ಸಿಬಿಐ ಕೇಸ್ ವಾಪಸ್: ಈ ಬಗ್ಗೆ ಡಿಕೆ ಶಿವಕುಮಾರ್​ಗೆ ಗೊತ್ತಿಲ್ವಂತೆ, ಗೃಹ ಸಚಿವ ಪರಮೇಶ್ವರ್ ಸಮರ್ಥನೆ ಇಲ್ಲಿದೆ

ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ​ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಕ್ಕೆ ವಿರೋಧ ಪಕ್ಷದ ನಾಯಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದ್ರೆ, ಇತ್ತ ಡಿಕೆ ಶಿವಕುಮಾರ್, ಈ ಬಗ್ಗೆ ಏನು ಗೊತ್ತಿಲ್ಲದಂತೆ ಸೈಲೆಂಟ್ ಆಗಿದ್ದಾರೆ.

ಸಿಬಿಐ ಕೇಸ್ ವಾಪಸ್: ಈ ಬಗ್ಗೆ ಡಿಕೆ ಶಿವಕುಮಾರ್​ಗೆ ಗೊತ್ತಿಲ್ವಂತೆ, ಗೃಹ ಸಚಿವ ಪರಮೇಶ್ವರ್ ಸಮರ್ಥನೆ ಇಲ್ಲಿದೆ
ಪರಮೇಶ್ವರ್-ಡಿಕೆ ಶಿವಕುಮಾರ್
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on: Nov 24, 2023 | 9:29 AM

ಬೆಂಗಳೂರು, (ನವೆಂಬರ್ 24): ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ​ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ (Karnataka Cabinet) ಗುರುವಾರ ಅನುಮೋದನೆ ನೀಡಿದೆ. ಈ ಬಗ್ಗೆ ಇಂದು(ನವೆಂಬರ್ 24) ಖುದ್ದು ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಈ ವಿಚಾರವನ್ನು ನಾನು ಮಾಧ್ಯಮದಲ್ಲಿ ನೋಡಿದ್ದೇನೆ. ನಿನ್ನೆ ನಾನು ಸಚಿವ ಸಂಪುಟ ಸಭೆಗೆ ಹೋಗಲು ಆಗಲಿಲ್ಲ. ಈ ಬಗ್ಗೆ ಯಾರು ಮಾತನಾಡಬೇಕೋ ಅವರೇ ಮಾತನಾಡುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಈ ಬಗ್ಗೆ ತಮಗೆ ಏನು ಗೊತ್ತಿಲ್ಲ. ಅವರೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

ಗೃಹ ಸಚಿವ ಪರಮೇಶ್ವರ್ ಸಮರ್ಥನೆ

ಇನ್ನು ಈ ಬಗ್ಗೆ ಸ್ವತಃ ಗೃಹ ಸಚಿವ ಡಾ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದು, ಈ ಹಿಂದೆ ಸಿಬಿಐಗೆ ಕೊಡುವಾಗ ರಾಜಕೀಯ ಪ್ರೇರಿತ ಆಗಿರಲಿಲ್ವಾ? ಕಾನೂನಿನ ಚೌಕಟ್ಟಿನ ಇತಿಮಿತಿಯಲ್ಲಿ ಈ ನಿರ್ಧಾರ ಮಾಡಿದ್ದೇವೆ. ಸಂಪುಟದಲ್ಲಿ ತೆಗೆದುಕೊಂಡ ನಿರ್ಧಾರವನ್ನು ಕೋರ್ಟ್​ಗೆ ಸಲ್ಲಿಸುತ್ತೇವೆ. ಮುಂದೆ ಸಿಬಿಐ, ನ್ಯಾಯಾಲಯ ಏನು ಮಾಡುತ್ತೋ ನೋಡೋಣ ಎಂದು ಸಮರ್ಥನೆ ಮಾಡಿಕೊಂಡರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ

ಕಾನೂನಿನ ಚೌಕಟ್ಟಿನಲ್ಲಿ ನಮ್ಮ ಇತಿಮಿತದಲ್ಲಿ ಮಾಡಿದ್ದೇವೆ. ನಮ್ ಅಡ್ವಕೇಟ್ ಜನರಲ್ ಕೂಡ ಹೇಳಿದಾರೆ. ಅವರು ಮಾಡಿದಾಗ ಒಂದು . ನಾವು ಮಾಡಿದಾಗ ಒಂದು ಆಗಿರಲ್ಲ. ಮುಂದೆ ಏನಾಗುತ್ತೆ ಎಂದು ಗೊತ್ತಿಲ್ಲ. ನಾವು ಕೋರ್ಟಿಗೆ ಸಬ್‌ಮಿಟ್ ಮಾಡುತ್ತೇವೆ, ಮುಂದೆ ಸಿಬಿಐ ಹಾಗೂ ಕೋರ್ಟ್ ಏನು ಮಾಡುತ್ತೆ ನೋಡೋಣ. ಮೊದಲೇ ಒಬ್ಬ ಎಂಎಲ್​ಎ ಅವರಿಗೆ ನಾವು ಯಾವುದೇ ಕೇಸ್ ನಲ್ಲಿ ಸ್ಪೀಕರ್ ಪರ್ ಮಿಶನ್ ತೆಗೆದುಕೊಳ್ಳಬೇಕು ಎನ್ನುವುದು ಇತ್ತು. ಅದನ್ನ ಮಾಡಬೇಕಾಗಿತ್ತು. ಅದನ್ನ ಮಾಡಿದ್ದರೆ ಈ ಪ್ರೊಸಿಜರ್ ಲ್ಯಾಪ್ಸ್ ಆಗುತ್ತಿರಲಿಲ್ಲ ಎಂದು ಸಮಜಾಯಿಷಿ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ