ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಗ್ಗೆ ಕೆಪಿಸಿಸಿ ಸಾಮಾಜಿಕ ಜಾಲತಾಣದಿಂದ ಮಾಡಲಾಗಿರುವ ಅವಹೇಳನಕಾರಿ ಟ್ವೀಟ್ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ. ತಕ್ಷಣ ಈ ಟ್ವೀಟ್ ತೆಗೆದುಹಾಕಲು ಸೂಚನೆ ನೀಡಲಾಗಿದೆ. ಈ ಅಚಾತುರ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಕಾಂಗ್ರೆಸ್ ಇಂತಹ ಪ್ರಮಾದವನ್ನು ಎಂದಿಗೂ ಸಹಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಇಂದು (ಅಕ್ಟೋಬರ್ 17) ಪ್ರಧಾನಿ ನರೇಂದ್ರ ಮೋದಿ ವಿರುದ್ಧ ‘ಹೆಬ್ಬೆಟ್ ಗಿರಾಕಿ ಮೋದಿ’ ಎಂಬ ಹ್ಯಾಷ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿತ್ತು. ಮೌನೇಂದ್ರ ಮೋದಿ ಎಂದು ಟ್ವೀಟ್ ಮಾಡಿತ್ತು. ಪೆಟ್ರೋಲ್ ಬೆಲೆ ಏರಿಕೆ, ಜನರನ್ನು ದೋಚಿ ಉದ್ಯಮಿಗಳ ಹೊಟ್ಟೆ ತುಂಬಿಸುವ ಮೋದಿ, ವಾಸ್ತವಗಳ ಮಾತನಾಡದ ಮೌನೇಂದ್ರ ಮೋದಿ ಇತ್ಯಾದಿ ವಿಚಾರಗಳ ವಿರುದ್ಧ ಬರೆಯುವಾಗ ಹೆಬ್ಬೆಟ್ ಗಿರಾಕಿ ಮೋದಿ ಎಂಬ ಹ್ಯಾಷ್ ಟ್ಯಾಗ್ ಬಳಸಿತ್ತು.
ಇದನ್ನೂ ಓದಿ: ಎಂ.ಸಿ. ಮನಗೂಳಿ ಬದಲು ಅಶೋಕ ಮನಗೂಳಿ ನಿಧನರಾದರು ಎಂದ ಸಿದ್ದರಾಮಯ್ಯ; ಭಾಷಣ ವೇಳೆ ಎಡವಟ್ಟು
ಇದನ್ನೂ ಓದಿ: ಹಾನಗಲ್, ಸಿಂದಗಿ ಉಪಚುನಾವಣೆ ನೆರಳಲ್ಲಿ ಸಿದ್ದರಾಮಯ್ಯ vs ಬಿಜೆಪಿ ಟ್ವೀಟ್ ವಾರ್
Published On - 11:23 pm, Mon, 18 October 21