ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗುವಂತೆ ದೇವೇಂದ್ರ ಫಡ್ನವಿಸ್​​ಗೆ ಮನವಿ ಮಾಡಿದ ಬಿಜೆಪಿ

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅಧಿಕಾರ ವಹಿಸಿಕೊಳ್ಳಬೇಕು ಎಂದು ಕೇಂದ್ರ ನಾಯಕತ್ವ ಮತ್ತು ತಾನು ವೈಯಕ್ತಿಕ ಮನವಿ ಮಾಡಿರುವುದಾಗಿ ನಡ್ಡಾ ಹೇಳಿದ್ದಾರೆ.

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗುವಂತೆ ದೇವೇಂದ್ರ ಫಡ್ನವಿಸ್​​ಗೆ ಮನವಿ ಮಾಡಿದ ಬಿಜೆಪಿ
ಜೆಪಿ ನಡ್ಡಾ
Edited By:

Updated on: Jun 30, 2022 | 7:16 PM

ದೇವೇಂದ್ರ ಫಡ್ನವಿಸ್ (Devendra Fadnavis) ಅವರು ಮಹಾರಾಷ್ಟ್ರ ಸರ್ಕಾರದ ಭಾಗವಾಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಹೇಳಿದ್ದಾರೆ. ಬಿಜೆಪಿಯ ದೇವೇಂದ್ರ ಫಡ್ನವೀಸ್ ಅಲ್ಲ ಶಿವಸೇನಾದ ಬಂಡಾಯ ನಾಯಕ ಏಕನಾಥ್ ಶಿಂಧೆ (Eknath Shinde) ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ  ಅಚ್ಚರಿಯ ಘೋಷಣೆಯ ನಂತರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ದೇವೇಂದ್ರ ಫಡ್ನವಿಸ್ ಸರ್ಕಾರದ ಭಾಗವಾಗಬೇಕೆಂದು ಕೇಂದ್ರ ನಾಯಕತ್ವ ನಿರ್ಧರಿಸಿದೆ ಎಂದು ಹೇಳಿದರು. ರಾಜಭವನದಲ್ಲಿ ಶಿಂಧೆ ಅವರೊಂದಿಗೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿ ಮಾಡಿದ ನಂತರ ಫಡ್ನವಿಸ್ ಅವರು ಏಕನಾಥ್ ಶಿಂಧೆ ಮಹಾರಾಷ್ಟ್ರದ ನೂತನ ಸಿಎಂ ಎಂದು ಘೋಷಣೆ ಮಾಡಿದ ಒಂದು ಗಂಟೆಯ ನಂತರ ನಡ್ಡಾ ಮಾತನಾಡಿದ್ದಾರೆ.

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅಧಿಕಾರ ವಹಿಸಿಕೊಳ್ಳಬೇಕು ಎಂದು ಕೇಂದ್ರ ನಾಯಕತ್ವ ಮತ್ತು ತಾನು ವೈಯಕ್ತಿಕ ಮನವಿ ಮಾಡಿರುವುದಾಗಿ ನಡ್ಡಾ ಹೇಳಿದ್ದಾರೆ. ಪ್ರಸ್ತುತ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರು ಶಿಂಧೆ ಮಾತ್ರ ಇಂದು ರಾತ್ರಿ 7.30 ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾನು ಹೊಸ ಸರ್ಕಾರದ ಭಾಗವಾಗುವುದಿಲ್ಲ ಎಂದು ಹೇಳಿದ್ದರು.

Published On - 6:52 pm, Thu, 30 June 22