ಸಿಡಿ ಇಟ್ಕೊಂಡು ಬ್ಲ್ಯಾಕ್​ಮೇಲ್​ ಮಾಡೋರನ್ನು ಬಂಧಿಸಲಿ, ನಾನು ತನಿಖೆಗೆ ಸಹಕಾರ ಕೊಡ್ತೀನಿ: ದಿನೇಶ್ ಕಲ್ಲಹಳ್ಳಿ

Ramesh Jarkiholi CD Controversy: ತನಿಖೆಗೆ ಬೇಕಾದ ಪೂರಕ ದಾಖಲೆಗಳನ್ನು ನಾನು ಒದಗಿಸುತ್ತೇನೆ. ಪೊಲೀಸರ ವಿಚಾರಣೆಗೆ ಸಹಕಾರ ನೀಡುತ್ತೇನೆ. ನನಗೆ ಭದ್ರತೆ ನೀಡಿಲ್ಲವಾದರೂ ತನಿಖೆಗೆ ಸಹಕಾರವಾಗಲಿ ಎಂಬ ಕಾರಣಕ್ಕೆ ಬಂದಿದ್ದೇನೆ. ದೂರಿನಲ್ಲಿರುವ ಸತ್ಯಾಸತ್ಯತೆಯ ಬಗ್ಗೆ ತನಿಖೆ ಆಗಬೇಕು ಎಂದು ದಿನೇಶ್ ಕಲ್ಲಹಳ್ಳಿ ಹೇಳಿದ್ಧಾರೆ.

ಸಿಡಿ ಇಟ್ಕೊಂಡು ಬ್ಲ್ಯಾಕ್​ಮೇಲ್​ ಮಾಡೋರನ್ನು ಬಂಧಿಸಲಿ, ನಾನು ತನಿಖೆಗೆ ಸಹಕಾರ ಕೊಡ್ತೀನಿ: ದಿನೇಶ್ ಕಲ್ಲಹಳ್ಳಿ
ದಿನೇಶ್ ಕಲ್ಲಹಳ್ಳಿ
Follow us
Skanda
|

Updated on:Mar 05, 2021 | 5:34 PM

ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಬಿಡುಗಡೆಗೆ ಸಂಬಂಧಿಸಿದಂತೆ ದಿನೇಶ್ ಕಲ್ಲಹಳ್ಳಿಯನ್ನ ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಹೇಳಿರುವುದನ್ನು ಸ್ವಾಗತಿಸುತ್ತೇನೆ. ಯಾರು ಬ್ಲ್ಯಾಕ್​ಮೇಲ್ ಮಾಡ್ತಿದ್ದಾರೋ ಅವರನ್ನ ಬಂಧಿಸಲಿ ಎಂದು ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆ ಬಳಿ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ತನಿಖೆಗೆ ಬೇಕಾದ ಪೂರಕ ದಾಖಲೆಗಳನ್ನು ನಾನು ಒದಗಿಸುತ್ತೇನೆ. ಪೊಲೀಸರ ವಿಚಾರಣೆಗೆ ಸಹಕಾರ ನೀಡುತ್ತೇನೆ. ನನಗೆ ಭದ್ರತೆ ನೀಡಿಲ್ಲವಾದರೂ ತನಿಖೆಗೆ ಸಹಕಾರವಾಗಲಿ ಎಂಬ ಕಾರಣಕ್ಕೆ ಬಂದಿದ್ದೇನೆ. ದೂರಿನಲ್ಲಿರುವ ಸತ್ಯಾಸತ್ಯತೆಯ ಬಗ್ಗೆ ತನಿಖೆ ಆಗಬೇಕು. ಈ ವಿಚಾರದಲ್ಲಿ ಯಾರೇ ಬ್ಲ್ಯಾಕ್​ಮೇಲ್​ ಮಾಡುತ್ತಿದ್ದರೂ ಅವರನ್ನು ಬಂಧಿಸಬೇಕು ಎಂದು ದಿನೇಶ್ ಕಲ್ಲಹಳ್ಳಿ ಹೇಳಿದ್ದಾರೆ.

ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದೇನು? ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ವಿಚಾರದ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಇದು 200 % ಬ್ಲಾಕ್ ಮೇಲ್ ಎಂದು ಬಣ್ಣಿಸಿದ್ದಾರೆ. ಈ ಮೂಲಕ ಈಗ ನಡೆಯುತ್ತಿರುವ ಚರ್ಚೆಗೆ ಹೊಸದೊಂದು ಆಯಾಮ ನೀಡಿದ್ದಾರೆ. ಇದೇ ವಿಚಾರದ ಕುರಿತು ಮಾತನಾಡಿರುವ ಅವರು ಗಂಭೀರ ಆರೋಪವನ್ನು ಮಾಡಿದ್ದಾರೆ. ಅವರ ಪ್ರಕಾರ ಈ ಸಿಡಿ ವಿಚಾರದಲ್ಲಿ 5 ಕೋಟಿ ರೂಪಾಯಿ ವ್ಯವಹಾರ ಆಗಿದೆ ಎಂದು ಹೇಳಿದ್ದಾರೆ. ಆದರೆ, ರೂ 5 ಕೋಟಿಯನ್ನು ಯಾರು, ಯಾರಿಗೆ ಮತ್ತು ಎಲ್ಲಿ ಕೊಟ್ಟರು? ಎಂಬ ವಿಚಾರವನ್ನು ಅವರು ಹೊರಹಾಕಿಲ್ಲ. ರಮೇಶ್ ಜಾರಕಿಹೊಳಿ ಅವರ ಸಿಡಿ ಬಿಡುಗಡೆ ಮಾಡಿರುವ ದಿನೇಶ್ ಕಲ್ಲಹಳ್ಳಿ ತನ್ನ ಬಳಿ ಇನ್ನೂ ಮೂರು ಸಿಡಿ ಇದೆ. ಅದನ್ನು ಸಮಯ ಬಂದಾಗ ಬಿಡುಗಡೆ ಮಾಡುತ್ತೇನೆ ಎಂದು ಈಗಾಗಲೇ ಮಾಧ್ಯಮದ ಮುಂದೆ ಅನೇಕ ಬಾರಿ ಹೇಳಿದ್ದಾರೆ. ಆದರೆ ಆ ಮೂರು ಸಿಡಿಗಳಲ್ಲಿ ಇಬ್ಬರು ರಾಜಾರಣಿಗಳಲ್ಲ. ಹಾಗೊಮ್ಮೆ ಅದನ್ನು ಬಿಡುಗಡೆ ಮಾಡಿದರೆ, ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿ ಆಗುತ್ತದೆ ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ: ಹೆಚ್.​ಡಿ.ಕುಮಾರಸ್ವಾಮಿ ಲೆಕ್ಕಾಚಾರ: ರಮೇಶ್ ಜಾರಕಿಹೊಳಿ ಸಿಡಿ ಮಾಡಲು 5 ಕೋಟಿ ರೂಪಾಯಿ ಡೀಲ್

ವಿಡಿಯೋ ಸಾಕ್ಷ್ಯ ಸಾಕಾಗಲ್ಲ, ದಾರೀಲಿ ಹೋಗುವವರು ದೂರು ಕೊಟ್ರೆ FIR ಹಾಕೋಕೆ ಆಗಲ್ಲ; ಜಾರಕಿಹೊಳಿ ಪರ​ ವಕೀಲ ರಮೇಶ್ ಬ್ಯಾಟಿಂಗ್

Published On - 1:23 pm, Fri, 5 March 21

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!