ಡಿಕೆ ಶಿವಕುಮಾರ್​​ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​​: ಸಿಬಿಐ ತನಿಖೆ ರದ್ದು ಕೋರಿದ್ದ ಅರ್ಜಿ ವಿಚಾರಣೆ ಚುನಾವಣೆ ನಂತರವಷ್ಟೇ: ಹೈಕೋರ್ಟ್

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​​​ ಸಂಬಂಧ ಸಿಬಿಐ ತನಿಖೆ ರದ್ದು ಕೋರಿದ್ದ ಅರ್ಜಿ ವಿಚಾರಣೆಯನ್ನು ಮೇ ಅಂತ್ಯಕ್ಕೆ‌‌ ಹೈಕೋರ್ಟ್ ಮುಂದೂಡಿದೆ.

ಡಿಕೆ ಶಿವಕುಮಾರ್​​ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​​: ಸಿಬಿಐ ತನಿಖೆ ರದ್ದು ಕೋರಿದ್ದ ಅರ್ಜಿ ವಿಚಾರಣೆ ಚುನಾವಣೆ ನಂತರವಷ್ಟೇ: ಹೈಕೋರ್ಟ್
ಡಿ.ಕೆ.ಶಿವಕುಮಾರ್Image Credit source: thenewsminute.com
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 19, 2023 | 4:28 PM

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​​​ ಸಂಬಂಧ ಸಿಬಿಐ ತನಿಖೆ ರದ್ದು ಕೋರಿದ್ದ ಅರ್ಜಿ ವಿಚಾರಣೆಯನ್ನು ಮೇ ಅಂತ್ಯಕ್ಕೆ‌‌ ಹೈಕೋರ್ಟ್ ಮುಂದೂಡಿದೆ. ಮುಂದಿನ ವಿಚಾರಣೆವರೆಗೆ ಸಿಬಿಐ ತನಿಖೆಗೆ ತಡೆಯಾಜ್ಞೆ ವಿಸ್ತರಣೆ ಮಾಡಲಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು, ಇದನ್ನು ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷರು ಹೈಕೋರ್ಟ್ ಮೆಟ್ಟಿಲೇರಿದ್ದರು. ತನ್ನ ವಿರುದ್ಧದ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅದರಂತೆ ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್, ಅರ್ಜಿದಾರರ ಪರ ಹಾಗೂ ಸಿಬಿಐ ಪರ ವಕೀಲರ ವಾದ ಪ್ರತಿವಾದ ಆಲಿಸುತ್ತಾ ಹಲವು ಬಾರಿ ತಡೆಯಾಜ್ಞೆಯನ್ನು ವಿಸ್ತರಿಸಿತ್ತು.

ಸಿಬಿಐ ತನಿಖೆಗೆ ಅನುಮತಿ ನೀಡಿದ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಡಿಕೆ ಶಿವಕುಮಾರ್ ಅವರಿಗೆ ಆರಂಭದಲ್ಲಿ ಬಿಗ್ ರಿಲೀಫ್ ಸಿಕ್ಕಿತ್ತು. ಫೆ.24ರವರೆಗೂ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿತ್ತು. ಬಳಿಕ ನಡೆದ ವಿಚಾರಣೆಗಳ ಸಮಯದಲ್ಲಿ ಕೋರ್ಟ್, ಮಾರ್ಚ್‌ 31ಕ್ಕೆ, ಏಪ್ರಿಲ್ 6ಕ್ಕೆ, ಏಪ್ರಿಲ್ 13ಕ್ಕೆ, ಏಪ್ರಿಲ್ 17ರ ವರೆಗೆ ಮಧ್ಯಂತರ ತಡೆ ವಿಸ್ತರಿಸಿತ್ತು. ಇದೀಗ ಮತ್ತೆ ವಿಸ್ತರಣೆಗೊಂಡಿದೆ, ಆದರೆ ವಿಚಾರಣೆ ಅಂತ್ಯಗೊಂಡಿದ್ದು, ತೀರ್ಪು ಕಾಯ್ದಿರಿಸಲಾಗಿದೆ.

ಇದನ್ನೂ ಓದ: ರಾಜಕೀಯ ತಿರುವು ಪಡೆದುಕೊಂಡ ಬಿಜೆಪಿ ಯುವ ಮೋರ್ಚಾ ಮುಖಂಡ ಹತ್ಯೆ ಕೇಸ್; ಇದು ರಾಜಕೀಯ ಕೊಲೆ ಎಂದ ಪ್ರಲ್ಹಾದ್ ಜೋಶಿ

ಏನಿದು ಪ್ರಕರಣ?

ಡಿಕೆ ಶಿವಕುಮಾರ್‌ ಮತ್ತು ಅವರ ಕುಟುಂಬದ ಸದಸ್ಯರು 74.93 ಕೋಟಿ ರೂಪಾಯಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎಂಬ ಆರೋಪ ಸಂಬಂಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಅದರಂತೆ 2020ರ ಅಕ್ಟೋಬರ್ 5ರಂದು ದೆಹಲಿ, ಮುಂಬೈ ಸೇರಿದಂತೆ ಡಿಕೆ ಶಿವಕುಮಾರ್ ಅವರಿಗೆ ಸೇರಿದ 14 ಸ್ಥಳಗಳ ಮೇಲೆ ಸಿಬಿಐ ಏಕಕಾಲಕ್ಕೆ ದಾಳಿ ನಡೆಸಿತ್ತು.

ಇದನ್ನೂ ಓದಿ: ಬಿಎಸ್​ ಯಡಿಯೂರಪ್ಪನವರ ಲಕ್ಕಿ ಕಾರಿನಲ್ಲಿ ತೆರಳಿ ನಾಮಪತ್ರ ಸಲ್ಲಿಸಿದ ಬಿವೈ ವಿಜಯೇಂದ್ರ

ಈ ವೇಳೆ ಕಂಪ್ಯೂಟರ್ ಹಾರ್ಡ್​ಡಿಸ್ಕ್​ ಹಾಗೂ 57 ಲಕ್ಷ ನಗದು ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇನ್ನೊಂದೆಡೆ, ಜಾರಿ ನಿರ್ದೇಶನಾಲಯವು (ಇಡಿ) ಡಿಕೆ ಶಿವಕುಮಾರ್ ವಿರುದ್ಧ ಆಸ್ತಿ ಗಳಿಕೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿತ್ತು. ಈ ಸಂಬಂಧ ಡಿ.ಕೆ.ಶಿವಕುಮಾರ್ ಹಲವು ಬಾರಿ ದೆಹಲಿಯ ಇಡಿ ಕಚೇರಿಯಲ್ಲಿ ವಿಚಾರಣೆ ಎದುರಿಸಿ ಜೈಲಿಗೆ ಹೋಗಿ ಜಾಮೀನು ಮೇಲೆ ಬಿಡುಗಡೆಯಾಗಿ ಹೊರಬಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:27 pm, Wed, 19 April 23

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!