ಶಕ್ತಿ ಯೋಜನೆ ಉದ್ಘಾಟನೆ ಕಾರ್ಯಕ್ರದಲ್ಲೇ ಬಿಜೆಪಿ, ಜೆಡಿಎಸ್​ ಟೀಕೆಗಳಿಗೆ ತಿರುಗೇಟು ನೀಡಿದ ಡಿಕೆ ಶಿವಕುಮಾರ್

ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ 5 ಗ್ಯಾರಂಟಿ ಕೊಟ್ಟಿದ್ದೆವು, ಇಂದು ಶಕ್ತಿ ಯೋಜನೆಗೆ ಚಾಲನೆ ನೀಡಿದ್ದು, ಇನ್ನೂ ಎರಡು ಮೂರು ತಿಂಗಳಲ್ಲೇ ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರ್ತೇವೆ ಎಂದರು.

ಶಕ್ತಿ ಯೋಜನೆ ಉದ್ಘಾಟನೆ ಕಾರ್ಯಕ್ರದಲ್ಲೇ ಬಿಜೆಪಿ, ಜೆಡಿಎಸ್​ ಟೀಕೆಗಳಿಗೆ ತಿರುಗೇಟು ನೀಡಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​
Follow us
ಕಿರಣ್ ಹನುಮಂತ್​ ಮಾದಾರ್
|

Updated on:Jun 11, 2023 | 12:48 PM

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆಯಾದ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ (Free Bus Travel For Women Scheme) ರಾಜ್ಯದಾದ್ಯಂತ ಚಾಲನೆ ಸಿಕ್ಕಿದೆ. ಇಂದು(ಜೂನ್ 11) ವಿಧಾನಸೌಧ ಮುಂಭಾಗ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ(Shakti yojana) ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಾಲನೆ ನೀಡಿದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(D. K Shivakumar) ‘ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ 5 ಗ್ಯಾರಂಟಿ ಕೊಟ್ಟಿದ್ದೆವು, ಇಂದು ಶಕ್ತಿ ಯೋಜನೆಗೆ ಚಾಲನೆ ನೀಡಿದ್ದೇವೆ. ಈ ಕಾರ್ಯಕ್ರಮವು ಬೆಂಗಳೂರಿನಲ್ಲಿ ಮಾತ್ರ ನಡೆಯುತ್ತಿಲ್ಲ, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಈ ಕಾರ್ಯಕ್ರಮ ನಡೆಯುತ್ತಿದೆ. ರಾಜ್ಯದ ಜನರು ನಮ್ಮ ಮೇಲೆ ನಂಬಿಕೆ ಇಟ್ಟು ಅಧಿಕಾರ ಕೊಟ್ಟಿದ್ದು, ಈ ಮೂಲಕ ಅವರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು.

ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತದೆ

ನಮ್ಮ ಸರ್ಕಾರ ನೀಡುತ್ತಿರುವ ಐದು ಗ್ಯಾರಂಟಿಗಳ ಬಗ್ಗೆ ಬಿಜೆಪಿ, ಜೆಡಿಎಸ್​​​ ಸ್ನೇಹಿತರು ಟೀಕೆಗಳ ಸುರಿಮಳೆಯನ್ನೇ ಸುರಿಸ್ತಿದ್ದಾರೆ. ವಿಪಕ್ಷಗಳಿಗೆ ಉತ್ತರ ನೀಡುವ ಸಾಮರ್ಥ್ಯ ನಮ್ಮ ಬಳಿ ಇಲ್ಲ. ಬಹಳ ಚರ್ಚೆ ಮಾಡಿಯೇ ನಾವು ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ. ಇದರಿಂದ ನಮ್ಮ ರಾಜ್ಯ ದಿವಾಳಿ ಆಗುತ್ತೆಂದು ಬಿಜೆಪಿಯವರು ಹೇಳ್ತಿದ್ದಾರೆ, ಆದರೆ ಈಗ ಮಧ್ಯಪ್ರದೇಶದಲ್ಲಿರುವ ಅವರದ್ದೇ ಬಿಜೆಪಿ ಸರ್ಕಾರ ಅಲ್ಲಿನ ಮಹಿಳೆಯರಿಗೆ $1 ಸಾವಿರ ಕೊಡುವುದಾಗಿ ಹೇಳಿದ್ದಾರೆ. ಅದೇನೆ ಇರಲಿ ನಾವು ರಾಜ್ಯದ ಜನರಿಗೆ ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದರು.

ಇದನ್ನೂ ಓದಿ:ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ, ಬಸ್ ಹತ್ತುವ ಮುನ್ನ ಇದು ನಿಮ್ಮ ಬಳಿ ಇರ್ಬೇಕು

ಹೆಣ್ಣು ಕುಟುಂಬದ ಕಣ್ಣು ಅನ್ನೋ ಹಾಗೆ ಸರ್ಕಾರದ ಕಣ್ಣು ವಂದಿತ ಶರ್ಮ

ಇದೇ ವೇಳೆ ಮಾತನಾಡುತ್ತಾ ‘ಹೆಣ್ಣು ಕುಟುಂಬದ ಕಣ್ಣು ಅನ್ನೋ ಹಾಗೆ ಸರ್ಕಾರದ ಕಣ್ಣು ವಂದಿತ ಶರ್ಮ, ಜನರ ಸೇವೆ ಜನಾರ್ಧನ ಸೇವೆ ಜನರ ಕೆಲಸ ದೇವರ ಕೆಲಸ ಅಂತ ಕೆಂಗಲ್ ಹನುಮಂತಯ್ಯ ಬರೆಸಿದ್ದಾರೆ. ದೇಶಕ್ಕೆ ಇತಿಹಾಸ ಸ್ವಾತಂತ್ರ್ಯ ಬದಲಾವಣೆ ತಂದುಕೊಟ್ಟ ಪಕ್ಷ ನಮ್ಮದು. ಡಬಲ್ ಇಂಜಿನ್ ಸರ್ಕಾರ ಇದ್ದರೂ ಕೂಡ ನಮ್ಮ ಆಡಳಿತ, ನುಡಿ, ನಡೆ ಮೇಲೆ ಜನ ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾವು ಕೇವಲ ಕೆಲಸಗಳ ಮೂಲಕವೇ ನಾವು ಉತ್ತರ ನೀಡ್ತೇವೆ. ಎರಡು ಮೂರು ತಿಂಗಳಲ್ಲೇ ಎಲ್ಲ ಗ್ಯಾರಂಟಿಗಳ ಜಾರಿಗೆ ತರ್ತೇವೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Sun, 11 June 23

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ