DK Shivakumar: ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ತನಿಖೆಗೆ ಮಧ್ಯಂತರ ತಡೆಯಾಜ್ಞೆ ಮಾರ್ಚ್ 31ರವರೆಗೆ ವಿಸ್ತರಣೆ
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೊರಡಿಸಿರುವ ಆದೇಶವನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಲಾಗಿದೆ.
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೊರಡಿಸಿರುವ ಆದೇಶವನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಲಾಗಿದೆ. ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಅನುಮತಿ ಪ್ರಶ್ನಿಸಿ ಡಿಕೆ ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿ ವಿಚಾರಣೆ ಮತ್ತೊಂದು ಪೀಠದಲ್ಲಿರುವ ಹಿನ್ನೆಲೆ, ಆ ಅರ್ಜಿಯ ವಿಚಾರಣೆಯನ್ನೂ ಇದೇ ಪೀಠಕ್ಕೆ ವರ್ಗಾಯಿಸಲು ಸೂಚನೆ ನೀಡಲಾಗಿದೆ. ಈ ಹಿಂದೆ ಕೂಡ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದ್ದ ಕರ್ನಾಟಕ ಹೈಕೋರ್ಟ್ ಮಾ. 24ರ ವರೆಗೂ ವಿಸ್ತರಿಸಿತ್ತು. ಸಿಬಿಐ ತನಿಖೆ ರದ್ದು ಕೋರಿ ಡಿ.ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೆ. ನಟಜರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ಮಾಡಿತ್ತು.
ಈ ಪ್ರಕರಣದಲ್ಲಿ ಸಿಬಿಐ ತನಿಖೆಗೆ ತಡೆ ಕೋರಿ ಡಿಕೆ ಶಿವಕುಮಾರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಸಿಬಿಐ ಅಧಿಕಾರಿಗಳು ಪದೇ ಪದೇ ನೋಟಿಸ್ ನೀಡುತ್ತಿದ್ದಾರೆ. ಹೆಂಡತಿ, ಮಗಳಿಗೆ ನೋಟಿಸ್ ನೀಡುವ ಮೂಲಕ ಮಾನಸಿಕ ಒತ್ತಡ ಹೇರುತ್ತಿದ್ದಾರೆ ಎಂದು ಈ ಹಿಂದೆ ಆರೋಪಿಸಿದ್ದರು.
ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿ.ಕೆ.ಶಿವಕುಮಾರ್‌ಗೆ ಹೈಕೋರ್ಟ್ ಬಿಗ್ ರಿಲೀಫ್, ತನಿಖೆಗೆ ಮಧ್ಯಂತರ ತಡೆ
ನನ್ನ ವಿರುದ್ಧ 40 ಕೇಸ್
ನನ್ನ ವಿರುದ್ಧ 40 ಕೇಸ್ ವಿಚಾರಣೆ ನಡೆಯುತ್ತಿದೆ. ಇದರಲ್ಲಿ ಯಾವುದು ಎಂದು ವಕೀಲರ ಜೊತೆಗೆ ಮಾತನಾಡುತ್ತೇನೆ. ಕೇಸ್‌ನ ತನಿಖೆಗೆ ಹೈಕೋರ್ಟ್ ತಡೆ ನೀಡಿದ್ದು ಬಹಳ ಸಂತೋಷವಾಗಿದೆ. ಕೋರ್ಟ್ ಮೇಲೆ, ನ್ಯಾಯದ ಮೇಲೆ ನನಗೆ ನಂಬಿಕೆ ಇದೆ ಎಂದು ಹೇಳಿದ್ದರು. ನ್ಯಾಷನಲ್ ಹೆರಾಲ್ಡ್ ಕೇಸ್‌ಗೆ ಸಂಬಂಧಪಟ್ಟಂತೆ ನೋಟಿಸ್ ಬಂದಿದೆ. ನಾನು ತುಂಬಾ ಬ್ಯುಸಿಯಾಗಿದ್ದೆ. ವಕೀಲರ ಜೊತೆ ಮಾತನಾಡುತ್ತೇನೆ. ಹೈಕೋರ್ಟ್‌ನಿಂದ ಯಾವ ಆದೇಶ ಬಂದಿದೆ ಎಂದು ಮಾಹಿತಿ ಇಲ್ಲ. ವಕೀಲರಿಂದ ಮಾಹಿತಿ ಪಡೆದು ಈ ಬಗ್ಗೆ ಮಾತನಾಡುತ್ತೇನೆ ಎಂದಿದ್ದರು.
ಪ್ರಕರಣದ ಹಿನ್ನೆಲೆ
ಎರಡು ವರ್ಷಗಳ ಹಿಂದೆ, ಅಂದರೆ ಅಕ್ಟೋಬರ್ 2020ರಲ್ಲಿ ಡಿಕೆಶಿ ವಿರುದ್ಧ ಸಿಬಿಐ ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣ ದಾಖಲಾಗಿತ್ತು. ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬದ ಸದಸ್ಯರು ₹ 74.93 ಕೋಟಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎನ್ನುವುದು ಸಿಬಿಐ ಆರೋಪಿಸಲಾಗಿತ್ತು. ಮಾರ್ಚ್ 2020ರಿಂದ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಬಿಐ ಅಕ್ಟೋಬರ್ 5, 2020ರಲ್ಲಿ ದೆಹಲಿ, ಮುಂಬೈ ಸೇರಿದಂತೆ 14 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ, ಕಂಪ್ಯೂಟರ್ ಹಾರ್ಡ್ಡಿಸ್ಕ್, ₹ 57 ಲಕ್ಷ ನಗದು ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು.
ಇದನ್ನೂ ಓದಿ: DK Shivakumar: ಆದಾಯ ಮೀರಿದ ಆಸ್ತಿ; ಸಿಬಿಐ ಪ್ರಕರಣ ರದ್ದುಕೋರಿ ಹೈಕೋರ್ಟ್ಗೆ ಡಿಕೆ ಶಿವಕುಮಾರ್ ಅರ್ಜಿ
ನಂತರದ ದಿನಗಳಲ್ಲಿ ಜಾರಿ ನಿರ್ದೇಶನಾಲಯವು ಡಿ.ಕೆ.ಶಿವಕುಮಾರ್ ಆಸ್ತಿ ಗಳಿಕೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ಆರಂಭಿಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಾರಿ ದೆಹಲಿಯ ಇಡಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ವಿಚಾರಣೆ ಎದುರಿಸಿದ್ದರು. ಜೈಲಿಗೂ ಹೋಗಿದ್ದರು.
ಏಪ್ರಿಲ್ 2013ರಿಂದ ಏಪ್ರಿಲ್ 2018ರ ಅವಧಿಯಲ್ಲಿ ಮಂತ್ರಿಯಾಗಿದ್ದಾಗ ಡಿ.ಕೆ.ಶಿವಕುಮಾರ್ ಮತ್ತು ಕುಟುಂಬ ಸದಸ್ಯರು ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮಾಡಿದ್ದಾರೆ ಎನ್ನುವ ಆರೋಪ ಎದುರಿಸಿದ್ದರು. ಸಿಬಿಐ ದಾಖಲಿಸಿರುವ ಎಫ್ಐಆರ್ ಆಧಾರದಲ್ಲಿಯೇ ಇಡಿ ಸಹ ತನಿಖೆ ನಡೆಸುತ್ತಿದೆ. ಏಕಕಾಲಕ್ಕೆ ಎರಡು ತನಿಖಾ ಸಂಸ್ಥೆಗಳು ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಇಂಥದ್ದೇ ಬೆಳವಣಿಗೆ ನಡೆಯಬಹುದು ಎಂದು ಹೇಳಲು ಸಾಧ್ಯವಿಲ್ಲ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:30 pm, Fri, 24 March 23