AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ದಿನವೇ ಬಿಜೆಪಿಗೆ ರಾಜಕೀಯ ನಿವೃತ್ತಿ ಸವಾಲು ಹಾಕಿದ ಡಿಕೆ ಶಿವಕುಮಾರ್

ಕೈಕೊಟ್ಟ ಯೋಜನೆಗಳು, ಹಳಿತಪ್ಪಿದ ಆಡಳಿತ’.. ದಿಕ್ಕು ತಪ್ಪಿದ ಸರ್ಕಾರ.. ತುಘಲಕ್ ದರ್ಬಾರಿನ ಸರ್ಕಾರ.. ಇದು ನೂರು ದಿನ ಪೂರೈಸಿರೋ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ಪಡೆ ಕೊಟ್ಟಿರೋ ಬಿರುದುಗಳು.. ಶತಕ ಬಾರಿಸಿದ ಸಂಭ್ರಮದಲ್ಲಿರೋ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸಮರ ಸಾರಿದ್ದು, ವೈಫಲ್ಯಗಳ ಸರಮಾಲೆಯ ಜಾರ್ಜ್‌ಶೀಟ್ ಬಿಡುಗಡೆ ಮಾಡಿದ್ದು ಇದಕ್ಕೆ ಇದೀಗ ಕಾಂಗ್ರೆಸ್ ತಿರುಗೇಟು ನೀಡಿದೆ. ಇನ್ನು ಡಿಕೆ ಶಿವಕುಮಾರ್ ಅವರು ರಾಜಕೀಯ ನಿವೃತ್ತಿ ಸವಾಲು ಹಾಕಿದ್ದಾರೆ

ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ದಿನವೇ ಬಿಜೆಪಿಗೆ ರಾಜಕೀಯ ನಿವೃತ್ತಿ ಸವಾಲು ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Sunil MH
| Edited By: |

Updated on: Aug 30, 2023 | 11:14 AM

Share

ಮೈಸೂರು, (ಆಗಸ್ಟ್ 30): ನೂರು ದಿನ ಪೂರೈಸಿರುವ ಸಂಭ್ರಮದಲ್ಲಿರೋ ರಾಜ್ಯ ಸರ್ಕಾರ(Karnataka Congress Government) ಇಂದು(ಆಗಸ್ಟ್ 30) ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸುತ್ತಿದೆ. ಆದ್ರೆ, ಗ್ಯಾರಂಟಿಗಳನ್ನ ವಿಳಂಬ ಮಾಡುವಲ್ಲಿ ಸರ್ಕಾರ ಎಡವಿದೆ. ದಿಕ್ಕು ತಪ್ಪಿದೆ ಎಂದು ಬಿಜೆಪಿ(BJP) ಆರೋಪಿಸಿದ್ದು, ನೂರು ದಿನ ನೂರು ವೈಫಲ್ಯ ಶೀರ್ಷಿಕೆಯಡಿ ಜಾರ್ಜ್‌ಶೀಟ್ ಬಿಡುಗಡೆ ಮಾಡಿದೆ. ಇದರಲ್ಲಿ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ, ಡಿಕೆ ಶಿವಕುಮಾರ್(DK Shivakumar)​ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದೆ. ಇನ್ನು ಇದಕ್ಕೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ನನ್ನ ಮೇಲಿನ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.

ಈ ಬಗ್ಗೆ ಇಂದು(ಆಗಸ್ಟ್ 30) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಬಿಜೆಪಿಯವರು ಆರೋಪ ಸಾಬೀತು ಮಾಡಲಿ. ಇವರದ್ದನ್ನು ಬಿಚ್ಚೋ ಕಾಲ ಬರುತ್ತದೆ ಬಿಚ್ಚುತ್ತೇನೆ. ನನ್ನ ಮೇಲಿನ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಸವಾಲು ಹಾಕುವ ಮೂಲಕ ಬಿಜೆಪಿ ಆರೋಪಗಳಿಗೆ ತಿರುಗೇಟು ನೀಡಿದರು.

ಇದನ್ನೂ ಓದಿ: Gruha Lakshmi Scheme Launch Live: ಕೆಂಪೇಗೌಡ ಏರ್​​ಪೋರ್ಟ್​ಗೆ ಆಗಮಿಸಿದ ರಾಹುಲ್ ಗಾಂಧಿ

ನೂರು ದಿನದಲ್ಲಿ 4 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಮೊದಲ ಕ್ಯಾಬಿನೆಟ್​​ನಲ್ಲೇ ಎಲ್ಲಾ ಗ್ಯಾರಂಟಿ ಇತ್ಯರ್ಥ ಮಾಡಿದ್ದೇವೆ. ಬಿಜೆಪಿಯವರದ್ದು ಭರವಸೆ, ನಮ್ಮದು ಗ್ಯಾರಂಟಿ. ಇಂದು ಗೃಹಲಕ್ಷ್ಮೀ ಯೋಜನೆಗೆ ಇಂದು ಚಾಲನೆ ನೀಡುತ್ತಿದ್ದು, ನಾಡಿನೆಲ್ಲೆಡೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲರ ಮನೆಗಳಲ್ಲಿ ಹೆಣ್ಣು ಮಕ್ಕಳು ಹಬ್ಬದ ಸಂಭ್ರಮದಲ್ಲಿದ್ದಾರೆ. 1.10 ಕೋಟಿ ಮಹಿಳೆಯರು ನೋಂದಣಿ ಮಾಡಿಸಿದ್ದಾರೆ, ಸಿಎಂ ಸಿದ್ದರಾಮಯ್ಯ, ನಾನು ಚೆಕ್​ಗೆ ಸಹಿ ಹಾಕಿದ್ದು, ಯಜಮಾನಿಯರ ಬ್ಯಾಂಕ್​ ಖಾತೆಗೆ 2000 ರೂ ಹಣ ಜಮೆಯಾಗುತ್ತೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಕಿಕ್ಕಿಸಿ

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ