DK Shivakumar: ವರುಣಾದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್; ಡಿಕೆ ಶಿವಕುಮಾರ್ ಸುಳಿವು

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್ ನೀಡುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.

DK Shivakumar: ವರುಣಾದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್; ಡಿಕೆ ಶಿವಕುಮಾರ್ ಸುಳಿವು
ಡಿಕೆ ಶಿವಕುಮಾರ್
Follow us
|

Updated on: Feb 21, 2023 | 8:24 AM

ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್ ನೀಡುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಸುಳಿವು ನೀಡಿದ್ದಾರೆ. ಮೇಘಳಾಪುರದಲ್ಲಿ ಮಾತನಾಡಿದ ಅವರು, ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ನಿಮ್ಮ ಶಾಸಕರಾಗಿರುವುದು ಭಾಗ್ಯ. ಸಿದ್ದರಾಮಯ್ಯ ಅವರಿಗೆ ಎಲ್ಲಿ ಬೇಕಾದರೂ ಚುನಾವಣೆಗೆ ನಿಂತುಕೊಳ್ಳುವ ಶಕ್ತಿ ನೀಡಿದ್ದೀರಿ. ವರುಣಾ ಕ್ಷೇತ್ರದ ಜನರ ಸಹಾಯ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಸೀರೆ, ಸೈಕಲ್ ಬಿಟ್ಟರೆ ಬೇರೆ ಏನು ಕೊಡಲಿಲ್ಲ ಎಂದ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವರುಣಾ ಕ್ಷೇತ್ರದಿಂದ ಸದ್ಯ ಯತೀಂದ್ರ ಒಬ್ಬರೇ ಅರ್ಜಿ ಹಾಕಿದ್ದಾರೆ. ಈ ಬಾರಿ ವರುಣಾದಲ್ಲಿ ಯತೀಂದ್ರ ಅವರನ್ನು ಹೆಚ್ಚು ಮತ ನೀಡಿ ಗೆಲ್ಲಿಸಿ ಎಂದು ಡಿಕೆಶಿ ಮತದಾರರಲ್ಲಿ ಮYathindra Siddaramaiahನವಿ ಮಾಡಿದ್ದಾರೆ.

ಇದನ್ನೂ ಓದಿ: D Roopa Moudgil: ಯಾರು ಡಿ ರೂಪಾ ಮೌದ್ಗಿಲ್? ರೋಹಿಣಿ ಸಿಂಧೂರಿ ಜತೆ ಕದನಕ್ಕೆ ಕಾರಣವೇನು? ಇಲ್ಲಿದೆ ವಿವರ

ಸಿದ್ದರಾಮಯ್ಯ ಅವರು ಈ ಬಾರಿ ಕೋಲಾರದಿಂದ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದ್ದು, ಅದಕ್ಕಾಗಿ ಬಿರುಸಿನ ಸಿದ್ಧತೆಯೂ ನಡೆಯುತ್ತಿದೆ. ಈಗಾಗಲೇ ಸಿದ್ದರಾಮಯ್ಯ ಬೆಂಬಲಿಗರು ಕೋಲಾರದಲ್ಲಿ ಚುನಾವಣೆ ಸಿದ್ಧತೆ, ಪ್ರಚಾರ ಆರಂಭಿಸಿದ್ದಾರೆ.

ಮುಖ್ಯಮಂತ್ರಿ ಹುದ್ದೆ ಆಸೆ ಬಿಚ್ಚಿಟ್ಟಿದ್ದ ಡಿಕೆಶಿ

ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಸೋಮವಾರ ಮಾತನಾಡಿದ್ದ ಡಿಕೆಶಿ, ಇನ್ನು ಕೇವಲ 50 ದಿನಗಳ ಕಾಲ ಮಾತ್ರ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇರುತ್ತದೆ. 50 ದಿನಗಳ ಬಳಿಕ ನಿಮ್ಮ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ಮೂರನೇ ಮಹಡಿಗೆ ಬಂದು ನನ್ನನ್ನು ಭೇಟಿಯಾಗಬೇಕು ಎಂದು ಹೇಳಿದ್ದರು. ಈ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ಎಂಬುದನ್ನು ಬಹಿರಂಗಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ