಣೆ ಮಾಡುತ್ತಿದ್ದೇವೆ. ದೇವರಾಜ್ ಅರಸು ಅವರದ್ದು ರಾಜ್ಯಾದ್ಯಂತ ಆಚರಣೆ ಮಾಡುತ್ತೀದ್ದೇವೆ. ರಾಜೀವ್ ಗಾಂಧಿ ಅವರು ರಾಜಕಾರಣಿ ಆಗಬೇಕೆಂದು ರಾಜಕಾರಣಿ ಆದವರಲ್ಲ. ಇಂಧಿರಾ ಗಾಂಧಿ ಅವರು ಆಕಸ್ಮಿಕವಾಗಿ ಮೃತಪಟ್ಟ ಹಿನ್ನಲೆಯಲ್ಲಿ ಅನಿವಾರ್ಯವಾಗಿ ರಾಜೀವ್ ಗಾಂಧಿ ಅವರು ಪ್ರಧಾನಿ ಆದರು ಎಂದು ಹೇಳಿದರು.

ದೂರದೃಷ್ಟಿ ಇಟ್ಟುಕೊಂಡು 21ನೇ ಶತಮಾನಕ್ಕೆ ಕಾಲಿಡುವುದಕ್ಕೆ ಸಿದ್ಧತೆಯನ್ನ ಪ್ರಮಾಣಿಕವಾಗಿ ಪ್ರಯತ್ನ ಮಾಡಿದರು. ಯುವಶಕ್ತಿ ಮೇಲೆ ಬಹಳಷ್ಟು ನಂಬಿಕೆ ಇಟ್ಟವರು. ದೇಶದ ಚುನಾವಣೆಯಲ್ಲಿ ಯುವಕರು ಭಾಗವಹಿಸಬೇಕು ಎಂದು 18 ವಯಸ್ಸಿನವರಿಗೆ ಮತದಾನಕ್ಕೆ ಅವಕಾಶ ಕೊಟ್ಟರು. ಲೋಕಸಭೆ ಚುನಾವಣೆಯಲ್ಲಿಯು ಯುವಕರು ಭಾಗಿವಹಿಸುವಂತೆ ಮಾಡಿದರು. ರಾಜೀವ್ ಗಾಂಧಿವರಿಗೆ ಪ್ರಜಾಪ್ರಭುತ್ವದಲ್ಲಿ ಅಪಾರ ನಂಬಿಕೆ ಇತ್ತು. ಸಮಾಜದ ಎಲ್ಲಾ ವರ್ಗದವರು ಎಲ್ಲದರಲ್ಲೂ ಭಾಗಿ ಆಗಬೇಕು ಎಂದವರು. ಈ ಹಿನ್ನಲೆ ಸಂವಿಧಾನ 73-74 ತಿದ್ದುಪಡಿ ಮಾಡಿ ಮಹಿಳೆಯರಿಗೆ ಸ್ಥಳೀಯ ಮಟ್ಟದ ಚುನಾವಣೆಗಳಲ್ಲಿ ಪ್ರಾತಿನಿಧ್ಯ ಇರಲಿ ಎಂದು ಮೀಸಲಾತಿ ಕಲ್ಪಿಸಿದರು ಎಂದು ತಿಳಿಸಿದ್ದಾರೆ.

ಮಹಿಳೆಯರಿಗೆ ಶೇ 33 ರಷ್ಟು ಹಿಂದುಳಿದವರಿಗೆ ಶೇ 33 ರಷ್ಟು ಮೀಸಲಾತಿ ಕಲ್ಪಿಸಿದರು. ಮಾಡಿದರು. ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಶೇ 50 ರಷ್ಟು ಮಹಿಳೆಯರಿಗೆ ಅವಕಾಶ ಸಿಕ್ಕಿದೆ ಅಂದರೇ ಅದಕ್ಕೆ ರಾಜೀವ್ ಗಾಂಧಿ ಕಾರಣ . ಬಿಜೆಪಿ ಆಗಲಿ ಯಾವುದೇ ಪಕ್ಷದವರು ಇದನ್ನ ಜಾರಿಗೆ ತರಲಿಲ್ಲ ಎಂದು ಹೇಳಿದ್ದಾರೆ.

ದೇಶದ ಬಗ್ಗೆ ಕಾಳಜಿ ಇರುವುದು ಕಾಂಗ್ರೆಸ್​ನವರಿಗೆ ಮಾತ್ರ. ಬಿಜೆಪಿಯವರಿಗೆ ಅಧಿಕಾರದ ಕಾಳಜಿ ಅಷ್ಟೇ. ಬಿಜೆಪಿಯವರು ಬಹಳ ಮಾತಾಡುತ್ತಾರೆ. ಯಾರಾದರೂ ಬಿಜೆಪಿಯವರು ಬಲಿದಾನ ಮಾಡಿದ್ದಾರಾ? ಇತಿಹಾಸ ಇರೋದು ಕಾಂಗ್ರೆಸ್​​​​​​​ಗೆ ಮಾತ್ರ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:32 pm, Sun, 20 August 23

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು