ಚಿಕ್ಕಮಗಳೂರು: ಜೈಲಿಂದ ಬಂದವರಿಗೆ ಕಾಂಗ್ರೆಸ್ (Congress) ರಾಜ್ಯಾಧ್ಯಕ್ಷ ಹುದ್ದೆ ನೀಡಿದ್ದಾರೆ ಎಂದು ಬಿಜೆಪಿ (BJP) ಟ್ವೀಟ್ ಮಾಡಿರುವ ವಿಚಾರವಾಗಿ ನನ್ನ ಮೇಲೆ ಯಾವುದೇ ರೌಡಿಶೀಟರ್ ಕೇಸ್ ಇಲ್ಲ. ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ (BS Yadiyurappa) ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ (DK Shivakumar) ತಿರುಗೇಟು ನೀಡಿದ್ದಾರೆ.
ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೇಂದ್ರ ಸಚಿವ ಅಮಿತ್ ಶಾ ಕೂಡ ಜೈಲಿಗೆ ಹೋಗಿ ಬಂದಿದ್ದಾರೆ. ನಾನು ಜೈಲಿಗೆ ಹೋಗಿ ಬಂದಿದ್ದೇನೆ. ರಾಜಕೀಯ ಪ್ರೇರಿತವಾಗಿ ನನ್ನನ್ನು ಜೈಲಿಗೆ ಹಾಕಿದ್ದಾರೆ ಹೊರತು ಭ್ರಷ್ಟಾಚಾರ ಮಾಡಿ ಹೋಗಿಲ್ಲ. ಅವರ ತಟ್ಟೆಯಲ್ಲಿ ದೊಡ್ಡ ಹೆಗ್ಗಣ ಬಿದ್ದಿದೆ, ಅದನ್ನು ಮೊದಲು ನೋಡಿಕೊಳ್ಳಲಿ. ಮತದಾನದ ಹಕ್ಕನ್ನೇ ಮಾರಲು ಹೊರಟವರು ಬಿಜೆಪಿಯವರು ಎಂದು ವಾಗ್ದಾಳಿ ಮಾಡಿದ್ದಾರೆ.
ಭೂಗತ ಪಾತಕಿಗಳ ಗರಡಿಯಲ್ಲಿ ಬೆಳೆದ ಡಿಕೆಶಿ KPCC ಅಧ್ಯಕ್ಷರಾಗಿದ್ದಾರೆ: ಬಿಜೆಪಿ
‘ರೌಡಿಶೀಟರ್ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿ ಆಗಿದ್ದ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕರು ಟೀಕೆ ಮಾಡುತ್ತಿದ್ದರು. ಹೀಗಾಗಿ ಟ್ವೀಟ್ ಮೂಲಕ ಬಿಜೆಪಿ ತಿರುಗೇಟು ನೀಡಿದೆ. ಭೂಗತ ಪಾತಕಿಗಳ ಗರಡಿಯಲ್ಲಿ ಬೆಳೆದ ಡಿಕೆ ಶಿವಕುಮಾರ್ KPCC ಅಧ್ಯಕ್ಷರಾಗಿದ್ದಾರೆ. ಕೊಲೆ ಆರೋಪಿ ವಿನಯ್ ಕುಲಕರ್ಣಿ ಕಾಂಗ್ರೆಸ್ ನಾಯಕ. ಗೂಂಡಾಗಿರಿಯ ನಲಪಾಡ್ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂದು ಟ್ವೀಟ್ ಮೂಲಕ ಬಿಜೆಪಿ ವಾಗ್ದಾಳಿ ನಡೆಸಿತ್ತು’.
ಇದನ್ನೂ ಓದಿ: ರಾಜಕೀಯ ಪ್ರವೇಶಕ್ಕೆ ಸಜ್ಜಾದ ಕುಖ್ಯಾತ ರೌಡಿ ಸೈಲೆಂಟ್ ಸುನೀಲ: ಪಾತಕ ಲೋಕದಲ್ಲಿ ಹೀಗಿದೆ ಇವನ ಹೆಜ್ಜೆಗುರುತು
‘ನಿಮ್ಮ ಪಕ್ಷದ ನಾಯಕರ ‘ಆ ದಿನಗಳು’ ಹೇಗಿವೆ ಅಂತ ನೋಡಿ. ಒಂದು ಕಾಲದಲ್ಲಿ ಕೊತ್ವಾಲ್‌ನ ನೆಚ್ಚಿನ ಶಿಷ್ಯ ಆಗಿದ್ದವರು ತಿಹಾರ್ ಜೈಲಿನಿಂದ ಬಂದವರಿಗೆ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ಭಡ್ತಿಯಾಗಿದ್ದಾರೆ. ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರ ‘ಆ ದಿನಗಳು’ ಮರೆತು ಹೋಗಿದೆಯಾ? ಗೂಂಡಾಗಿರಿ, ರೌಡಿಸಂ ಮೇರಿಟ್ ಅಂತ ಪರಿಗಣಿಸಿ ನಲಪಾಡ್ಗೆ ಹುದ್ದೆ ನೀಡಲಾಗಿದೆ. ವಿರೋಧದ ನಡುವೆಯೂ ನಲಪಾಡ್ ಯುವ ಕಾಂಗ್ರೆಸ್ ಅಧ್ಯಕ್ಷರಾದರು. ನಿಮಗೆ ಯುವ ಕಾಂಗ್ರೆಸ್ ಅಧ್ಯಕ್ಷರ ‘ಆ ದಿನಗಳು’ ಮರೆತು ಹೋಗಿದೆಯಾ? ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ತಿರುಗೇಟು ನೀಡಿತ್ತು’. ಈ ಸಂಬಂಧ ಡಿ.ಕೆ ಶಿವಕುಮಾರ ಚಿಕ್ಕಮಗಳೂರಿನಲ್ಲಿ ತಿರುಗೇಟು ನೀಡಿದ್ದಾರೆ.
ಪೊಲೀಸರ ಕೈಗೆ ಸಿಗದ ರೌಡಿ, ಬಿಜೆಪಿ ನಾಯಕರ ಕೈಗೆ ಸಿಕ್ಕಿದ್ದೇಗೆ?
ಬಿಜೆಪಿ ಪಕ್ಷಕ್ಕೆ ರೌಡಿಶೀಟರ್ಗಳ ಸೇರ್ಪಡೆ ಹಾಗೂ ಚಾಮರಾಜಪೇಟೆಯಲ್ಲಿ ಸೈಲೆಂಟ್ ಸುನೀಲ್ ಸ್ಫರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ. ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು ಅಂದ್ರೆ ಅದು ಬಿಜೆಪಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ವಾಂಟೆಡ್ ಲಿಸ್ಟ್‌ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ. ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.
ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.ರೌಡಿಶೀಟರ್ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ? ಕ್ರಿಮಿನಲ್‌ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.
ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ?
ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್ ಸುನಿಲ್ ಎಂಬ ರೌಡಿಯ ಮುಂದೆ ಈಗ ಪೊಲೀಸರೇ ಸೈಲೆಂಟ್! ಸಚಿವ ಜ್ಞಾನೇಂದ್ರ ಅರಗ ಅವರೇ, ಸೈಲೆಂಟ್ ಸುನೀಲನಿಗೆ ಪೊಲೀಸರು ಹುಡುಕುತ್ತಿರಲಿಲ್ಲವೇ? ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರೀರಲಿಲ್ಲವೇ? ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ