ಬೇಡ ಜಂಗಮ ಪ್ರಮಾಣಪತ್ರ ಪಡೆದಿದ್ದ ಎಂಎಂ ಹಿರೇಮಠಗೆ ಹಾವೇರಿ ಜಿಲ್ಲಾಧಿಕಾರಿಯಿಂದ ಛೀಮಾರಿ
ಬೇಡ ಜಂಗಮ ಸರ್ಟಿಫಿಕೇಟ್ ಪಡೆದಿದ್ದ ಹಾವೇರಿ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಎಂ.ಎಂ.ಹಿರೆಮಠ ಜಾತಿಪ್ರಮಾಣ ಪತ್ರವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ರಘುನಂದನಮೂರ್ತಿ ಆದೇಶ ಹೊರಡಿಸಿದ್ದಾರೆ.
ಹಾವೇರಿ: ಬೇಡ ಜಂಗಮ ಸರ್ಟಿಫಿಕೇಟ್ ಪಡೆದಿದ್ದ ಹಾವೇರಿ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಎಂ.ಎಂ.ಹಿರೆಮಠ (MM Hiremath) ಜಾತಿಪ್ರಮಾಣಪತ್ರವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ರಘುನಂದನಮೂರ್ತಿ ಆದೇಶ ಹೊರಡಿಸಿದ್ದಾರೆ. ಬೇಡಜಂಗಮರಿಗೆ ಎಸ್ಸಿ ಮೀಸಲಾತಿ ಇರುವುದರಿಂದ ವಿರಶೈವ್ ಲಿಂಗಾಯತರಾಗಿದ್ದರೂ ಎಂ.ಎಂ. ಹಿರೆಮಠ ಬೇಡ ಜಂಗಮ ಎಂದು ಸರ್ಟಿಫಿಕೇಟ್ ಪಡೆದಿದ್ದರು. ಹಾವೇರಿ ತಹಶಿಲ್ಧಾರ ಸರ್ಟಿಫಿಕೇಟ್ ಕೊಟ್ಟಿದ್ದರು. ನಿಯಮಾನುಸಾರ ಜಾತಿ ಪ್ರಮಾಣಪತ್ರವನ್ನು ನೀಡಿಲ್ಲವೆಂದು ರದ್ದು ಮಾಡಿ ಆದೇಶಿಸಲಾಗಿದೆ. ಈ ಹಿನ್ನೆಲೆ ಆದೇಶ ಪ್ರಶ್ನಿಸಿ ಸುಪ್ರಿಂಕೊರ್ಟ್ಗೆ ಮೆಲ್ಮನವಿ ಸಲ್ಲಿಸಲು ಹಿರೆಮಠ ಮುಂದಾಗಿದ್ದಾರೆ. ಎಸ್ಸಿ ಸರ್ಟಿಫಿಕೇಟ್ ಪಡೆದು ಹಾವೇರಿ ಮೀಸಲು ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಲು ಎಂ.ಎಂ ಹಿರೆಮಠ ತಯಾರಿ ನಡೆಸಿದ್ದರು. ಸ್ವತಂತ್ರವಾಗಿ ಸ್ಪರ್ಧಿಸಲು ಇಂದು ಬೆಂಬಲಿಗರ ಸಭೆ ಕರೆದಿದ್ದರು.
ಹಾವೇರಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಎಂ.ಹಿರೆಮಠ ರಾಜಿನಾಮೆ ನೀಡಿದ್ದಾರೆ. ಅಲ್ಲದೇ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ಗುಡ್ಬೈ ಹೇಳಿದ್ದಾರೆ. ಈ ಕುರಿತಂತೆ ಹಿರೆಮಠ ಅವರು ತಮ್ಮ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರಿಗೆ ರವಾನಿಸಿದ್ದಾರೆ.
ಇದನ್ನೂ ಓದಿ: Karnataka Poll 2023: ಕಾಂಗ್ರೆಸ್ಗೆ ಬಿಗ್ ಶಾಕ್ ಕೊಟ್ಟ ಹಾವೇರಿ ಕೈ ಟಿಕೆಟ್ ಆಕಾಂಕ್ಷಿ ಎಂ.ಎಂ.ಹಿರೆಮಠ
ಇಲ್ಲಿವರೆಗೂ ಪಕ್ಷ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಬಂದಿದ್ದೇನೆ. ಆದರೆ ಕಳೆದ ಕೆಲವು ದಿನಗಳಿಂದ ಅಧ್ಯಕ್ಷ ಸ್ಥಾನವನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುತ್ತಿದ್ದು, ಇದನ್ನು ಅಂಗೀಕರಿಸಬೇಕೆಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಹಾವೇರಿ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದ ಎಂ.ಎಂ.ಹಿರೆಮಠ ಅವರು ರುದ್ರಪ್ಪ ಲಮ್ಮಾಣಿಯನ್ನು ಹೊರತುಪಡಿಸಿ ಬೇರೆಯಾರಿಗಾದರೂ ಟಿಕೆಟ್ ಕೊಡಿ ಎಂದು ರಾಜ್ಯ ಕೈ ನಾಯಕರಿಗೆ ಮನವಿ ಮಾಡಿದ್ದರು. ಅಲ್ಲದೇ ಈ ಬಾರಿ ಸ್ಪರ್ಧಿಸುವುದಾಗಿ ಇಂಗಿತ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಬೇಡ ಜಂಗಮ ಜಾತಿ ಪ್ರಮಾಣಪತ್ರವನ್ನು ಸಹ ರೆಡಿ ಮಾಡಿಕೊಂಡಿದ್ದರು.
ಇದನ್ನೂ ಓದಿ: ನೋಟು ಎಸೆದ ಪ್ರಕರಣ; ಡಿಕೆ ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಆದರೆ ಹಾವೇರಿ ಕ್ಷೇತ್ರಕ್ಕೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಹೆಸರು ಘೋಷಣೆ ಮಾಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಹಿರೆಮಠ ಹಾವೇರಿ ಜಿಲ್ಲಾಧ್ಯಕ್ಷ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ಗೆ ಗುಡ್ಬೈ ಹೇಳಿರುವ ಹಿರೆಮಠ ಅವರು ಮುಂದೆ ಬಿಜೆಪಿ ಅಥವಾ ಜೆಡಿಎಸ್ ಸೇರುತ್ತಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:43 pm, Wed, 29 March 23