ಬೆಂಗಳೂರು: ಓಂ ಬಿರ್ಲಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ನಿಂದ ಬಹಿಷ್ಕಾರ ಹಾಕಲಾಗಿದೆ. ವಿಧಾನಸಭೆಯಲ್ಲಿ ಜಂಟಿ ಅಧಿವೇಶನಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾರಿಂದ ಜಂಟಿ ಅಧಿವೇಶನ ನಡೆಸುವ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ಆಡಳಿತಾರೂಢ ಬಿಜೆಪಿಯಿಂದ ಕೆಟ್ಟ ಸಂಪ್ರದಾಯ ಆರೋಪ ಆರಂಭವಾಗಲಿದೆ. ಸರ್ಕಾರ ವಿಧಾನಸೌಧದಲ್ಲಿ ಇತಿಹಾಸ ಸೃಷ್ಟಿಸಲು ಹೊರಟಿದೆ ಎಂದು ಈ ಕ್ರಮದ ಬಗ್ಗೆ ವಿಧಾನಸೌಧದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾರನ್ನು ಕರೆಸಿ ಕಾರ್ಯಕ್ರಮ ಮಾಡಲಾಗುತ್ತಿದೆ. ಪಾರ್ಲಿಮೆಂಟ್ ವ್ಯವಸ್ಥೆಯಲ್ಲಿ ಇದಕ್ಕೆ ಅವಕಾಶವಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬ್ಯುಸಿನೆಸ್ ಅಡ್ವೈಸರಿ ಕಮಿಟಿ ಸಭೆಯಲ್ಲಿ ವಿರೋಧ ವ್ಯಕ್ತವಾಗಿದೆ. ವಿರೋಧ ಪಕ್ಷದ ನಾಯಕರಿಗೆ ಈವರೆಗೂ ಮಾಹಿತಿ ನೀಡಿಲ್ಲ. ವಿಧಾನಸಭೆಯಲ್ಲಿ ಜಂಟಿ ಅಧಿವೇಶನ ನಡೆಸಬೇಕೆಂದು ಪಟ್ಟು ಹಿಡಿಯಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಟ್ಟು ಹಿಡಿದಿದ್ದಾರೆ. ಬ್ಯಾಂಕ್ವೆಟ್ ಹಾಲ್ ಇದ್ರೂ ಇಂತಹ ಕೆಟ್ಟ ಪದ್ಧತಿ ಮಾಡ್ತಿದ್ದಾರೆ. ವಿಧಾನಸಭೆ ಬಳಸಿಕೊಳ್ಳುತ್ತಿರುವುದಕ್ಕೆ ವಿರೋಧಿಸುತ್ತಿದ್ದೇವೆ ಎಂದು ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ.
ರಾಜ್ಯಪಾಲರು, ರಾಷ್ಟ್ರಪತಿಗೆ ಮಾತ್ರ ಅವಕಾಶವಿರುತ್ತದೆ. ಜಂಟಿ ಅಧಿವೇಶನ ನಡೆಸಲು ಬೇರೆಯವರಿಗೆ ಅವಕಾಶವಿಲ್ಲ. ಹೀಗಾಗಿ ನಾಳಿನ ಕಾರ್ಯಕ್ರಮವನ್ನು ನಾವು ಬಹಿಷ್ಕರಿಸುತ್ತೇವೆ ಎಂದು ವಿಧಾನಸೌಧದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬಿಜೆಪಿ ಶಾಸಕರು, ಸಚಿವರು ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚನೆ
ಜಂಟಿ ಅಧಿವೇಶನ ಉದ್ದೇಶಿಸಿ ನಾಳೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಷಣ ಮಾಡಲಿರುವ ಕಾರಣ, ಸದನದಲ್ಲಿ ಬಿಜೆಪಿ ಶಾಸಕರು ಕಡ್ಡಾಯವಾಗಿ ಹಾಜರಿರಬೇಕು ಎಂದು ತಿಳಿಸಲಾಗಿದೆ. ಎಲ್ಲ ಸಚಿವರು, ಬಿಜೆಪಿ ಶಾಸಕರಿಗೆ ಸತೀಶ್ ರೆಡ್ಡಿ ಸೂಚನೆ ನೀಡಿದ್ದಾರೆ. ಸಿಎಂ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ನಿರ್ದೇಶನ ಹಿನ್ನೆಲೆಯಲ್ಲಿ ಸರ್ಕಾರಿ ಮುಖ್ಯ ಸಚೇತಕ ಸತೀಶ್ ರೆಡ್ಡಿ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ನಿಲುವಿಗೆ ಆರ್. ಅಶೋಕ್ ಖಂಡನೆ
ಸಂಸತ್ ಮೌಲ್ಯಗಳ ಬಗ್ಗೆ ಚರ್ಚಿಸಲು ಓಂ ಬಿರ್ಲಾ ಬರ್ತಿದ್ದಾರೆ. ಲೋಕಸಭೆ ಸ್ಪೀಕರ್ ಯಾವುದೇ ಪಕ್ಷಕ್ಕೆ ಸಂಬಂಧಿಸಿದವರಲ್ಲ. ವಿಧಾನಸಭಾ ಅಧಿವೇಶನಕ್ಕೆ ಬಂದಾಗ ಗೌರವ ಕೊಡಬೇಕು. ಕಾಂಗ್ರೆಸ್ನವರು ಭಾಗವಹಿಸಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ನವರ ಹುಳುಕು ಮನಸು ಕಾಣ್ತಿದೆ. ಕೇಂದ್ರದ ‘ಕೈ’ ನಾಯಕರ ಮಾತು ಕೇಳಿ ಹೀಗೆ ಮಾಡ್ತಿದ್ದಾರೆ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ.
ನಮ್ಮ ಸ್ಪೀಕರ್ಗೆ ನೀಡುವ ಗೌರವವನ್ನು ಅವರಿಗೂ ನೀಡ್ಬೇಕು. ಓಂ ಬಿರ್ಲಾ ಭಾರತೀಯ ಜನತಾ ಪಕ್ಷದ ಪರವಾಗಿ ಬರ್ತಿಲ್ಲ. ಲೋಕಸಭೆ ವಿಚಾರ, ನಿಲುವಳಿ ಬಗ್ಗೆ ಪ್ರಸ್ತಾಪ ಮಾಡುತ್ತಾರೆ. ಕಾಂಗ್ರೆಸ್ನವರು ಬಹಿಷ್ಕರಿಸುವ ಬದಲು ಸದನಕ್ಕೆ ಬರಬೇಕು. ಲೋಕಸಭೆಯಲ್ಲಿ ಯಾವ ರೀತಿ ಚರ್ಚೆ ಆಗುತ್ತೆಂದು ಗೊತ್ತಾಗುತ್ತೆ. ರಾಷ್ಟ್ರಪತಿ ಬರುವಂತೆ ಸ್ಪೀಕರ್ ಓಂ ಬಿರ್ಲಾ ಕೂಡ ಬರ್ತಿದ್ದಾರೆ. ಸಂವಿಧಾನದ ಬಗ್ಗೆ ಚರ್ಚೆ ಮಾಡುವುದು ಹೊಸ ಸಂಪ್ರದಾಯ. ಅದರ ಬಗ್ಗೆ ಕಾರ್ಯಕ್ರಮ ಮಾಡುವುದು ಹೊಸ ಸಂಪ್ರದಾಯ. ಕಾಂಗ್ರೆಸ್ ನಾಯಕರ ನಿರ್ಧಾರವನ್ನು ನಾನು ಖಂಡಿಸುತ್ತೇನೆ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಇದನ್ನೂ ಓದಿ: ಕಲ್ಯಾಣ ಕರ್ನಾಟಕ ವಿಚಾರವಾಗಿ ಪ್ರಿಯಾಂಕ್ ಖರ್ಗೆ, ಬಸನಗೌಡ ಪಾಟೀಲ್ ಯತ್ನಾಳ್ ಮಾತಿನ ಚಕಮಕಿ
ಇದನ್ನೂ ಓದಿ: Gender Sensitivity: ಬೇಕಾಬಿಟ್ಟಿಯಾಗಿ ರೇಪ್ ಪದ ಬಳಕೆಗೆ ವಿಧಾನಸಭಾ ಸದಸ್ಯೆಯರ ಆಕ್ಷೇಪ, ಪಕ್ಷಭೇದ ಮೀರಿದ ಮಾದರಿ ಚರ್ಚೆ
Published On - 6:04 pm, Thu, 23 September 21