ಹೊಸಕೋಟೆ ಕಾಂಗ್ರೆಸ್​​ನಲ್ಲಿ ಮತ್ತೆ ಬಿರುಕು: ಚುನಾವಣೆ ಹೊತ್ತಲ್ಲಿ ‘ಕೈ’ ಗೆ ಶಾಕ್…!

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಹೊಸಕೋಟೆ ಕಾಂಗ್ರೆಸ್​​ನಲ್ಲಿ ಮತ್ತೆ ಅಸಮಾಧಾನ ಸ್ಫೋಟಗೊಂಡಿದೆ.

ಹೊಸಕೋಟೆ ಕಾಂಗ್ರೆಸ್​​ನಲ್ಲಿ ಮತ್ತೆ ಬಿರುಕು:  ಚುನಾವಣೆ ಹೊತ್ತಲ್ಲಿ ಕೈ ಗೆ ಶಾಕ್...!
ಕಾಂಗ್ರೆಸ್ ಪಕ್ಷ
Updated By: ರಮೇಶ್ ಬಿ. ಜವಳಗೇರಾ

Updated on: Oct 19, 2022 | 7:13 PM

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಿಧಾನಸಭೆ ಚುನಾವಣೆಯಲ್ಲಿ ರಾಜಕೀಯ ಗರಿಗೆದರಿದೆ. ಒಂದು ಕಡೆ ಬಿಜೆಪಿಯಲ್ಲಿ ಮೂಲ ಹಾಗೂ ವಲಸಿಗ ಫೈಟ್ ಶುರುವಾಗಿದೆ. ಇದರ ಬೆನ್ನಲ್ಲೇ ಇದೀಗ ಇತ್ತ ಕಾಂಗ್ರೆಸ್​ನಲ್ಲೂ ಸಹ ಅದೇ ಗುದ್ದಾಟ ಆರಂಭವಾಗಿದೆ.

ಬಿಜೆಪಿಯಲ್ಲಿ ಎಂಟಿಬಿ ನಾಗರಾಜ್ ಹಾಗೂ ಮೂಲ ಬಿಜೆಪಿ ನಾಯಕರ ಮಧ್ಯೆ ತಿಕ್ಕಾಟ ನಡೆಯುತ್ತಿದ್ರೆ, ಇತ್ತ ಕಾಂಗ್ರೆಸ್​ನಲ್ಲಿ ಶಾಸಕ ಶರತ್ ಬಚ್ಚೇಗೌಡ ಹಾಗೂ ಮೂಲ ಕೈ ನಾಯಕರ ನಡುವೆ ಫೈಟ್ ನಡೆದಿದೆ. ಪದಾಧಿಕಾರಿಗಳ ಆಯ್ಕೆಯಲ್ಲಿ ಶರತ್ ಬಚ್ಚೇಗೌಡ ಅವರು ಮೂಲ ಕಾಂಗ್ರೆಸ್ಸಿಗರನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ರಾಜೀನಾಮೆ

ಅತ್ತ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ರಾಜ್ಯ ನಾಯಕರು ಶುಭಾಶಯಗಳನ್ನು ಹೇಳುತ್ತಿದ್ದರೆ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​​ನಲ್ಲಿ ಮತ್ತೆ ಬಿರುಕು ಕಾಣಿಸಿಕೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜೀನಾಮೆ ನೀಡಿದ್ದಾರೆ.

ಶರತ್ ಬಚ್ಚೇಗೌಡ ವಿರುದ್ಧ ಸಿಡಿದೆದ್ದ ಮುನಿಶಾಮಣ್ಣ ಅವರು ಬೆಂಗಳೂರು ಗ್ರಾ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಚುನಾವಣೆ ಹೊತ್ತಲ್ಲೇ ಶಾಸಕ ಶರತ್​ ಬಚ್ಚೇಗೌಡ ಹಾಗೂ ಕಾಂಗ್ರೆಸ್​ಗೆ ಬಿಗ್ ಕೊಟ್ಟಿದ್ದಾರೆ. ಪದಾಧಿಕಾರಿಗಳ ಆಯ್ಕೆಯಲ್ಲಿ ಮೂಲ ಕಾಂಗ್ರೆಸ್ಸಿಗರ ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ಅಸಮಧಾನಕ್ಕೆ ಕಾರಣವಾಗಿದೆ.

ಕಳೆದ ಹೊಸಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯ ಸಾರಿ ಪಕ್ಷೇತರ ಅಭ್ಯರ್ಥಿಯಾಗಿ  ಬಿಜೆಪಿ ಸಂಸದ ಬಿನ್ ಬಚ್ಚೆಗೌಡ ಪುತ್ರ   ಶರತ್ ಬಚ್ಚೇಗೌಡ ಕಣಕ್ಕಿಳಿದು ಗೆಲುವು ಸಾಧಿಸಿದ್ದರು. ಬಳಿಕ ಕಾಂಗ್ರೆಸ್​ಗೆ ಬೆಂಬಲ ಸೂಚಿಸಿದ್ದಾರೆ. ಅಲ್ಲದೇ ಮುಂದಿನ ಚುನಾವಣೆಗೆ ಕಾಂಗ್ರೆಸ್​ನಿಂದಲೇ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಆದ್ರೆ, ಇದಕ್ಕೆ ಮೂಲ ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾಗಿದೆ. ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿದಿದ್ದೇವೆ. ಆದ್ರೆ, ಈಗ ಬಂದವರಿಗೆ ಮಣೆ ಹಾಕಿದ್ರೆ ಹೇಗೆ ಎನ್ನುವುದು ಮೂಲ ಕಾಂಗ್ರೆಸ್ ನಾಯಕರ ಮಾತು.

ಬಿಜೆಪಿಯಲ್ಲೂ ಮುಸುಕಿನ ಗುದ್ದಾಟ

ಯೆಸ್…ಹೊಸಕೋಟೆ ಕಾಂಗ್ರೆಸ್​ನಲ್ಲಿ ಮಾತ್ರವಲ್ಲ ಬಿಜೆಪಿಯಲ್ಲೂ ಸಹ ಮೂಲ-ವಲಸಿಗ ಮುಸುಕಿನ ಫೈಟ್ ಇದೆ.  ಸಚಿವ ಎಂಟಿಬಿ ನಾಗರಾಜ್ ಮುಂದಿನ ಚುನಾವಣೆಯಲ್ಲಿ ತಾವು ಬದಲಿಗೆ ತಮ್ಮ ಪುತ್ರನನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ. ಆದ್ರೆ, ಇದಕ್ಕೆ ಮೂಲ ಬಿಜೆಪಿಗರ ವಿರೋಧ ಇದ್ದು, ಇದು ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆದುಕೊಳ್ಳಲಿದೆ ಎನ್ನುವುದನ್ನು ಕಾದುನೋಡಬೇಕಿದೆ.