ತಮ್ಮ ವಿರುದ್ಧದ ಕಮಿಷನ್​ ಆರೋಪಕ್ಕೆ ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲೇ ಖಡಕ್ ಸಂದೇಶ ರವಾನಿಸಿದ ​ಡಿಕೆ ಶಿವಕುಮಾರ್

ಇನ್ನೇನು ಸರ್ಕಾರ ಅಧಿಕಾರಕ್ಕೆ ಬಂದು ಎರಡೇ ತಿಂಗಳು ಆಗಿಲ್ಲ ಆಗಲೇ ಡಿಸಿಎಂ ವಿರುದ್ಧ ಇದೆಂಥಾ ಆರೋಪವೆಂದು ಸ್ವಪಕ್ಷದ ನಾಯಕರೇ ಮಾತನಾಡಿಕೊಳ್ಳುವಂತೆ ಮಾಡಿತ್ತು. ಗುತ್ತಿಗೆದಾರರ ಆರೋಪದಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು. ಇವೆಲ್ಲವುದಕ್ಕೆ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಯ ತಮ್ಮ ಮೇಲೆ ಕೇಳಿಬಂದ ಆರೋಪಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರಿಗೆ ಒಂದು ಸಂದೇಶ ರವಾನಿಸಿದ್ದಾರೆ.

ತಮ್ಮ ವಿರುದ್ಧದ ಕಮಿಷನ್​ ಆರೋಪಕ್ಕೆ ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲೇ ಖಡಕ್ ಸಂದೇಶ ರವಾನಿಸಿದ ​ಡಿಕೆ ಶಿವಕುಮಾರ್
ಕಾಂಗ್ರೆಸ್​ ಸಭೆಯಲ್ಲಿ ಡಿಕೆ ಶಿವಕುಮಾರ್ ಮಾತನಾಡುತ್ತಿರುವುದು
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on:Aug 14, 2023 | 3:14 PM

ಬೆಂಗಳೂರು, (ಆಗಸ್ಟ್ 14): ಬಿಬಿಎಂಪಿ ಗುತ್ತಿಗೆರಾರರ ಬಾಕಿ ಬಿಲ್ ಬಿಡುಗಡೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ (DK Sivakumar) ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನುವ ಆರೋಪ ರಾಜ್ಯ ರಾಜಕಾರಣದಲ್ಲಿ ಮಾತ್ರವಲ್ಲ, ಕಾಂಗ್ರೆಸ್​ನಲ್ಲೇ ಸಂಚಲನಕ್ಕೆ ಕಾರಣವಾಗಿದೆ. ಇನ್ನೇನು ಸರ್ಕಾರ ಅಧಿಕಾರಕ್ಕೆ ಬಂದು ಎರಡೇ ತಿಂಗಳು ಆಗಿಲ್ಲ ಆಗಲೇ ಡಿಸಿಎಂ ವಿರುದ್ಧ ಇದೆಂಥಾ ಆರೋಪವೆಂದು ಸ್ವಪಕ್ಷದ ನಾಯಕರೇ ಮಾತನಾಡಿಕೊಳ್ಳುವಂತೆ ಮಾಡಿತ್ತು. ಗುತ್ತಿಗೆದಾರರ ಆರೋಪದಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು. ಇವೆಲ್ಲವುದಕ್ಕೆ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಯ ತಮ್ಮ ಮೇಲೆ ಕೇಳಿಬಂದ ಆರೋಪಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರಿಗೆ ಒಂದು ಸಂದೇಶ ರವಾನಿಸಿದ್ದಾರೆ. ಇಂದು (ಆಗಸ್ಟ್ 14) ಬೆಂಗಳೂರಿನ ಕೆಪಿಸಿಸಿ ನೂತನ ಕಟ್ಟಡದಲ್ಲಿ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ನಾನು ಯಾವುದೇ ತಪ್ಪು ಮಾಡಿಲ್ಲ. ಸೋನಿಯಾ ಗಾಂಧಿಯೇ ತನ್ನ ಬೆನ್ನಿಗಿದ್ದಾರೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಪಕ್ಷದೊಳಗಿನ ಟೀಕೆಗಳಿಗೆ ಸರ್ವ ಸದಸ್ಯರ ಸಭೆಯಲ್ಲಿ ಉತ್ತರ ಕೊಟ್ಟಿದ್ದಾರೆ. ಅಲ್ಲದೇ ಪರೋಕ್ಷವಾಗಿ ಹೈಕಮಾಂಡ್​ ನನ್ನ ಬೆಂಬಲಕ್ಕೆ ಇದೆ ಎಂದು ಮೆಸೇಜ್ ಪಾಸ್ ಮಾಡಿದ್ದಾರೆ.

ಡಿಕೆ ಶಿವಕುಮಾರ್​ ವಿರುದ್ದ ಕೆಲವು ಸ್ವಪಕ್ಷದ ಶಾಸಕರು ಬೇಸರಗೊಂಡಿದ್ದಾರೆ. ಬಸವರಾಜ ರಾಯರೆಡ್ಡಿ ಸೇರಿದಂತೆ ಹಲವರು ಪಕ್ಷದ ವಿರುದ್ದವೇ ಟೀಕೆ ಮಾಡಿದ್ದರು. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪಕ್ಷದೊಳಗಿನ ಟೀಕೆಗಳಿಗೆ ಸರ್ವ ಸದಸ್ಯರ ಸಭೆಯಲ್ಲಿ ಖಡಕ್ ಉತ್ತರ ಕೊಟ್ಟರು. ಇದರೊಂದಿಗೆ ಯಾವುದೇ ಗೊಂದಲಕ್ಕೀಡಾಗಬೇಡಿ. ನಾನೇನು ತಪ್ಪು ಮಾಡಿಲ್ಲ ಎಂದು ಸ್ವಪಕ್ಷದ ನಾಯಕರಿಗೆ ಸಂದೇಶ ರವಾನಿಸಿದರು.

ಇದನ್ನೂ ಓದಿ: ಬಿಬಿಎಂಪಿ ಗುತ್ತಿಗೆದಾರ ಯೂಟರ್ನ್​, ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ ಹೇಮಂತ್​ ಕುಮಾರ್

ಸರ್ಕಾರ ಬರುವಾಗ ಹೇಗೆ ಹೋರಾಟ ಇತ್ತೋ ಅದಕ್ಕಿಂತ ಹೆಚ್ಚು ಹೋರಾಟ ಮಾಡಬೇಕು. ಕಳೆದ ಚುನಾವಣೆಗಿಂತ ಹೆಚ್ಚು ಶೇಕಡಾವಾರು ಮತ ನಮಗೆ ಬರಬೇಕು. ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ವಿವಿಧ ಸಮಿತಿಗಳಲ್ಲಿ ಕಾರ್ಯಕರ್ತರ ನೇಮಕ ಮಾಡುತ್ತೇವೆ. ರಾಜ್ಯ ಮಟ್ಟದ ಪದಾಧಿಕಾರಿಗಳಿಗು ಸಮಿತಿಗೆ ಹೆಸರು ಶಿಫಾರಸು ಮಾಡಲು ಅವಕಾಶ ಇದೆ. ಇಂಧನ ಇಲಾಖೆಯಲ್ಲಿ ಕಾರ್ಯಕರ್ತರಿಗೆ ಸಮಿತಿಗಳಲ್ಲಿ ಅವಕಾಶ ಮಾಡಿಕೊಡುತ್ತೇವೆ. ನಾಯಕರಿಗೆ ಅಧಿಕಾರದ ಜೊತೆಗೆ ಕಾರ್ಯಕರ್ತರಿಗೂ ಅಧಿಕಾರ ನೀಡುವ ನಿರ್ಧಾರ ಮಾಡಿದ್ದೇವೆ. ನಿಗಮ ಮಂಡಳಿಗಳಿಗೆ ಅರ್ಜಿ ಹಾಕಿದ ನಾಯಕರಿಗೆ ಬೂತ್ ಮಟ್ಟದಲ್ಲಿ ಎಷ್ಟು ಮತ ಪಡೆದಿದ್ದಾರೆ ಎಂದು ಮಾಹಿತಿ ಪಡೆದುಕೊಳ್ಳುತ್ತೇನೆ ಎಂದರು.

ದಕ್ಷಿಣ ಭಾರತದಲ್ಲಿ ಬಿಜೆಪಿಯ ಬಾಗಿಲು ಮುಚ್ಚಿದೆ. ಯೋಗ ಬರುತ್ತದೆ, ಯೋಗಕ್ಕಿಂತ ಯೋಗಕ್ಷೇಮ ಬಹಳ ಮುಖ್ಯ. ಬಂದಿರುವ ಯೋಗವನ್ನು ಕಾಪಾಡಿಕೊಂಡು ಹೋಗಬೇಕು. ಟೀಂ ಎಫರ್ಟ್​​ನಿಂದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದೇವೆ. 224ರ ಪೈಕಿ 218 ಅಭ್ಯರ್ಥಿಗಳಿಗೆ ಒಮ್ಮತದ ಟಿಕೆಟ್ ನೀಡಿದ್ದೆವು. ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಎಂಬುದಷ್ಟೇ ನಮ್ಮ ಗುರಿಯಾಗಿತ್ತು. ವೈಯಕ್ತಿಕ ಭಿನ್ನಾಭಿಪ್ರಾಯವಿದ್ದರೂ ಕೂಡ ನಾವು ಕೆಲಸ ಮಾಡಿದ್ದೇವೆ. ಹಳೇ ಪದ್ಧತಿಯಲ್ಲೇ ಪಕ್ಷ ನಡೆಯುತ್ತೆ ಅಂತಾ ಕೆಲವರು ಭಾವಿಸಿದ್ದರು. ನನ್ನ ಆಲೋಚನೆ ಇನ್ನೂ ಡೀಪ್ ಆಗಿತ್ತು. ಇಡೀ ದೇಶಕ್ಕೆ ಕರ್ನಾಟಕ ಚುನಾವಣೆ ಫಲಿತಾಂಶ ಸಂದೇಶ ಕಳಿಸಿದ್ದು, ಕರ್ನಾಟಕ ಮಾಡಲ್ ಪಾಲಿಸಿ ಎಂದು ಹೈಕಮಾಂಡ್ ಸೂಚಿಸಿದೆ ಎಂದು ಹೇಳಿದರು. ಈ ಮೂಲಕ ಮುಂಬರುವ ,ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಕರೆ ನೀಡಿದರು.

ಪ್ರತಿ ಬೂತ್ ನಲ್ಲೂ ಬೂತ್ ಸಮಿತಿ, ಪಂಚಾಯತಿ ಮಟ್ಟದಲ್ಲಿ ಸಮಿತಿ ಮಾಡುವುದಕ್ಕೆ ಸೂಚನೆ ನೀಡಿದ್ದೆವು. ನಮ್ಮ ಆಚಾರ ವಿಚಾರ ಇಲ್ಲಿಗೇ ಮುಗಿಯಲಿಲ್ಲ. ಇಡೀ ದೇಶಕ್ಕೆ ಕರ್ನಾಟಕದ ಫಲಿತಾಂಶ ಸಂದೇಶ ಕಳಿಸಿದೆ. ಇಂಡಿಯಾ ರಕ್ಷಣೆಗೆ ಕರ್ನಾಟಕದಲ್ಲೇ ಪ್ರತಿಜ್ಞೆ ಮಾಡಲಾಗಿದೆ ಎಂದು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:10 pm, Mon, 14 August 23

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್