ಬೆಂಗಳೂರು, (ಜುಲೈ 26): ಕರ್ನಾಟಕದ(Karnataka) ವಿವಿಧೆಡೆ ಪ್ರತಿಭಟನೆ, ಗಲಭೆ(violence)) ಪ್ರಕರಣಗಳಲ್ಲಿ ಬಂಧಿತರಾಗಿರುವ ಯುವಕರು ಹಾಗೂ ವಿದ್ಯಾರ್ಥಿಗಳ (Students) ವಿರುದ್ಧದ ಕೇಸ್ಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್(Tanveer Sait) , ಗೃಹ ಸಚಿವ ಡಾ.ಜಿ ಪರಮೇಶ್ವರ್ (Dr G Parameshwara) ಅವರಗೆ ಪತ್ರ ಬರೆದಿದ್ದಾರೆ. ಸುಳ್ಳು ಮೊಕದ್ದಮೆಗಳಲ್ಲಿ ಯುವಕರು, ವಿದ್ಯಾರ್ಥಿಗಳು ಬಂಧಿತರಾಗಿದ್ದಾರೆ. ಹೀಗಾಗಿ ಪ್ರಕರಣಗಳನ್ನು ಮರು ಪರಿಶೀಲಿಸಿ, ನಿಯಮಾನುಸಾರ ಹಿಂಪಡೆಯುವಂತೆ ಮೈಸೂರಿನ ಎನ್.ಆರ್.ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್, ತನ್ವೀರ್ ಸೇಠ್ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಇದನ್ನೂ ಓದಿ: ಕನ್ನಡಪರ ಸಂಘಟನೆ, ರೈತರು, ಹೋರಾಟಗಾರರ ಮೇಲಿನ ಕೇಸ್ ವಾಪಸ್; ಕರ್ನಾಟಕ ಸಚಿವ ಸಂಪುಟ ನಿರ್ಧಾರ
ಬೆಂಗಳೂರು ನಗರದ ಡಿಜೆ ಹಳ್ಳಿ-ಕೆಜೆ ಹಳ್ಳಿ)DJ Halli-KG Halli violence), ಶಿವಮೊಗ್ಗ, ಹುಬ್ಬಳ್ಳಿ ಮತ್ತು ಇತರೆ ಕಡೆಗಳಲ್ಲಿ ನಡೆದ ಪ್ರತಿಭಟನೆ ಹಾಗೂ ಗಲಭೆಗಳಲ್ಲಿ ಅಮಾಯಕ ಯುವಕರು ಹಾಗೂ ವಿದ್ಯಾರ್ಥಿಗಳು ಸುಳ್ಳು ಮೊಕದ್ದಮೆಗಳಲ್ಲಿ ಬಂಧಿತರಾಗಿದ್ದು, ಆ ಮೊಕದ್ದಮೆಗಳನ್ನು ಮರು ಪರಿಶೀಲಿಸಿ, ನಿಯಮನುಸಾರವಾಗಿ ಹಿಂಪಡೆಯಲು ಕ್ರಮಕೈಗೊಳ್ಳುವಂತೆ ಸರ್ಕಾರ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಇನ್ನು ಇದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಕ್ರಿಯಿಸಿ, ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ, ಹುಬ್ಬಳ್ಳಿ, ಶಿವಮೊಗ್ಗದಲ್ಲಿ ಕಲ್ಲು ತೂರಾಟ ನಡೆಸಿದವರ ವಿರುದ್ಧದ ಮೊಕದ್ದಮೆಗಳನ್ನು ಹಿಂಪಡೆಯುವಂತೆ ಶಾಸಕ ತನ್ವೀರ್ ಸೇಠ್ ಬರೆದಿರುವ ಮನವಿ ಪತ್ರವನ್ನು ಗೃಹ ಸಚಿವ ಪರಮೇಶ್ವರ ಅನುಮೋದಿಸಿದ್ದಾರೆ. ಇದರೊಂದಿಗೆ ಗೃಹ ಸಚಿವರು ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ನಡೆದ ಗಲಭೆ ಮತ್ತು ಹಿಂದೂ ಕಾರ್ಯಕರ್ತರ ಹತ್ಯೆಗೆ ಕಾರಣರಾದ ಪಿಎಫ್‌ಐ ಗೂಂಡಾಗಳ ವಿರುದ್ಧದ ಪ್ರಕರಣಗಳನ್ನು ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಹಿಂಪಡೆದಿತ್ತು. ಇದೀಗ ಗಲಭೆಕೋರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಕ್ರಮಕೈಗೊಳ್ಳುವಂತೆ ಗೃಹ ಸಚಿವ ಪರಮೇಶ್ವರ ಅವರು ಗೃಹ ಕಾರ್ಯದರ್ಶಿಗೆ ಸೂಚಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಬಗ್ಗೆ ಇಂದು (ಜುಲೈ 26) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಸತ್ಯಾಂಶ, ಕಾನೂನಾತ್ಮಕ ಅಂಶಗಳಿದ್ದರೆ ಮಾತ್ರ ಈ ಬಗ್ಗೆ ನಿರ್ಧಾರ ಮಾಡಲಾಗುತ್ತದೆ. ಗಲಭೆ ಆರೋಪಿಗಳ ಕೇಸ್ ವಾಪಸ್ ಬಗ್ಗೆ ಸಚಿವ ಸಂಪುಟ ಉಪಸಮತಿ ವರದಿ ನೀಡುತ್ತೆ. ನಂತರ ಸಚಿವ ಸಂಪುಟದಲ್ಲಿ ತೀರ್ಮಾನವಾಗುತ್ತೆ ಎಂದು ಸ್ಪಷ್ಟಪಡಿಸಿದರು.
ಬಿಜೆಪಿಯವರು ಯಾಕೆ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಬೇರೆ ಕೆಲಸ ಇಲ್ಲ ಎಂದು ಕಾಣಿಸುತ್ತದೆ. ಹೀಗಾಗಿ ಸಣ್ಣ ಸಣ್ಣ ವಿಷಯಗಳಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಬರದ ಬಗ್ಗೆ ಪ್ರವಾಹದ ಬಗ್ಗೆ ಬಿಜೆಪಿಯವರು ಮಾತನಾಡುತ್ತಿಲ್ಲ ಎಂದು ತಿರುಗೇಟು ನೀಡಿದರು.
2020 ಆಗಸ್ಟ್ನಲ್ಲಿ ಬೆಂಗಳೂರಿನ ಡಿಜೆ ಹಳ್ಳಿ-ಕೆಜಿ ಹಳ್ಳಿ ಹಿಂಸಾಚಾರ ಪ್ರಕರಣದಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ 240 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿತ್ತು. ಇನ್ನು ಹಿಜಾಬ್ ವಿಚಾರಕ್ಕೆ ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯಾಗಿತ್ತು. ಈ ಪ್ರರಕಣ ಹಿಂಸಾಚಾರಕ್ಕೆ ತಿರುಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 10:41 am, Wed, 26 July 23