AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ ಅಂತ್ಯದವರೆಗೂ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ನಡೆಯಲಿದೆ: ದಿನೇಶ್ ಗುಂಡೂರಾವ್

ಸಾಮಾನ್ಯ ಕಾರ್ಯಕರ್ತರನ್ನು ಭೇಟಿಯಾಗಿ ಸದಸ್ಯತ್ವ ನೀಡ್ತೇವೆ. ಆಂತರಿಕ ಚುನಾವಣೆಗೆ ಸದಸ್ಯತ್ವದ ಪ್ರಾಮುಖ್ಯತೆ ಬಗ್ಗೆ ಚರ್ಚೆ ಮಾಡಲಾಗಿದೆ. ಜನಜಾಗೃತಿ ಮೂಡಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಹೇಳಿದ್ದಾರೆ.

ಮಾರ್ಚ್ ಅಂತ್ಯದವರೆಗೂ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ನಡೆಯಲಿದೆ: ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
TV9 Web
| Updated By: ganapathi bhat|

Updated on: Oct 26, 2021 | 9:13 PM

Share

ದೆಹಲಿ: ಮುಂದಿನ ತಿಂಗಳು (ನವೆಂಬರ್ 1) ರಿಂದ ಮಾರ್ಚ್ ಅಂತ್ಯದವರೆಗೂ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ನಡೆಯಲಿದೆ. ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಸದಸ್ಯತ್ವ ಮಾಡಿಸಲು ನಿರ್ಧಾರ ಮಾಡಲಾಗಿದೆ ಎಂದು ಪಿಸಿಸಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ಸಭೆ ಬಳಿಕ ಇಂದು (ಅಕ್ಟೋಬರ್ 26) ದೆಹಲಿಯಲ್ಲಿ ಮಾಜಿ ಸಚಿವ ದಿನೇಶ್ ಗುಂಡೂರಾವ್​ ಹೇಳಿಕೆ ನೀಡಿದ್ದಾರೆ. ಸಾಮಾನ್ಯ ಕಾರ್ಯಕರ್ತರನ್ನು ಭೇಟಿಯಾಗಿ ಸದಸ್ಯತ್ವ ನೀಡ್ತೇವೆ. ಆಂತರಿಕ ಚುನಾವಣೆಗೆ ಸದಸ್ಯತ್ವದ ಪ್ರಾಮುಖ್ಯತೆ ಬಗ್ಗೆ ಚರ್ಚೆ ಮಾಡಲಾಗಿದೆ. ಜನಜಾಗೃತಿ ಮೂಡಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರದ ವೈಫಲ್ಯ, ಕೋಮುವಾದ, ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವಂತದ್ದಾಗಿದೆ. ಇಂತಹ ವಿಚಾರಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕಿದೆ. ಬಿಜೆಪಿ ವಿರುದ್ಧ ಹೋರಾಟ ರೂಪಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ. ಒಗ್ಗಟ್ಟಿನಿಂದ ದೇಶ ಉಳಿಸುವ ಕಾರ್ಯದಲ್ಲಿ ಶಿಸ್ತಿನಿಂದ ಇರಬೇಕು. ಈ ಬಗ್ಗೆ ಸಭೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ. ಕರ್ನಾಟಕ ರಾಜ್ಯದ ಬಗ್ಗೆ ಪ್ರತ್ಯೇಕ ಚರ್ಚೆಯಾಗಿಲ್ಲ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಎಂದು ಬಿಜೆಪಿ ಟ್ರೋಲ್​ ಮಾಡಿರುವ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಲಿಂಗಾಯತರನ್ನು ಬಿಜೆಪಿ ವೋಟ್​ ಬ್ಯಾಂಕ್ ಅಂದುಕೊಂಡಿದೆ. ವೋಟ್​ ಬ್ಯಾಂಕ್ ಉಳಿಸಿಕೊಳ್ಳಲು ಏನ್ಬೇಕಾದ್ರೂ ಮಾಡುತ್ತಾರೆ. ಬಿಜೆಪಿಯವರು ಏನ್​ ಬೇಕಾದರೂ ಮಾಡಲು ಸಿದ್ಧವಾಗಿದ್ದಾರೆ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್​ ಆರೋಪಿಸಿದ್ದಾರೆ.

ಎಲ್ಲಾ ಕಚೇರಿಗಳಲ್ಲಿ ಬಸವಣ್ಣನ ಫೋಟೋ ಹಾಕುವಂತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಆದೇಶಿಸಿದ್ದರು. ಸಿದ್ದರಾಮಯ್ಯನವರು ಅನುಭವ ಮಂಟಪ ನಿರ್ಮಿಸಿದ್ದರು. ಆದರೆ ಈಗ ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಬಿಜೆಪಿಯವರು ಟ್ರೋಲ್ ಮಾಡ್ತಿದ್ದಾರೆ ಎಂದು ದೆಹಲಿಯಲ್ಲಿ ಮಾಜಿ ಸಚಿವ ದಿನೇಶ್ ಗುಂಡೂರಾವ್​ ಹೇಳಿಕೆ ನೀಡಿದ್ದಾರೆ.

ಅಕ್ಟೋಬರ್ 30 ರಂದು ಸಿಂದಗಿ, ಹಾನಗಲ್ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. 2 ಕ್ಷೇತ್ರಗಳಲ್ಲಿ ಮುಸ್ಲಿಮರಿಗೆ ಜೆಡಿಎಸ್​ ಟಿಕೆಟ್​ ನೀಡಿದ್ದಾರೆ. ಜೆಡಿಎಸ್​ಗೆ ಬದ್ಧತೆ ಇಲ್ಲ, ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತೆಯಿಲ್ಲ. ರಾಜ್ಯದಲ್ಲಿ ಸ್ಥಿರ ಸರ್ಕಾರ ಬರುವುದು ಜೆಡಿಎಸ್​ಗೆ ಇಷ್ಟವಿಲ್ಲ. ರಾಜದಲ್ಲಿ ಅತಂತ್ರ ಸರ್ಕಾರ ಬರಬೇಕು ಎನ್ನುವುದು ಜೆಡಿಎಸ್ ಉದ್ದೇಶ. ಇದು ಸಾಮಾನ್ಯ ಜನರಿಗೆ ಗೊತ್ತಿದೆ. ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದು ಯಾಕೆ ಎಂದೂ ಗೊತ್ತಿದೆ ಎಂದು ದಿನೇಶ್ ಗುಂಡೂರಾವ್​ ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ದುರಾಡಳಿತದಿಂದ 125 ಶಾಸಕರಿದ್ದ ಕಾಂಗ್ರೆಸ್‌ ಪಕ್ಷವನ್ನು 75ಕ್ಕೆ ತಂದು ನಿಲ್ಲಿಸಿದ್ರು: ಆರ್ ಅಶೋಕ್ ವಾಗ್ದಾಳಿ

ಇದನ್ನೂ ಓದಿ: Hangal Byelections: ಕಾಂಗ್ರೆಸ್ ಪಕ್ಷ, ಸಿದ್ದರಾಮಯ್ಯ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ; ಹಾನಗಲ್​ನಲ್ಲಿ ಭರ್ಜರಿ ಪ್ರಚಾರ