AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Lakshmi Scheme: ಜುಲೈ 14ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ: ಸಚಿವ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳಾಮಣಿಗಳು ಕಾಯುತ್ತಿದ್ದಾರೆ. ಈ ನಡುವೆ ಜುಲೈ 14 ರಿಂದ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

Gruha Lakshmi Scheme: ಜುಲೈ 14ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ: ಸಚಿವ ಲಕ್ಷ್ಮೀ ಹೆಬ್ಬಾಳ್ಕರ್
ಜುಲೈ 14ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಕ್ಕೆ ಚರ್ಚಿಸಲಾಗಿದೆ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
TV9 Web
| Edited By: Rakesh Nayak Manchi|

Updated on: Jul 02, 2023 | 2:59 PM

Share

ಬೆಳಗಾವಿ: ಪ್ರತಿ ಮನೆಯ ಯಜಮಾನಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ (Gruha Lakshmi Scheme) ಅರ್ಜಿ ಸಲ್ಲಿಸುವ ಪಕ್ರಿಯೆಯನ್ನು ಜುಲೈ 14ರಿಂದ ಆರಂಭಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ಜುಲೈ 3 ಅಥವಾ 4ರಂದು ಈ ಬಗ್ಗೆ ನಾವು ಘೋಷಣೆ ಮಾಡುತ್ತೇವೆ. ಆಗಸ್ಟ್‌ ತಿಂಗಳಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ. ರಾಜ್ಯದ ಜನರ ನಿರೀಕ್ಷೆಗೆ ತಕ್ಕ ಹಾಗೆ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ವೈಎಸ್‌ಟಿ (ಯತೀಂದ್ರ ಸಿದ್ದರಾಮಯ್ಯ ಟ್ಯಾಕ್ಸ್) ಸಂಗ್ರಹ ಮಾಡಲಾಗುತ್ತಿದೆ ಎಂಬ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ಆರೋಪ ವಿಚಾರವಾಗಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಅವರು ಕೂಡ ಸರ್ಕಾರ ನಡೆಸಿದಂತ ಅನುಭವ ಇದ್ದವರು. ಕುಮಾರಸ್ವಾಮಿ ಅಣ್ಣ ಹಿರಿಯರು, ರಾಜಕೀಯ ಮುತ್ಸದ್ಧಿಗಳು. ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಗೊತ್ತಿಲ್ಲ ಎಂದರು.

ಅಲ್ಲದೆ, ಸರ್ಕಾರ ರಚನೆ ಆಗಿ ಈಗ ಒಂದು ತಿಂಗಳು, ಐದು ದಿನ ಆಗಿದೆ. ಸರ್ಕಾರಕ್ಕೆ ಕೆಲಸ ಮಾಡಲು ಬಿಡಿ. ಜನರು ಬಹಳಷ್ಟು ಆಶಾಭಾವನೆ ಇಟ್ಟುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಈಗಲೇ ನೀವು ಈ ರೀತಿ ಮಾತನಾಡಲು ಶುರು ಮಾಡಿದರೆ ಅದು ತಪ್ಪಾಗುತ್ತದೆ. ಸ್ವಲ್ಪ ಅಮಯ ಕೊಡಿ, ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಅವರನ್ನೇ ಕೇಳಿ ಎಂದರು.

ಇದನ್ನೂ ಓದಿ: Gruha Jyothi: ಗೃಹಜ್ಯೋತಿ‌ ಯೋಜನೆ ಯಾರಿಗೆಲ್ಲಾ ಅನ್ವಯಿಸಲಿದೆ, ಇದರ ಲೆಕ್ಕಾಚಾರ ಹೇಗೆ?

ವಿಪಕ್ಷದವರು ಹತಾಶರಾಗಿದ್ದಾರಾ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾನು ಹತಾಶ ಆಗಿದ್ದಾರ ಏನೂ ಅಂತಾ ಹೇಳಲು ಬಯಸಲ್ಲ. ಬಹಳ ನಿರೀಕ್ಷೆ ಇಟ್ಟುಕೊಂಡು ರಾಜ್ಯದ ಜನತೆ ನಮಗೆ ಆಶೀರ್ವಾದ ಮಾಡಿದ್ದಾರೆ. ಕೆಲಸ ಮಾಡಲು ನಮಗೆ ಸಮಯಾವಕಾಶ ನೀಡಿ ಅಂತಾ ಕೇಳುತ್ತಿದ್ದೇನೆ. ನಮಗೆ ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ. ಆದರೂ ನಾವು ದುಡ್ಡು ಕೊಟ್ಟು ನಾವು ಕೊಟ್ಟ ಭಾಷೆಯನ್ನು ಉಳಿಸಿಕೊಳ್ಳುತ್ತಿದ್ದೇವೆ ಎಂದರು.

ಈ ತಿಂಗಳಿಂದ ಗೃಹಜ್ಯೋತಿ, ಅನ್ನಭಾಗ್ಯ ಲಾಭ ಎಲ್ಲರಿಗೂ ಸಿಗುತ್ತದೆ. ಮುಂದಿನ ಆಗಸ್ಟ್‌ನಿಂದ ಗೃಹಲಕ್ಷ್ಮೀ ಯೋಜನೆ ಮನೆಯ ಯಜಮಾನಿಗೆ ಸಿಗುತ್ತದೆ. ಕೊಟ್ಟಂತ ಭಾಷೆ ಉಳಿಸಿಕೊಳ್ಳುತ್ತಿದ್ದೇವೆ. ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಜನರ ನಿರೀಕ್ಷೆ ತಕ್ಕ ಹಾಗೇ ಕೆಲಸ ಮಾಡುತ್ತೇವೆ ಎಂದರು.

ಬೆಳಗಾವಿಯ ಔಟರ್ ರಿಂಗ್ ರೋಡ್‌ ಯೋಜನೆಗೆ ಕೆಲವು ರೈತರು ವಿರೋಧಿಸುತ್ತಿರುವ ಬಗ್ಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಬಹಳಷ್ಟು ಜನ ರೈತರು ಆ ಯೋಜನೆ ಒಪ್ಪಿಕೊಂಡಿದ್ದಾರೆ. ನನ್ನ ಕ್ಷೇತ್ರದಲ್ಲಿ ಸುಮಾರು 1200 ಜನ ರೈತರು ಇದ್ದಾರೆ. ನನ್ನ ಕ್ಷೇತ್ರ ಅಷ್ಟೇ ಅಲ್ಲ ಬೆಳಗಾವಿ ದಕ್ಷಿಣ, ಯಮಕನಮರಡಿ ಕ್ಷೇತ್ರ ಬರುತ್ತದೆ. ಬಹಳಷ್ಟು ಜನ ಈ ಯೋಜನೆ ಒಪ್ಪಿಕೊಂಡಿದ್ದಾರೆ, ಎಲ್ಲರಿಗೂ ಅಭಿವೃದ್ಧಿ ಬೇಕು. ಬೆಳಗಾವಿ ಬೆಳೆಯಬೇಕಂದರೆ ಎಲ್ಲರಿಗೂ ಕನೆಕ್ಟಿವಿಟಿ ಬೇಕು. ಅವರ ಮನವೊಲಿಸುವ ವಿಶ್ವಾಸ ಇದೆ. ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ನಾಲ್ಕು ಪಟ್ಟು ದರ ನೀಡಿ ಮನವೊಲಿಸುತ್ತೇವೆ. ಮುಂದಿನ ದಿನಗಳಲ್ಲಿ ನನ್ನ ಕ್ಷೇತ್ರಕ್ಕೆ ಕೈಗಾರಿಕೆಗಳು ಬರುತ್ತದೆ ಎಂದರು.

ಬಿಜೆಪಿ ತಮ್ಮ ಆಂತರಿಕ ಹೋರಾಟ ಕಡಿಮೆ ಮಾಡಿಕೊಳ್ಳಲಿ: ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆಗೆ ನಿರ್ಧಾರ ಮಾಡಿರುವ ಬಗ್ಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಬಿಜೆಪಿ ಮೊದಲು ತಮ್ಮ ಆಂತರಿಕ ಹೋರಾಟ ಕಡಿಮೆ ಮಾಡಿಕೊಳ್ಳಲಿ. ಆಮೇಲೆ ಬೇರೆಯವರ ಬಗ್ಗೆ ಮಾತನಾಡಲಿ. ಹೋರಾಟ ಮಾಡುತ್ತಾರೆ ಅಂದರೆ ಅದು ಬಿಜೆಪಿ ನಾಯಕರ ಹಕ್ಕು. ವಿಪಕ್ಷ ಸ್ಥಾನದಲ್ಲಿದ್ದಾರೆ, ಅವರ ಹೋರಾಟಕ್ಕೆ ನಮ್ಮ ಅಭ್ಯಂತರವಿಲ್ಲ. ಸುಭದ್ರವಾದ ಸರ್ಕಾರ, ಸಮೃದ್ಧಿಯತ್ತ ಕರ್ನಾಟಕ ನಾವು ಮಾಡುತ್ತೇವೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!