ಅಕ್ಕಿ ನೀಡಲಾಗದ ಸಿದ್ದರಾಮಯ್ಯ ಮೋದಿ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ತೇಜಸ್ವಿ ಸೂರ್ಯ

ಅಕ್ಕಿ ನೀಡಲಾಗದೆ ಮೋದಿ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಆರೋಪಕ್ಕೆ ಬಿಜೆಪಿ ಯುವ ಮೋರ್ಚ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ತಿರುಗೇಟು ನೀಡಿದ್ದಾರೆ.

ಅಕ್ಕಿ ನೀಡಲಾಗದ ಸಿದ್ದರಾಮಯ್ಯ ಮೋದಿ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ತೇಜಸ್ವಿ ಸೂರ್ಯ
ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರನ್ನು ಭೇಟಿಯಾದ ಸಂಸದ ತೇಜಸ್ವಿ ಸೂರ್ಯ (ಎಡಚಿತ್ರ)
Follow us
Rakesh Nayak Manchi
|

Updated on: Jun 14, 2023 | 9:04 PM

ಬೆಂಗಳೂರು: ಅಕ್ಕಿ ನೀಡಲಾಗದೆ ನರೇಂದ್ರ ಮೋದಿ (Narendra Modi) ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಆರೋಪಕ್ಕೆ ಬಿಜೆಪಿ ಯುವ ಮೋರ್ಚ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ತಿರುಗೇಟು ನೀಡಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (HD Deve Gowda) ಅವರ ಭೇಟಿ ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರುವ ಅಕ್ಕಿ ಯಾವುದೂ ನಿಲ್ಲುವುದಿಲ್ಲ. ಇದು ದ್ವೇಷದ ರಾಜಕಾರಣವಲ್ಲ, ಅ‌ಸಮರ್ಥ ರಾಜಕಾರಣ. ಈ ಹಿಂದೆಯೂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆ ಘೋಷಿಸಿದ್ದರು. ಆಗಲೂ ಕೇಂದ್ರ ಸರ್ಕಾರದ ಅಕ್ಕಿಗೆ ತಮ್ಮ ಫೋಟೋ ಹಾಕಿಕೊಂಡಿದ್ದರು ಎಂದು ಹೇಳಿದರು.

ಕಾಂಗ್ರೆಸ್, ಬಿಜೆಪಿ ನಾಯಕರಲ್ಲಿ ಒಳ ಒಪ್ಪಂದ ವಿಚಾರವಾಗಿ ಮಾತನಾಡಿದ ತೇಜಸ್ವಿ ಸೂರ್ಯ, ಬಹಳಷ್ಟು ವಿಚಾರ ಚರ್ಚೆ ಮಾಡಲು ಪಕ್ಷದಲ್ಲಿ ಬಹಳಷ್ಟು ವೇದಿಕೆಗಳಿವೆ. ನಾನು ಈಗ ಪ್ರತಿಕ್ರಿಯೆ ನೀಡಿದರೆ ಅದು ಧಾರಾವಾಹಿ ರೀತಿ ಬೆಳೆಯುತ್ತದೆ. ಪಕ್ಷದ ವೇದಿಕೆಯಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು. ಹೊಸಬರಿಗೆ ಟಿಕೆಟ್ ಕುರಿತಂತೆ ರಮೇಶ್ ಜಿಗಜಿಣಗಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹೊಸಬರು, ಯುವಕರಿಗೆ ಟಿಕೆಟ್ ನೀಡದಿದರೆ ಪಕ್ಷ ಬೆಳೆಯುವುದು ಹೇಗೆ? ಸಮಾಜದಲ್ಲಿ ರಾಜಕೀಯ ಪರಿವರ್ತನೆ ಆಗುವುದು ಹೇಗೆ? ಎಂದರು.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್​ ಷರತ್ತು: ಅಸಮಾಧಾನ ಹೊರಹಾಕಿದ ಸ್ವಪಕ್ಷದ ಶಾಸಕ ಶಾಮನೂರು ಶಿವಶಂಕರಪ್ಪ

ದೇವೇಗೌಡರು ಲೀವಿಂಗ್ ಲೆಜೆಂಡ್: ತೇಜಸ್ವಿ ಸೂರ್ಯ

ನಮೋ ವಿದ್ಯಾರ್ಥಿ ವೇತನ ಪ್ರತಿಭಾನ್ವಿತ ಮಕ್ಕಳಿಗೆ ಕೊಡುತ್ತಿದ್ದೇವೆ. ಒಂದು ಸಾವಿರ ಮಕ್ಕಳಿಗೆ ಕೊಟ್ಟಿದ್ದು ಮುಂದೆ ಹತ್ತು ಸಾವಿರ ಮಕ್ಕಳಿಗೆ ಕೊಡುವ ಉದ್ದೇಶವಿದೆ. ದೇವೇಗೌಡರಿಂದ ವಿದ್ಯಾರ್ಥಿ ವೇತನ ಕೊಡಿಸಬೇಕಾಗಿತ್ತು, ಆದ್ದರಿಂದ ಕೊಡಿಸಿದ್ದೇವೆ. ವಿದ್ಯಾ ನಿಧಿಯ ಚೆಕ್ ದೇವೇಗೌಡರು ನೀಡಿದ್ದಾರೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ದೇವೆಗೌಡರು ಲೀವಿಂಗ್ ಲೆಜೆಂಡ್. ಅವರು ನನ್ನ ಕ್ಷೇತ್ರದ ಮತದಾರರು. ಹಾಗಾಗಿ ಕ್ಷೇತ್ರದ ದೊಡ್ಡವರನ್ನು ಭೇಟಿಯಾಗಿ ನಾನು ಏನು ಕೆಲಸ ಮಾಡಿದ್ದೇನೆ ಎಂದು ಹೇಳಿದ್ದೇನೆ. ಅಭಿಯಾನದ ಭಾಗವಾಗಿ ಭೇಟಿ ಮಾಡಿ ವರ್ಕ್ ರಿಪೋರ್ಟ್ ನೀಡಿದ್ದೇನೆ. ಮುಂದೆ ಎತ್ತರಕ್ಕೆ ಬೆಳೆಯುವಂತೆ ಆಶೀರ್ವಾದ ಮಾಡಿದ್ದಾರೆ. ಮುಂದೆ ಏನು ಮಾಡಬೇಕು ಎಂದು ಮಾರ್ಗದರ್ಶನ ಮಾಡಿದ್ದಾರೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್