ಬಿಜೆಪಿ ಮುಖಂಡರನ್ನು ಮುಂದಿಟ್ಟುಕೊಂಡು ಭ್ರಷ್ಟಾಚಾರ: ಸಂಸದ ಜಿಎಂ ಸಿದ್ದೇಶ್ವರ್ ವಿರುದ್ಧ ಕಾಂಗ್ರೆಸ್ ಮುಖಂಡ ದಿನೇಶ್ ಶೆಟ್ಟಿ ಆರೋಪ
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಅವರನ್ನು ಮುಂದಿಟ್ಟುಕೊಂಡು ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರ ವ್ಯಾಪಕ ಭ್ರಷ್ಟಾಚಾರ ಮಾಡಿದ್ದಾರೆ. ಇದನ್ನ ಕೆಲ ವರ್ಗಾವಣೆಯಾದ ಹಾಗೂ ನಿವೃತ್ತರಾದ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿನೇಶ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.
ದಾವಣಗೆರೆ: ಬಿಜೆಪಿ ಮುಖಂಡರನ್ನ ಮುಂದಿಟ್ಟುಕೊಂಡು ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರರಿಂದ (gm siddeshwar) ವ್ಯಾಪಕ ಭ್ರಷ್ಟಾಚಾರ ಮಾಡಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿನೇಶ್ ಶೆಟ್ಟಿ (Dinesh Shetty) ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಅವರನ್ನು ಮುಂದಿಟ್ಟುಕೊಂಡು ಸಂಸದ ಜಿಎಂ ಸಿದ್ದೇಶ್ವರ ವ್ಯಾಪಕ ಭ್ರಷ್ಟಾಚಾರ ಮಾಡಿದ್ದಾರೆ. ಇದನ್ನ ಕೆಲ ವರ್ಗಾವಣೆಯಾದ ಹಾಗೂ ನಿವೃತ್ತರಾದ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ ಎಂದರು.
ನಿವೃತ್ತ ಅಧಿಕಾರಿಗಳು ನೀಡಿರುವ ಹಲವು ದಾಖಲೆಗಳು ನನ್ನ ಪೆನ್ಡ್ರೈವ್ನಲ್ಲಿದೆ. ಸಂಸದ ಜಿ.ಎಂ.ಸಿದ್ದೇಶ್ವರ್ ಜೊತೆಗೆ ಜಾಧವ್ಗೂ ಪ್ರತ್ಯೇಕವಾಗಿ 10% ಕೊಡಬೇಕು. 1 ಕೆರೆ ಹೂಳೆತ್ತಲು 16 ಕೋಟಿ ರೂ. ಖರ್ಚು ಮಾಡಿದ್ದೇವೆಂದು ಹೇಳಿರುವುದೇ ಸಾಕ್ಷಿ. ದಾವಣಗೆರೆಗೆ ಕುಡಿವ ನೀರಿಗೆ ಆಸರೆಯಾದ ಕುಂದವಾಡ ಕೆರೆ 253 ಎಕರೆಯಿದೆ. ಕುಂದವಾಡ ಕೆರೆ ನಿರ್ವಹಣೆಗೆ 3.50 ಕೋಟಿ ರೂ. ವೆಚ್ಚವಾಗಿದೆ ಎಂದು ಹೇಳುತ್ತಾರೆ.
ಇದನ್ನೂ ಓದಿ: ನರಿಗಳು ಘೀಳಿಟ್ಟರೆ ಕಾಡಿನ ರಾಜ ಬೆದರುವುದು ಉಂಟಾ?: ವಿಪಕ್ಷಗಳ ಸಭೆಗೆ ಸಿಟಿ ರವಿ ವ್ಯಂಗ್ಯ
ಸ್ಮಾರ್ಟ್ಸಿಟಿ ಯೋಜನೆಯಡಿ ಕೆರೆ ಹೂಳೆತ್ತಲು 16 ಕೋಟಿ ರೂ. ವೆಚ್ಚ ಮಾಡಿದ್ದಾರೆ. ಇದೆಲ್ಲವೂ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿ. ಅವರು ಭ್ರಷ್ಟಾಚಾರ ಮಾಡಿಲ್ಲವೆಂದರೆ ದಾವಣಗೆರೆ ದೇವತೆ ದುರ್ಗಾಂಭಿಕಾ ದೇವಸ್ಥಾನಕ್ಕೆ ಬಂದು ಗಂಟೆ ಬಡಿಯಲ್ಲಿ ಬಾರಿಸಲಿ. ಅಲ್ಲೇ ಭ್ರಷ್ಟಾಚಾರ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ದಿನೇಶ್ ಶೆಟ್ಟಿ ಸವಾಲು ಹಾಕಿದ್ದಾರೆ.
ಏಕರೂಪ ನಾಗರಿಕ ಕಾನೂನು ಜಾರಿಗೆ ಆಗ್ರಹ: ಸಹಿ ಸಂಗ್ರಹಕ್ಕೆ ಮುಂದಾದ ಶ್ರೀರಾಮ ಸೇವೆ
ದೇಶದಲ್ಲಿ ಏಕರೂಪ ನಾಗರಿಕ ಕಾನೂನು ಜಾರಿಗೆ ಆಗ್ರಹಿಸಿ ರಾಜ್ಯಾದ್ಯಂತ ಸಹಿ ಸಂಗ್ರಹಕ್ಕೆ ಶ್ರೀರಾಮ ಸೇವೆ ಮುಂದಾಗಿದೆ ಎಂದು ದಾವಣಗೆರೆಯಲ್ಲಿ ಶ್ರೀರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಮಾಹಿತಿ ನೀಡಿದ್ದಾರೆ. ನಾಳೆಯಿಂದ ಇದೇ 28ರ ವರೆಗೆ ಸಹಿ ಸಂಗ್ರಹ ಅಭಿಯಾನ ನಡೆಯಲಿದೆ. ಇದಕ್ಕೆ ಶ್ರೀರಾಮ ಸೇನೆಯ ಪ್ರಮುಖ ಪ್ರಮೋದ ಮುತಾಲಿಕ ಚಾಲನೆ ನೀಡಲಿದ್ದಾರೆ ಎಂದರು.
ಇದನ್ನೂ ಓದಿ: ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡದಿದ್ದರೆ ಮುಂದಿನ ತೀರ್ಮಾನ ಕೈಗೊಳ್ಳುವೆ: ಮಾಜಿ ಸಚಿವ ವಿ ಸೋಮಣ್ಣ
ರಾಜ್ಯದಲ್ಲಿ ಐದು ಲಕ್ಷಕ್ಕೂ ಹೆಚ್ಚು ಜನರ ಸಹಿ ಸಂಗ್ರಹಿಸಲಾಗುವುದು. ಹೀಗೆ ಸಂಗ್ರಹಿಸಿದ ಸಿಹಿಗಳ ದಾಖಲೆಗಳನ್ನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:07 pm, Sun, 16 July 23