AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ಪಕ್ಷದಲ್ಲಿ ಮಹತ್ವದ ಹುದ್ದೆ? ಹೈಕಮಾಂಡ್ ಸೀಕ್ರೆಟ್ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ

ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದ್ದ ಸಿಎಂ ಆಯ್ಕೆ ವಿಚಾರದಲ್ಲಿ, ಕಾಂಗ್ರೆಸ್ ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅಧಿಕೃತವಾಗಿ ಘೋಷಿಸಿದ್ದಾರೆ. ಸಿಎಲ್‌ಪಿ ಸಭೆಗೂ ಮುನ್ನವೇ ಈ ನಿರ್ಧಾರ ಬಹಿರಂಗಗೊಂಡಿದ್ದು, ಸಿದ್ದರಾಮಯ್ಯ ಅವರ ರಾಜೀನಾಮೆ, KPCC ಅಧ್ಯಕ್ಷ ಸ್ಥಾನ ಮತ್ತು ಸಂಪುಟ ರಚನೆ ಬಗ್ಗೆಯೂ ಚರ್ಚೆ ನಡೆದಿದೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ.

ಸಿದ್ದರಾಮಯ್ಯಗೆ ಪಕ್ಷದಲ್ಲಿ ಮಹತ್ವದ ಹುದ್ದೆ? ಹೈಕಮಾಂಡ್ ಸೀಕ್ರೆಟ್ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ
ಡಿಕೆ ಶಿವಕುಮಾರ್​​ ಹಾಗೂ ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Edited By: |

Updated on:May 30, 2026 | 12:11 PM

Share

ಬೆಂಗಳೂರು, ಮೇ,30: ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯ ಬಗ್ಗೆ ಸತೀಶ್ ಜಾರಕಿಹೊಳಿ ಅವರು ಮಾತನಾಡಿದ್ದಾರೆ. “ಇವತ್ತಿನ ಸಿಎಲ್‌ಪಿ ಸಭೆಯದ್ದು ಕೇವಲ ಒನ್‌ಲೈನ್ ಅಜೆಂಡಾ (One-line Agenda), ಅದರಲ್ಲಿ ಎರಡನೇ ಮಾತಿಲ್ಲ. ಡಿ.ಕೆ. ಶಿವಕುಮಾರ್ ಅವರೇ ನೂತನ ಮುಖ್ಯಮಂತ್ರಿಯಾಗುವುದು ನೂರಕ್ಕೆ ನೂರರಷ್ಟು ಪಕ್ಕಾ ಆಗಿದೆ” ಎಂದು ಪ್ರಭಾವಿ ನಾಯಕ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅಧಿಕೃತವಾಗಿ ಘೋಷಿಸಿದ್ದಾರೆ. ಬೆಂಗಳೂರಿನ ತಮ್ಮ ಸರ್ಕಾರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಒಳಗಿನ ಪ್ರಮುಖ ಬೆಳವಣಿಗೆಗಳ ಸುಳಿವು ನೀಡಿದರು.

ರಾಜಭವನಕ್ಕೆ ಹೋಗಿರೋದು ಟೈಮ್, ಪ್ಲೇಸ್ ಫಿಕ್ಸ್ ಮಾಡೋಕೆ!:

ಸಿದ್ದರಾಮಯ್ಯ ಅವರ ರಾಜೀನಾಮೆಯ ನಂತರದ ಮುಂದಿನ ಪ್ರಕ್ರಿಯೆಗಳ ಬಗ್ಗೆ ಮಾತನಾಡಿದ ಸತೀಶ್ ಜಾರಕಿಹೊಳಿ, “ಸಿದ್ದರಾಮಯ್ಯನವರೇ ಈಗಾಗಲೇ ಎಲ್ಲವನ್ನೂ ಅನೌನ್ಸ್ ಮಾಡಿದ್ದಾರೆ. ಡಿಕೆಶಿ ಸಿಎಂ ಆಗುವುದು ಖಚಿತವಾಗಿರುವುದರಿಂದ, ಪ್ರಮಾಣ ವಚನ ಸ್ವೀಕಾರದ ನಿಖರವಾದ ಸಮಯ ಮತ್ತು ಸ್ಥಳವನ್ನು ನಿಗದಿಪಡಿಸುವ ಸಲುವಾಗಿಯೇ ನಾಯಕರು ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ” ಎಂದು ಸ್ಪಷ್ಟಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ಗಾದಿ ಹಾಗೂ ಕ್ಯಾಬಿನೆಟ್ ರೇಸ್ ಯಾರಿಗೆ?:

ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಾ. ಜಿ. ಪರಮೇಶ್ವರ್ ಅವರ ಹೆಸರು ಕೇಳಿಬರುತ್ತಿರುವ ಹಾಗೂ ತಮಗೂ ಅಧ್ಯಕ್ಷ ಪಟ್ಟದ ಜೊತೆಗೆ ಸಚಿವ ಸ್ಥಾನ ಸಿಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಯಾವುದೇ ದೊಡ್ಡ ಪೋಸ್ಟ್ ಇದ್ದರೂ ಅಲ್ಲಿ ಎರಡು ಮೂರು ಹೆಸರುಗಳು ಚರ್ಚೆಯಲ್ಲಿ ಇರುವುದು ಸಹಜ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ಹೊಸ ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು, ಯಾರನ್ನು ಬಿಡಬೇಕು ಎಂಬುದನ್ನು ಎಐಸಿಸಿ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಕ್ಯಾಬಿನೆಟ್‌ನಲ್ಲಿ ಹಳಬರು ಮತ್ತು ಹೊಸಬರು ಇಬ್ಬರೂ ಇರಬೇಕಾಗುತ್ತದೆ” ಎಂದರು.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್​​ಗೆ ಮತ್ತೊಂದು ಹೆಸರು ಸಪ್ರೈಸ್​ ಎಂಟ್ರಿ: ಸತೀಶ್​​ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?

ಸಿದ್ದರಾಮಯ್ಯ ಮುಂದಿನ ಹಾದಿ ಏನು?:

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಯಾವ ದೊಡ್ಡ ಜವಾಬ್ದಾರಿ ನೀಡಲಾಗುತ್ತದೆ ಎಂಬ ಕುರಿತು ಮಾತನಾಡಿದ ಸಚಿವರು, “ಸಿದ್ದರಾಮಯ್ಯ ಅವರಿಗೆ ಹುದ್ದೆ ನೀಡುವ ವಿಚಾರವಾಗಿ ಇಂದಿನ ಶಾಸಕಾಂಗ ಪಕ್ಷದ (CLP) ಸಭೆಯಲ್ಲೇ ಪ್ರಮುಖ ತೀರ್ಮಾನ ಕೈಗೊಳ್ಳಲಾಗುತ್ತದೆ. ಇನ್ನು ಎರಡು ಮೂರು ದಿನಗಳಲ್ಲಿ ಎಲ್ಲವೂ ಸಂಪೂರ್ಣವಾಗಿ ಸ್ಪಷ್ಟವಾಗಲಿದ್ದು, ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ” ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:01 pm, Sat, 30 May 26

Follow Us
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ