ನ್ಯಾಯಾಧೀಶರ ಹಿನ್ನೆಲೆ ಪರಿಶೀಲಬೇಕು: ರಾಹುಲ್ ಗಾಂಧಿ ಆರೋಪಿ ಎಂದು ತೀರ್ಪು ನೀಡಿದ ಜಡ್ಜ್​ ಮೇಲೆ ದಿನೇಶ್ ಗುಂಡೂರಾವ್ ಅನುಮಾನ

ತೀರ್ಪು ನೀಡಿದ ನ್ಯಾಯಾಧೀಶರ ಹಿನ್ನೆಲೆಯನ್ನು ನೀವು ಪರಿಶೀಲಿಸಬೇಕು. ರಾಹುಲ್ ಗಾಂಧಿಗೆ 3 ತಿಂಗಳು ಅಥವಾ 6 ತಿಂಗಳ ಜೈಲು ಶಿಕ್ಷೆಯನ್ನು ನೀಡಬಹುದಿತ್ತು ಆದರೆ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲು ಉದ್ದೇಶಪೂರ್ವಕವಾಗಿ 2 ವರ್ಷಗಳ ಜೈಲು ಶಿಕ್ಷೆಯನ್ನು ನೀಡಲಾಯಿತು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನ್ಯಾಯಾಧೀಶರ ಹಿನ್ನೆಲೆ ಪರಿಶೀಲಬೇಕು: ರಾಹುಲ್ ಗಾಂಧಿ ಆರೋಪಿ ಎಂದು ತೀರ್ಪು ನೀಡಿದ ಜಡ್ಜ್​ ಮೇಲೆ ದಿನೇಶ್ ಗುಂಡೂರಾವ್ ಅನುಮಾನ
ದಿನೇಶ್ ಗುಂಡೂರಾವ್ ಮತ್ತು ರಾಹುಲ್ ಗಾಂಧಿ
Follow us
|

Updated on: Mar 24, 2023 | 5:30 PM

ಬೆಂಗಳೂರು: ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಅವರನ್ನು ಗುರುವಾರ ಸೂರತ್ ನ್ಯಾಯಾಲಯ ದೋಷಿ ಎಂದು ಘೋಷಿಸಿದ ನಂತರ ಅವರ ಲೋಕಸಭೆ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಕರ್ನಾಟಕದ ಹಲವಾರು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಇದು ರಾಹುಲ್ ಗಾಂಧಿ ವಿರುದ್ಧ ನಡೆಸಿದ ಷಡ್ಯಂತರ ಎಂದರ ಕೆಪಿಸಿಸಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ (Dinesh Gundu Rao) ಟೀಕಿಸಿದ್ದಾರೆ. ಅಲ್ಲದೆ, ರ್ಪು ನೀಡಿದ ನ್ಯಾಯಾಧೀಶರ ಹಿನ್ನೆಲೆಯನ್ನು ನೀವು ಪರಿಶೀಲಿಸಬೇಕು ಎಂದು ಹೇಳುವ ಮೂಲಕ ನ್ಯಾಯಾಧೀಶ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

“ಇಂತಹ ಪ್ರಕರಣದಲ್ಲಿ ಎರಡು ವರ್ಷ ಶಿಕ್ಷೆಯಾ? ತೀರ್ಪು ನೀಡಿದ ನ್ಯಾಯಾಧೀಶರ ಹಿನ್ನೆಲೆಯನ್ನು ನೀವು ಪರಿಶೀಲಿಸಬೇಕು. ರಾಹುಲ್ ಗಾಂಧಿಗೆ 3 ತಿಂಗಳು ಅಥವಾ 6 ತಿಂಗಳ ಜೈಲು ಶಿಕ್ಷೆಯನ್ನು ನೀಡಬಹುದಿತ್ತು ಆದರೆ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲು ಉದ್ದೇಶಪೂರ್ವಕವಾಗಿ 2 ವರ್ಷಗಳ ಜೈಲು ಶಿಕ್ಷೆಯನ್ನು ನೀಡಲಾಯಿತು. ಹಲವಾರು ಬಿಜೆಪಿ ನಾಯಕರು ತೀವ್ರ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಅವರ ವಿರುದ್ಧ ಏಕೆ ಯಾವುದೇ ಪ್ರಕರಣಗಳಿಲ್ಲ? ಇದು ಕರ್ನಾಟಕ ಚುನಾವಣೆಯ ಮೇಲೆ ಪರಿಣಾಮ ಬೀರಲಿದ್ದು, ರಾಜ್ಯದ ಜನತೆ ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಗುಂಡೂರ್ ರಾವ್ ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ರಾಹುಲ್ ಗಾಂಧಿ ಲೋಕಸಭಾ​ ಸದಸ್ಯತ್ವ ಅನರ್ಹ; ಬಿಜೆಪಿ ಸರ್ಕಾರದ ವಿರುದ್ಧ ಮುಗಿಬೀಳುತ್ತಿರುವ ಕಾಂಗ್ರೆಸ್

ಬಿಜೆಪಿಯವರು ನಮಗಿಂತಲೂ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಹೀಗಿದ್ದಾಗ ಆ ನಾಯಕರ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ ಗುಂಡೂರಾವ್, ಬಿಜೆಪಿಯವರು ಏನೆಲ್ಲಾ ಭಾಷಣ ಮಾಡಿಲ್ಲ? ನಾವಾದರೂ ಸಂಯಮದಿಂದ ಇರುತ್ತೇವೆ. ಅವರು ನಮಗಿಂತಲೂ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ. ರಾಜ್ಯದಲ್ಲಿ ಏನೆಲ್ಲಾ ಭ್ರಷ್ಟಾಚಾರ ನಡೆಸಿಲ್ಲ? ಯಾಕೆ ಇವರ ವಿರುದ್ಧ ಯಾವುದೇ ಕ್ರಮ ಇಲ್ಲ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಸರ್ಕಾರ ವಿರೋಧ ಪಕ್ಷಗಳನ್ನ ಮಟ್ಟ ಹಾಕುತ್ತಿದೆ: ದಿನೇಶ್​​

ದೇಶದಲ್ಲಿ ಜನತಂತ್ರ ವ್ಯವಸ್ಥೆ ಅಪಾಯಕಾರಿಯಲ್ಲಿದೆ. ಬಿಜೆಪಿ ಸರ್ಕಾರ ವಿರೋಧ ಪಕ್ಷಗಳನ್ನ ಮಟ್ಟ ಹಾಕುತ್ತಿದೆ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಬಾಯಿ ಮುಚ್ಚಿಸುವ ಕೆಲಸ ಆಗುತ್ತಿದೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ. ವಿದೇಶಕ್ಕೆ ಹೋಗಿದ್ದಾಗಳು ರಾಹುಲ್ ಗಾಂಧಿ ಸತ್ಯವನ್ನೇ ಹೇಳಿದ್ದಾರೆ. ರಾಹುಲ್​ ಮಾನನಷ್ಟವಾಗುವಂತಹ ಯಾವುದೇ ಹೇಳಿಕೆ ಕೊಟ್ಟಿರಲಿಲ್ಲ. ಕೇವಲ ಭಾಷಣಕ್ಕಾಗಿ ಅನರ್ಹಗೊಳಿಸುತ್ತಾರೆ ಅಂದರೆ ಏನು ಹೇಳಬೇಕು? ಬಿಜೆಪಿ ನಾಯಕರು ಮಹಾತ್ಮ ಗಾಂಧಿ ಬಗ್ಗೆ ಏನೆಲ್ಲಾ ಮಾತನಾಡಿದ್ದಾರೆ, ಏನು ಬೇಕಾದರೂ ಮಾಡಬಹುದು ಎಂಬ ಮನಸ್ಥಿತಿಯಲ್ಲಿ ಇದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿಯದ್ದು ಸರ್ವಾಧಿಕಾರಿ ಧೋರಣೆ, ಅದಕ್ಕೂ ಮೀರಿದ ಮನಸ್ಥಿತಿ ಅವರಲ್ಲಿದೆ. ಅಮಿತ್ ಶಾ, ನರೇಂದ್ರ ಮೋದಿ ಏನೆಲ್ಲಾ ಮಾಡುತ್ತಿದ್ದಾರೆ. ಇದು ನಿಜಕ್ಕೂ ಅಪಾಯಕಾರಿ ಬೆಳವಣಿಗೆಯಾಗಿದೆ. ಇದಕ್ಕೆಲ್ಲಾ ನಾವು ಹೆದರುವುದಿಲ್ಲ, ಇದರ ವಿರುದ್ಧ ಜನರ ಮುಂದೆ ಹೋಗುತ್ತಿದ್ದೇವೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ