ಮೊಳಕಾಲ್ಮೂರು ಕ್ಷೇತ್ರದ ‘ಕೈ’ ಟಿಕೆಟ್ ಫೈಟ್: ಆಕಾಂಕ್ಷಿಗಳಿಗೆ ಪ್ರಮಾಣ ಮಾಡಿಸಿದ ಡಿಕೆಶಿ

ಎಸ್​ಟಿ ಮೀಸಲು ಕ್ಷೇತ್ರವಾಗಿರುವ ಮೊಳಕಾಲ್ಮೂರು ಕ್ಷೇತ್ರದ ‘ಕೈ’ ಟಿಕೆಟ್ ಫೈಟ್ ಜೋರಾಗಿದೆ. ಇದಕ್ಕೆ ಡಿಕೆ ಶಿವಕುಮಾರ್ ಮಹತ್ವ ಘೋಷಣೆ ಮಾಡಿದ್ದಾರೆ.

ಮೊಳಕಾಲ್ಮೂರು ಕ್ಷೇತ್ರದ ‘ಕೈ’ ಟಿಕೆಟ್ ಫೈಟ್: ಆಕಾಂಕ್ಷಿಗಳಿಗೆ ಪ್ರಮಾಣ ಮಾಡಿಸಿದ ಡಿಕೆಶಿ
DK Shivakumar
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 13, 2022 | 8:43 PM

ಚಿತ್ರದುರ್ಗ: ವಿಧಾನಸಭಾ ಚುನಾವಣೆಯಲ್ಲಿ ತನ್ನದೇಯಾದ ವೈಶಿಷ್ಟ್ಯ ಹೊಂದಿರುವ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಕ್ಷೇತ್ರಕ್ಕೆ ಈಗಿನಿಂದಲೇ ಕಾಂಗ್ರೆಸ್​ನಲ್ಲಿ ಟಿಕೆಟ್ ಫೈಟ್ ಏರ್ಪಟ್ಟಿದೆ.

ಮಾಜಿ ಶಾಸಕ ತಿಪ್ಪೇಸ್ವಾಮಿ ಮತ್ತು ಡಾ.ಯೋಗೇಶ್ ಬಾಬು ನಡುವೆ ಮುಂಬರುವ ವಿಧಾನಸಭೆ ಚುನಾವಣೆ ಟಿಕೆಟ್​ಗಾಗಿ ಪೈಪೋಟಿ ಶುರುವಾಗಿದೆ. ಇದು ಭಾರತ್ ಜೋಡೋ ಯಾತ್ರೆಯಲ್ಲಿ ಟಿಕೆಟ್ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಮಹತ್ವದ ಘೋಷಣೆ ಮಾಡಿದ್ದಾರೆ.

ನನಗೆ ರಾಜಕೀಯ ಸಾಕಾಗಿದೆ, ಮಗನಿಗೆ ಟಿಕೆಟ್ ಕೊಡಿಸುತ್ತೇನೆ: ಚುನಾವಣಾ ಕಣದಿಂದ ಹಿಂದೆ ಸರಿದ ಎಂಟಿಬಿ

ರಾಹುಲ್ ಗಾಂಧಿ ಭಾಷಣ ನಂತರ ಸಾರ್ವಜನಿಕವಾಗಿ ಮಾತನಾಡಿರುವ ಡಿಕೆ ಶಿವಕುಮಾರ್, ಇಬ್ಬರೂ (ತಿಪ್ಪೇಸ್ವಾಮಿ, ಡಾ.ಯೋಗೇಶ್ ಬಾಬು) ಒಗ್ಗಟ್ಟಿನಿಂದ ಕೆಲಸ ಮಾಡುವುದಾಗಿ ಪ್ರಮಾಣ ಮಾಡಿದ್ದಾರೆ. ಪಕ್ಷ ಯಾವುದೇ ನಿರ್ಧಾರ ಕೈಗೊಂಡರೂ ಒಟ್ಟಾಗಿ ಕೆಲಸ ಮಾಡುತ್ತಾರೆ ಎಂದು ಘೋಷಿಸಿದರು.

ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಬಿಜೆಪಿ ಶ್ರೀರಾಮುಲು ಅವರನ್ನು ಕಣಕ್ಕಿಳಿಸಿತ್ತು ಇದರಿಂದ ತಿಪ್ಪೇಸ್ವಾಮಿ ಟಿಕೆಟ್ ಸಿಗದಿದ್ದರಿಂದ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದೀಗ ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್​ಗಾಗಿ ಕಸರತ್ತು ನಡೆಸಿದ್ದಾರೆ.

ಮತ್ತೊಂದೆಡೆ ಬಿಜೆಪಿಯಿಂದ ಶ್ರೀರಾಮುಲು ಅವರು ಕಣಕ್ಕಿಳಿಯುವುದು ಅನುಮಾನ. ಯಾಕಂದ್ರೆ ಶ್ರೀರಾಮುಲು ಅವರು ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗವನ್ನು ಬಿಟ್ಟು ಬಳ್ಳಾರಿ ಜಿಲ್ಲೆ ಉಸ್ತುವಾರಿ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಒಂದು ವೇಳೆ ಶ್ರೀರಾಮುಲು ಬಳ್ಳಾರಿ ಗ್ರಾಮಾಂತರದಿಂದ ಸ್ಪರ್ಧೆ ಮಾಡಿದರೆ, ಮೊಳಕಾಲ್ಮೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಬಹುದು ಎನ್ನುವುದು ಪ್ಪೇಸ್ವಾಮಿ, ಡಾ.ಯೋಗೇಶ್ ಬಾಬು ಲೆಕ್ಕಾಚಾರವಾಗಿದೆ. ಇದರಿಂದ ಟಿಕೆಟ್​ಗಾಗಿ ಪೈಪೋಟಿ ನಡೆಸಿದ್ದಾರೆ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್