ಎಐಸಿಸಿ ಪಟ್ಟಿಯನ್ನೇ ಬದಲಾಯಿಸಿದ ಡಿಕೆ ಶಿವಕುಮಾರ್: ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸ್ಥಾನ!

Lok Sabha Election 2024 : ಲೋಕಸಭಾ ಕ್ಷೇತ್ರದ ಸಂಯೋಜಕರ ನೇಮಕಾತಿ ಮಾಡಿ ಎಐಸಿಸಿ ಹೊರಡಿಸಿದ್ದ ಪಟ್ಟಿಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬದಲಾವಣೆ ಮಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್​ಗೆ ಸ್ಥಾನ ನೀಡಿದ್ದಾರೆ. ಹಾಗೇ ಕೆಲ ಕ್ಷೇತ್ರಗಳ ಸಂಯೋಜರನ್ನು ಅದಲು ಬದಲು ಮಾಡಿ ಆದೇಶ ಹೊರಡಿಸಿದ್ದಾರೆ.

ಎಐಸಿಸಿ ಪಟ್ಟಿಯನ್ನೇ ಬದಲಾಯಿಸಿದ ಡಿಕೆ ಶಿವಕುಮಾರ್: ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸ್ಥಾನ!
ಲಕ್ಷ್ಮೀ ಹೆಬ್ಬಾಳ್ಕರ್‌, ಡಿ.ಕೆ.ಶಿವಕುಮಾರ್
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on:Jan 10, 2024 | 7:09 PM

ಬೆಂಗಳೂರು, (ಜನವರಿ 10): ಮುಂದಿನ ಲೋಕಸಭಾ ಚುನಾವಣೆಗೆ (Lok Sabha Election 2024) ಆಡಳಿತಾರೂಢ ಕಾಂಗ್ರೆಸ್‌ (Congress) ಸಿದ್ಧತೆ ನಡೆಸಿದ್ದು, 28 ಕ್ಷೇತ್ರಗಳಲ್ಲಿ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲಲು ಪಣ ತೊಟ್ಟಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆ ಹಾಗೂ ಚುನಾವಣೆಗೆ ಸಂಬಂಧಿಸಿದ ಕಾರ್ಯತಂತ್ರ ರೂಪಿಸುತ್ತಿದೆ. ಇದಕ್ಕಾಗಿ ಆಯಾ ಕ್ಷೇತ್ರಗಳಿಗೆ ಸಂಯೋಜರನ್ನು ನೇಮಕ ಮಾಡಲಾಗಿದೆ. ಆದ್ರೆ, ಎಐಸಿಸಿ ಹೊರಡಿಸಿದ್ದ ನೇಮಕಾತಿ ಪಟ್ಟಿಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕಿಮಾರ್ ಬದಲಾವಣೆ ಮಾಡಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸ್ಥಾನ ಕಲ್ಪಿಸಲಾಗಿದೆ.

ಲಕ್ಷ್ಮೀ ಹೆಬ್ಬಾಳ್ಕರ್​ಗೆ ಸ್ಥಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಬೆಳಗಾವಿ ಜಿಲ್ಲೆಯವರಾಗಿರುವ ಕಾರಣ ಅವರನ್ನು ಚಿಕ್ಕೋಡಿ ಕ್ಷೇತ್ರದ ಸಂಯೋಜಕರನ್ನಾಗಿ ನೇಮಿಸಿ ಡಿ.ಕೆ. ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ಚಿಕ್ಕೋಡಿ ಕ್ಷೇತ್ರಕ್ಕೆ ಈ ಹಿಂದೆ ಎಚ್.ಕೆ ಪಾಟೀಲ್ ಅವರನ್ನು ಸಂಯೋಜಕರನ್ನಾಗಿ ಎಐಸಿಸಿ ನೇಮಕ ಮಾಡಿತ್ತು. ಈಗ ಅವರ ಬದಲಿಗೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಎಚ್‌.ಕೆ. ಪಾಟೀಲ್‌ ಅವರನ್ನು ಹಾವೇರಿ ಜಿಲ್ಲೆಗೆ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಗ್ಯಾರಂಟಿಯೇ ಕಾಂಗ್ರೆಸ್ ಅಸ್ತ್ರ: ರಾಜ್ಯ ಮಟ್ಟದ ಸಮಿತಿ ರಚನೆ, ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ

ಮೈಸೂರು–ಚಾಮರಾಜನಗರಕ್ಕೆ ಸಂಯೋಜಕರ ಅದಲು ಬದಲು

ಇನ್ನು ಮೈಸೂರು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಯೋಜಕರನ್ನು ಅದಲು-ಬದಲು ಮಾಡಲಾಗಿದೆ. ಸಚಿವ ವೆಂಕಟೇಶ್ ಅವರನ್ನು ಈ ಹಿಂದೆ ಮೈಸೂರು ಸಂಯೋಜಕರನ್ನಾಗಿ ನೇಮಕ ಮಾಡಲಾಗಿತ್ತು. ಈಗ ಅವರನ್ನು ಚಾಮರಾಜನಗರಕ್ಕೆ ನಿಯುಕ್ತಿ ಮಾಡಲಾಗಿದೆ.ಹಾಗೇ ಚಾಮರಾಜನಗರದಲ್ಲಿ ಸಂಯೋಜಕರಾಗಿ ನೇಮಕಗೊಂಡಿದ್ದ ಡಾ. ಎಚ್‌.ಸಿ. ಮಹದೇವಪ್ಪ ಅವರನ್ನು ಚಾಮರಾಜನಗರ ಬದಲು ಮೈಸೂರಿಗೆ ಸಂಯೋಜಕರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆದೇಶವನ್ನು ಹೊರಡಿಸಿದ್ದಾರೆ.

ಇನ್ನು ಶಿವಾನಂದ್ ಪಾಟೀಲ್‌ ಅವರನ್ನು ಹಾವೇರಿಯಿಂದ ತೆಗೆದು ಎಐಸಿಸಿ ಜೊತೆ ಸಂಯೋಜಕರಾಗಿ ನೇಮಿಸಲಾಗಿದೆ.  ಬೆಂಗಳೂರು ಗ್ರಾಮಾಂತರಕ್ಕೆ ಬೈರತಿ ಸುರೇಶ್ ಬದಲು ಎಂ.ಸಿ ಸುಧಾಕರ್ ಹಾಗೂ ಕೋಲಾರಕ್ಕೆ ಸುಧಾಕರ್ ಬದಲು ಬೈರತಿ ಸುರೇಶ್ ಅವರನ್ನ ಸಂಯೋಜಕರಾಗಿ ನೇಮಿಸಲಾಗಿದೆ

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:50 pm, Wed, 10 January 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ