ಮೈಸೂರು: ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದಾಗಿ ಹೇಳಿಕೆ, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

| Updated By: Rakesh Nayak Manchi

Updated on: Sep 24, 2023 | 10:36 PM

ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಯತೀಂದ್ರ ಸಿದ್ದರಾಮಯ್ಯ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಇದರ ವಿಡಿಯೋ ವೈರಲ್ ಆಗಿದ್ದು, ಈಗಾಗಲೇ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಇದೀಗ ಮೈಸೂರು ಬಿಜೆಪಿ ಘಟಕದಿಂದ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಮೈಸೂರು: ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದಾಗಿ ಹೇಳಿಕೆ, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು
ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ ಮೈಸೂರು ಬಿಜೆಪಿ ಘಟಕ
Follow us on

ಮೈಸೂರು, ಸೆ.24: ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಇದರ ವಿಡಿಯೋ ವೈರಲ್ ಆಗಿದ್ದು, ಈಗಾಗಲೇ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಇದೀಗ ಮೈಸೂರು (Mysuru) ಬಿಜೆಪಿ ಘಟಕದಿಂದ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಸಿದ್ದರಾಮಯ್ಯರವರು ಗೆಲುವಿಗಾಗಿ ಕ್ಷೇತ್ರದ ಮಡಿವಾಳ ಸಮುದಾಯದ ಮತದಾರರಿಗೆ ಅಡುಗೆ ಮಾಡುವ ಕುಕ್ಕರ್ ಮತ್ತು ಇಸ್ತ್ರಿ ಪೆಟ್ಟಿಗೆಗಳನ್ನು ಹಂಚಿದ್ದಾರೆ. ಇದರಿಂದ ಚುನಾವಣೆಯನ್ನು ಗೆದ್ದಿರುವುದರ ಬಗ್ಗೆ ಅವರ ಪುತ್ರ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿವಾಳ ಸಮಾಜದ ಉದ್ಘಾಟನಾ ಸಮಾರಂಭದಲ್ಲಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಅವರುಗಳ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

ಇದನ್ನೂ ಓದಿ: ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿದ ಬಿಜೆಪಿ

ಪಾರದರ್ಶಕವಾಗಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿ. ಸ್ವಯಂ ಪ್ರೇರಿತವಾಗಿ ಚುನಾವಣೆಯ ಅಪರಾಧವನ್ನು ಎಸಗಿರುತ್ತಾರೆ. ಕಾನೂನನ್ನು ಉಲ್ಲಂಘಿಸಿ ಮತದಾರರಿಗೆ ಆಮಿಷವನ್ನು ತೋರಿ ಮತವನ್ನು ತಮ್ಮ ಪಕ್ಷಕ್ಕೆ ಹಾಕಿಸಿಕೊಂಡಿರುವುದು ಸ್ಪಷ್ಟವಾಗಿ ತಿಳಿದು ಬರುತ್ತದೆ. ಈ ಖರ್ಚು ವೆಚ್ಚವನ್ನು ಸಹ ಚುನಾವಣೆಯ ಲೆಕ್ಕದಲ್ಲಿ ತೋರಿಸಿರುವುದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವನೂರು ಪ್ರತಾಪ್ ಸೇರಿ ಹಲವರು ಠಾಣೆಗೆ ತೆರಳಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ವಿರುದ್ಧ ದೂರು ನೀಡಿದ್ದಾರೆ.

ದೂರು ನೀಡಿದ ಬಳಿಕ ಮಾತನಾಡಿದ ಭಾಸ್ಕರ್ ರಾವ್, ನಮ್ಮ ಬಿಜೆಪಿ ಪಾರ್ಟಿಯ ರಂಗುನಾಯಕ್ ಅವರ ಮುಖಾಂತರ ದೂರು ಕೊಟ್ಟಿದ್ದೇವೆ. ಚುನಾವಣೆ ವೇಳೆ ನಾವು ಮಡಿವಾಳ ಸಮಾಜಕ್ಕೆ ಕುಕ್ಕರ್,ಇಸ್ತ್ರಿ ಪೆಟ್ಟಿಗೆ ಗೆಲುವಿಗೆ ಸಹಾಯವಾಯಿತು ಅಂತ ಕೆಲ ದಿನಗಳ ಹಿಂದೆ ಮಾಜಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರು. ಈ ಹೇಳಿಕೆಯನ್ನ ನಾವು ಹೇಳುತ್ತಿಲ್ಲ. ಚುನಾವಣೆಯಲ್ಲಿ ಗೆದ್ದಿರುವ ಅಭ್ಯರ್ಥಿಯ ಮಗ ಹೇಳಿರುವ ಹೇಳಿಕೆಯಿದು. ಈಗಾಗಲೇ ಅವರು ನೀಡಿರುವ ಹೇಳಿಕೆ ಎಲ್ಲಾ ಮಧ್ಯಮಗಳಲ್ಲೂ ಬಿತ್ತರವಾಗಿದೆ ಎಂದರು.

ಚುನಾವಣೆ ವೇಳೆ ಆಮಿಷ ಕೊಟ್ಟು ಓಟು ತೆಗೆದುಕೊಳ್ಳುವುದು ಅಪರಾಧ. ಒಂದು ವೇಳೆ ಆ ರೀತಿ ಕೊಟ್ಟಿದ್ದರೆ ಚುನಾವಣೆ ಆಯೋಗಕ್ಕೆ ಅದರ ಲೆಕ್ಕ ಕೊಡಬೇಕಿತ್ತು. ನಾವು RPI ಮತ್ತು IPC ಸೆಕ್ಷನ್ ಮೇಲೆ ಆರಕ್ಷಕ ಉಪನಿರೀಕ್ಷಕರಿಗೆ ದೂರು ಕೊಟ್ಟಿದ್ದೇವೆ. ಜಿಲ್ಲಾಧಿಕಾರಿಗಳ ಅನುಮತಿ ಪಡೆದು ಪಾರದರ್ಶಕ ತನಿಖೆ ನಡೆಸಲಿ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 pm, Sun, 24 September 23