AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದ ಮೊಗಸಾಲೆಯಲ್ಲಿ ಡಿ.ಕೆ.ಶಿವಕುಮಾರ್​ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಗುಪ್ತ ಚರ್ಚೆ; ರಮೇಶ್​ ಜಾರಕಿಹೊಳಿ ಸಿಡಿ ಬಗ್ಗೆ ಮಾತುಕತೆ?

ವಿಧಾನಸೌಧದ ಮೊಗಸಾಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ರಹಸ್ಯ ಸಭೆ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಂತರ ಹತ್ತು ನಿಮಿಷಕ್ಕೂ ಹೆಚ್ಚು ಕಾಲ ಇವರಿಬ್ಬರೂ ಗುಪ್ತ ಸಭೆ ನಡೆಸಿರುವುದು ರಾಜಕೀಯ ವಲಯದಲ್ಲಿ ಹಲವು ಸಂದೇಹಗಳಿಗೆ ಎಡೆಮಾಡಿಕೊಟ್ಟಿದೆ.

ವಿಧಾನಸೌಧದ ಮೊಗಸಾಲೆಯಲ್ಲಿ ಡಿ.ಕೆ.ಶಿವಕುಮಾರ್​ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಗುಪ್ತ ಚರ್ಚೆ; ರಮೇಶ್​ ಜಾರಕಿಹೊಳಿ ಸಿಡಿ ಬಗ್ಗೆ ಮಾತುಕತೆ?
ಡಿ.ಕೆ.ಶಿವಕುಮಾರ್​ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್​
Follow us
Skanda
| Updated By: ganapathi bhat

Updated on: Mar 09, 2021 | 1:30 PM

ಬೆಂಗಳೂರು: ಅಶ್ಲೀಲ ಸಿಡಿ ಬಹಿರಂಗ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿರುವ ರಮೇಶ್ ಜಾರಕಿಹೊಳಿ, ತನ್ನ ವಿರುದ್ಧ ಷಡ್ಯಂತ್ರ ನಡೆಸಿರುವವರನ್ನು ಜೈಲಿಗಟ್ಟದೇ ಬಿಡುವುದಿಲ್ಲ ಎಂದು ಗುಡುಗಿರುವ ಬೆನ್ನಲ್ಲೇ ವಿಧಾನಸೌಧದ ಮೊಗಸಾಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ರಹಸ್ಯ ಸಭೆ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಂತರ ಹತ್ತು ನಿಮಿಷಕ್ಕೂ ಹೆಚ್ಚು ಕಾಲ ಇವರಿಬ್ಬರೂ ಗುಪ್ತ ಸಭೆ ನಡೆಸಿರುವುದು ರಾಜಕೀಯ ವಲಯದಲ್ಲಿ ಹಲವು ಸಂದೇಹಗಳಿಗೆ ಎಡೆಮಾಡಿಕೊಟ್ಟಿದೆ.

ವಿಧಾನಸೌಧದ ಮೊಗಸಾಲೆಯಲ್ಲಿ ಗಹನವಾದ ಚರ್ಚೆ ನಡೆಸಿರುವ ಡಿ.ಕೆ.ಶಿವಕುಮಾರ್ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರೂ ರಮೇಶ್ ಜಾರಕಿಹೊಳಿ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗುತ್ತಿದೆ. ಮೊಗಸಾಲೆಯ ವಿಪಕ್ಷ ನಾಯಕರ ಕಚೇರಿಯಲ್ಲಿ ಚರ್ಚೆ ನಡೆದಿದ್ದು, ಇವರ ಮಾತುಕತೆ ಯಾವೆಲ್ಲಾ ಬೆಳವಣಿಗೆಗಳಿಗೆ ಕಾರಣವಾಗಬಹುದು ಎಂಬ ಕುತೂಹಲ ಕೆರಳಿಸಿದೆ.

ರಮೇಶ್​ ಜಾರಕಿಹೊಳಿ ಹೇಳಿದ್ದೇನು? ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ ‘ನನ್ನ ಪರವಾಗಿ ನಿಂತ ಎಲ್ಲರಿಗೂ ಹೃದಯಪೂರ್ವಕ ವಂದನೆ. ನನಗೆ ಮಾನಸಿಕವಾಗಿ ಧೈರ್ಯ ತುಂಬಿದ ಸಿಎಂ ಬಿಎಸ್‌ ಯಡಿಯೂರಪ್ಪ, ಮಾಜಿ ಸಿಎಂ ಕುಮಾರಸ್ವಾಮಿಗೆ ನನ್ನ ವಂದನೆಗಳು. ನೂರಕ್ಕೆ ನೂರರಷ್ಟು ಈ CD ನಕಲಿ. ನಾನು ನಿರಪರಾಧಿ, ಅಪರಾಧಿಯಲ್ಲ’ ಎಂದು ಖಡಕ್ ಆಗಿ ತಿಳಿಸಿದ್ದಾರೆ. ಈ CD ಬಗ್ಗೆ ನಾಲ್ಕು ತಿಂಗಳ ಮೊದಲೇ ಗೊತ್ತಿತ್ತು. 26 ಗಂಟೆ ಮೊದಲೇ ಹೈಕಮಾಂಡ್ ನನಗೆ CD ಬಿಡುಗಡೆ ಬಗ್ಗೆ ಮಾಹಿತಿ ನೀಡಿದ್ದರು. ನಾನು ಧೈರ್ಯದಿಂದ ಕಾನೂನು ಹೋರಾಟಕ್ಕೆ ಹೋಗಲಿಲ್ಲ. ಯಾವುದಕ್ಕೂ ಹೆದರದೆ ಸಭೆ ಮುಗಿಸಿ ಮನೆಗೆ ಬಂದಿದ್ದೆ. ನನಗೆ ಭಯ ಇದ್ದಿದ್ದರೆ ದೇವರ ದರ್ಶನಕ್ಕೆ ಹೋಗುತ್ತಿರಲಿಲ್ಲ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ ದರ್ಶನ ಪಡೆದಿದ್ದೆ. ಅಂದು ವಚನಾನಂದಶ್ರೀ ಜತೆಯೂ ಮಾತುಕತೆ ನಡೆಸಿದ್ದೆ. ‘ನಾನು ಬಹಳ ದುಃಖದಲ್ಲಿದ್ದೇನೆ’. ದಯವಿಟ್ಟು ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. 2020ರ ಫೆಬ್ರವರಿ 26ರಂದು ನಾನು ಸಚಿವನಾದೆ. 4-5 ದಿನದಿಂದ ಎಲ್ಲ ಬೆಳವಣಿಗೆಗಳನ್ನು ನೋಡುತ್ತಿದ್ದೇನೆ. ರಾಜೀನಾಮೆ ನೀಡಿರುವುದು ನನ್ನ ವೈಯಕ್ತಿಕ ನಿರ್ಧಾರ ಎಂದು ರಮೇಶ್ ಜಾರಕಿಹೊಳಿ ದುಃಖಿತರಾಗಿದ್ದಾರೆ.

ಬೆಂಗಳೂರಿನ 2 ಕಡೆ ಷಡ್ಯಂತ್ರ ನಡೆದಿದೆ CD ಬಿಡುಗಡೆಯಾದ ಒಂದು ದಿನ ರಾತ್ರಿ ಕಾದು ನಂತರ ರಾಜೀನಾಮೆ ನೀಡಿದೆ. ಏನೇನು ಆಗುತ್ತೆ ಎಂದು ತಿಳಿಯೋಣ ಎಂದು ಸುಮ್ಮನಿದ್ದೆ. ನಾನು ರಾಜೀನಾಮೆ ಕೊಟ್ಟು ನೇರವಾಗಿ ಊರಿಗೆ ಹೋಗಿದ್ದೆ. ನಂತರ ಏನು ಬೆಳವಣಿಗೆ ನಡೆದಿದೆ ಎಂದು ನನಗೆ ಗೊತ್ತಿಲ್ಲ. ಒಬ್ಬ ಮಹಾನ್ ನಾಯಕನಿಂದ ಇದೆಲ್ಲಾ ಆಗಿದೆ. ಅವರ ಬಗ್ಗೆ ಈಗ ಹೇಳುವುದಕ್ಕೆ ಆಗುವುದಿಲ್ಲ. ಇದೊಂದು ಬಹಳ ಸೂಕ್ಷ್ಮವಾದ ವಿಚಾರವಾಗಿದೆ. ಇದನ್ನು ರಾಜಕೀಯ ಮಾಡುವುದಕ್ಕೆ ಹೋಗಬಾರದು. ಯಶವಂತಪುರ, ಹುಳಿಮಾವು ಸೇರಿ ಬೆಂಗಳೂರಿನ 2 ಕಡೆ ಷಡ್ಯಂತ್ರ ನಡೆದಿದೆ. ಯಶವಂತಪುರದ 4,5ನೇ ಮಹಡಿಯಲ್ಲಿ ಷಡ್ಯಂತ್ರ ನಡೆದಿದೆ. ಅವರನ್ನು ಜೈಲಿಗೆ ಹಾಕದೆ ಸುಮ್ಮನೆ ಬಿಡುವುದಿಲ್ಲ. ನಾನು ಸುಮ್ಮನೆ ಇದರಲ್ಲಿ ರಾಜಕೀಯ ಮಾಡಲು ಹೋಗಲ್ಲ. ಮುಂದಿನ ದಿನಗಳಲ್ಲಿ ಎಲ್ಲ ವಿಷಯಗಳನ್ನು ಹೇಳುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ‘ಡಿಕೆಶಿ, ಹೆಬ್ಬಾಳ್ಕರ್, ರಮೇಶ್​ ಮಧ್ಯೆ ಜಿದ್ದಾಜಿದ್ದಿ ಇತ್ತು; ಇವರೇ ವಿಡಿಯೋ ಚಿತ್ರೀಕರಿಸಿರಬಹುದೆಂಬ ಅನುಮಾನ ಇದೆ’

ಪ್ರತಿನಿತ್ಯ ಟಿವಿಗಳಲ್ಲಿ ಸಿನಿಮಾ ನೋಡುತ್ತಿದ್ದೀರಿ.. ರಮೇಶ್ ಜಾರಕಿಹೊಳಿ ಸಿಡಿಗೆ ಡಿಕೆಶಿ ವ್ಯಂಗ್ಯ