ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಹೋದ ಅಜ್ಜಿ: ಸರಕಾರಕ್ಕೆ ಕನಿಕರ ಇಲ್ಲವೇ ಎಂದ ಕುಮಾರಸ್ವಾಮಿ

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ ಗ್ರಾಮದ ವಿಶೇಷಚೇತನ ವೃದ್ಧೆಯೊಬ್ಬರು ಮಾಶಾಸನಕ್ಕಾಗಿ ಐದು ಕಿಲೋ ಮೀಟರ್ ದೂರದವರೆಗೆ ತೆವಲಿಕೊಂಡು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರ ಫೋಟೋ ಹಂಚಿಕೊಂಡು ಟ್ವೀಟ್ ಮಾಡಿದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ, ಅಜ್ಜಿಯ ಯಾತನೆ ಸರ್ಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ. ಸರಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಹೋದ ಅಜ್ಜಿ: ಸರಕಾರಕ್ಕೆ ಕನಿಕರ ಇಲ್ಲವೇ ಎಂದ ಕುಮಾರಸ್ವಾಮಿ
ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಹೋದ ಅಜ್ಜಿ: ಸರಕಾರಕ್ಕೆ ಕನಿಕರ ಇಲ್ಲವೇ ಎಂದು ಪ್ರಶ್ನಿಸಿದ ಎಚ್​ಡಿ ಕುಮಾರಸ್ವಾಮಿ
Follow us
Sunil MH
| Updated By: Rakesh Nayak Manchi

Updated on: Jan 14, 2024 | 2:36 PM

ಬೆಂಗಳೂರು, ಜ.14: ವಿಶೇಷಚೇತನ ವೃದ್ಧೆಯೊಬ್ಬರು ಮಾಶಾಸನಕ್ಕಾಗಿ ಐದು ಕಿಲೋ ಮೀಟರ್ ದೂರದವರೆಗೆ ತೆವಲಿಕೊಂಡು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರ ಫೋಟೋ ಹಂಚಿಕೊಂಡು ಟ್ವೀಟ್ ಮಾಡಿದ ಮಾಜಿ ಮುಖ್ಯಮಂತ್ರಿ ಹೆಚ್.​ಡಿ. ಕುಮಾರಸ್ವಾಮಿ (H.D. Kumaraswamy), ಅಜ್ಜಿಯ ಯಾತನೆ ಸರ್ಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ. ಸರಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರಕಾರದವರು ಗ್ಯಾರೆಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಹಸನು ಮಾಡುವ ಮಾತು ಒಳ್ಳೆಯದೇ. ಆದರೆ, ಜನಜೀವನ ಹೇಗೆ ಹಳಿ ತಪ್ಪುತ್ತಿದೆ ಎನ್ನುತ್ತಿರುವುದಕ್ಕೆ ಈ ದೃಶ್ಯವೇ ಜೀವಂತ ಸಾಕ್ಷಿ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ ಹಾಗೂ ಸರಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ. ಈ ಅಜ್ಜಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ ಗ್ರಾಮದವರು. ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ ಅಜ್ಜಿಯ ದುಸ್ಥಿತಿಯನ್ನು ಕಂಡು ನನಗೆ ತೀವ್ರ ಆಘಾತ ಉಂಟಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ನನ್ನ ತಮ್ಮನ ಪರ ಮಾತಾಡಿದ್ದ ಕುಮಾರಸ್ವಾಮಿಯರಿಗೆ ಕೃತಜ್ಞತೆ ಸಲ್ಲಿಸಲು ಅವರ ಮನೆಗೆ ಹೋಗಿದ್ದೆ: ಪ್ರತಾಪ ಸಿಂಹ

ನಾನು ಮುಖ್ಯಮಂತ್ರಿ ಆಗಿದ್ದಾಗ ವೃದ್ಧರು, ವಿಕಲಚೇತನರು, ವಿಧವೆಯರು, ದೇವದಾಸಿಯರು ಸೇರಿ ಸಮಾಜದ ವಿವಿಧ ದುರ್ಬಲ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟು, ಅವರ ಆರ್ಥಿಕ ಸಬಲೀಕರಣಕ್ಕೆ ಕ್ರಮ ವಹಿಸಿದ್ದೆ. ವೃದ್ದಾಪ್ಯ ವೇತನ ವಿಕಲಚೇತನರ  ಮಾಶಾಸನವನ್ನು ಏರಿಕೆ ಮಾಡಿದ್ದೆ. ಕಷ್ಟದಲ್ಲಿರುವವರಿಗೆ ಆಸರೆ ಕೊಡುವುದು ಆಡಳಿತ ನಡೆಸುವವರ ಕರ್ತವ್ಯ. ಗೃಹಲಕ್ಷ್ಮಿಯರಿಗೆ ₹2000 ಕೊಡುತ್ತೀರಿ ಸೇರಿ, ಆದರೆ ಇಂತಹ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಟ್ವೀಟ್

ರಾಜ್ಯ ಸರಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ, ಸಂತೋಷ. ಆದರೆ; ಬಡ, ಅಶಕ್ತ ಮಹಿಳೆಯರಿಗೆ ನೆರವಾಗುವ ವೃದ್ಯಾಪ್ಯ ವೇತನ, ವಿಧವಾ ವೇತನವನ್ನು ಸಕಾಲಕ್ಕೆ ಮತ್ತು ನಿಯಮಿತವಾಗಿ ಬಿಡುಗಡೆ ಮಾಡಬೇಕು. ಮಾಶಾಸನಕ್ಕಾಗಿ ಈ ಅಜ್ಜಿ 5 ಕಿ.ಮೀ. ತೆವಳಿಕೊಂಡು ಬಂದ ದೃಶ್ಯಗಳು ಪುನರಾವರ್ತನೆ ಆಗಬಾರದು. ಕೂಡಲೇ ಆ ತಾಯಿಗೆ ಸರಕಾರ ಎಲ್ಲ ಸೌಲಭ್ಯಗಳನ್ನು ಕೂಡಲೇ ಒದಗಿಸಬೇಕು ಎಂದು ಹೇಳಿದ ಕುಮಾರಸ್ವಾಮಿ, ಕಣ್ತೆರೆದು ನೋಡಲಿ ಕಾಂಗ್ರೆಸ್ ಸರಕಾರ ಎಂದು ಹ್ಯಾಶ್​​ಟ್ಯಾಗ್ ಹಾಕಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ